ಬ್ರೇಕಿಂಗ್ ನ್ಯೂಸ್
05-06-26 09:58 pm HK News Staffer ಕ್ರೈಂ
ಬಂಟ್ವಾಳ, ಜೂನ್ 05: ಮೆಲ್ಕಾರ್ ಫ್ಲೈಓವರ್ ಸಮೀಪ ಕಾರಿನಲ್ಲಿ ಸಾಗಿಸಲಾಗುತ್ತಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತುವನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಜೂನ್ 4ರಂದು ಸಂಜೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ನೇತೃತ್ವದ ತಂಡವು ಮೆಲ್ಕಾರ್ ಫ್ಲೈಓವರ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಅನುಮಾನಾಸ್ಪದ ಕಾರೊಂದನ್ನು ತಡೆದು ಪರಿಶೀಲನೆ ನಡೆಸಿತು. ಈ ವೇಳೆ ಕಾರಿನೊಳಗೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನ ಪತ್ತೆಯಾಗಿದ್ದು, ಪ್ರಯಾಣಿಕರನ್ನು ವಿಚಾರಣೆಗೊಳಪಡಿಸಲಾಯಿತು.
ಮಾರಾಟಕ್ಕೆ ಸಾಗಿಸುತ್ತಿದ್ದ ಡ್ರಗ್ಸ್
ವಿಚಾರಣೆಯಲ್ಲಿ ಆರೋಪಿಗಳು ಬಂಟ್ವಾಳ ಪುದು ನಿವಾಸಿ ಎ. ಜುಬೈರ್ (39), ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಿ. ಮೂಡ ನಿವಾಸಿ ಬಿ.ಎಂ. ರಶೀದ್ ಅಲಿಯಾಸ್ ಮಾರಿಮುತ್ತು ಎಂದು ಗುರುತಿಸಲಾಗಿದೆ.
ಆರೋಪಿಗಳು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಎಂಡಿಎಂಎ ಸಾಗಿಸುತ್ತಿರುವುದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
76 ಗ್ರಾಂ ಎಂಡಿಎಂಎ ವಶ
ತಪಾಸಣೆ ವೇಳೆ ಆರೋಪಿಗಳ ಬಳಿಯಿಂದ ಹಾಗೂ ಕಾರಿನೊಳಗಿಂದ ಅಂದಾಜು ₹7,64,000 ಮೌಲ್ಯದ 76 ಗ್ರಾಂ 40 ಮಿಲಿಗ್ರಾಂ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಅಲ್ಲದೆ ಮಾದಕ ವಸ್ತು ಸೇವನೆಗೆ ಬಳಸುವ ಸಾಧನಗಳನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದಕ್ಕೂ ಜೊತೆಗೆ ಆರೋಪಿಗಳ ಬಳಿಯಿದ್ದ ಮೂರು ಮೊಬೈಲ್ ಫೋನ್ಗಳು ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ KA-19 MR-1997 ನೋಂದಣಿ ಸಂಖ್ಯೆಯ ಕಾರನ್ನು ಜಪ್ತಿ ಮಾಡಲಾಗಿದೆ.
ಬಂಧಿತ ಆರೋಪಿಗಳ ವಿರುದ್ಧ ಮಾದಕ ದ್ರವ್ಯ ಮತ್ತು ಮನೋವಿಕಾರಿ ವಸ್ತುಗಳ ನಿಯಂತ್ರಣ ಕಾಯ್ದೆ (NDPS Act) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಎಂಡಿಎಂಎ ಎಲ್ಲಿಂದ ತರಲಾಗಿತ್ತು, ಯಾರಿಗೆ ಮಾರಾಟ ಮಾಡಲು ಯೋಜನೆ ರೂಪಿಸಲಾಗಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm