ಬ್ರೇಕಿಂಗ್ ನ್ಯೂಸ್
01-06-26 12:40 pm HK News Staffer ಕ್ರೈಂ
ಬಂಟ್ವಾಳ, ಜೂನ್ 1: ಪುಂಜಾಲಕಟ್ಟೆ ಠಾಣೆ ವ್ಯಾಪ್ತಿಯ ಪಿಲಾತಬೆಟ್ಟು ಗ್ರಾಮದ ಕಾಡಬೆಟ್ಟು ಎಂಬಲ್ಲಿ ಭಾನುವಾರ ರಾತ್ರಿ ಸಣ್ಣ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಯುವಕನೊಬ್ಬ ತನ್ನ ಚಿಕ್ಕಪ್ಪನ ಕುತ್ತಿಗೆಗೆ ಬಿಯರ್ ಬಾಟಲಿಯಿಂದ ಇರಿದು ಕೊಲೆಗೈದಿದ್ದಾನೆ.
ಮನೆಯಲ್ಲಿ ದೈವಿಕ ಕಾರ್ಯಕ್ರಮ ನಡೆಸಿದ ಬಳಿಕ ಊಟದ ವೇಳೆ ಮದ್ಯದ ಅಮಲಿನಲ್ಲಿ ಯುವಕರು ಮಾತಾಡಿಕೊಂಡಿದ್ದು ಗಲಾಟೆ ಮಾಡಬೇಡಿ ಎಂದಿದ್ದಕ್ಕೆ ತನ್ನ ಸ್ವಂತ ಚಿಕ್ಕಪ್ಪನಿಗೇ ಇರಿದಿದ್ದಾನೆ. ಕಾಡಬೆಟ್ಟು ನಿವಾಸಿ ಮಧುಸೂಧನ ( 38) ಕೊಲೆಯಾದವರಾಗಿದ್ದು, ಅವರ ಅಣ್ಣ ಕೇಶವ ಪೂಜಾರಿಯ ಪುತ್ರ ರಾಹುಲ್ (23) ಕೊಲೆಗೈದ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾನೆ. ಕೇಶವ ಪೂಜಾರಿ ಅವರ ಮನೆಯಲ್ಲಿ ನಿನ್ನೆ ರಾತ್ರಿ ದೈವಕ್ಕೆ ವಾರ್ಷಿಕ ತಂಬಿಲ ಸೇವೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಕೇಶವ ಪೂಜಾರಿ ಅವರ ಪುತ್ರ ರಾಹುಲ್ (23) ಮತ್ತು ಆತನ ಸ್ನೇಹಿತರು ಮನೆಯ ಹೊರಗಡೆ ಮದ್ಯಸೇವಿಸಿ ಗದ್ದಲ ಎಬ್ಬಿಸುತ್ತಿದ್ದರು. ಮನೆಯಲ್ಲಿ ದೈವದ ಕಾರ್ಯಕ್ರಮ ನಡೆಯುತ್ತಿರುವುದರಿಂದ ಹೊರಗೆ ಗಲಾಟೆ ಮಾಡದಂತೆ ಚಿಕ್ಕಪ್ಪ, ವೃತ್ತಿಯಲ್ಲಿ ಇಲೆಕ್ಟ್ರಿಷಿಯನ್ ಆಗಿದ್ದ ಮಧುಸೂಧನ (38) ಆಕ್ಷೇಪ ವ್ಯಕ್ತಪಡಿಸಿ ಬುದ್ಧಿವಾದ ಹೇಳಿದ್ದಾರೆ.
ಚಿಕ್ಕಪ್ಪ ಜೊತೆಗೆ ಮಾತಿಗೆ ಮಾತು ಬೆಳೆಸುತ್ತ ಕೋಪಗೊಂಡ ರಾಹುಲ್ ತನ್ನ ಕೈಯಲ್ಲಿದ್ದ ಬಿಯರ್ ಬಾಟಲಿಯಿಂದ ಮಧುಸೂಧನ ಅವರ ಕುತ್ತಿಗೆಯ ಭಾಗಕ್ಕೆ ಬಲವಾಗಿ ಇರಿದು ಸ್ಥಳದಿಂದ ಪರಾರಿಯಾಗಿದ್ದಾನೆ. ಬಿಯರ್ ಬಾಟಲಿ ಚುಚ್ಚಿದ ರಭಸಕ್ಕೆ ತೀವ್ರ ರಕ್ತಸ್ರಾವ ಉಂಟಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಮಧುಸೂಧನ ಅವರನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಿದರೂ, ಅತಿಯಾದ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ.
ಮಧುಸೂಧನ ಅವರು ಅವಿವಾಹಿತರಾಗಿದ್ದು, ಇಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು. ರಾಹುಲ್ ಪೆಟ್ರೋಲ್ ಬಂಕ್ ಉದ್ಯೋಗಿಯಾಗಿದ್ದ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm