ಬ್ರೇಕಿಂಗ್ ನ್ಯೂಸ್
06-06-26 05:04 pm HK News Staffer ಕ್ರೈಂ
ಮಂಗಳೂರು, ಜೂನ್ 6: ನ್ಯಾಯಾಲಯದ ಮುಂದೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಗೂ ಜಾಮೀನು ರಹಿತ ವಾರಂಟ್ ಎದುರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಕದ್ರಿ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಕೋಟೆ ಬಡಾವಣೆಯ ನಿವಾಸಿ ಶ್ರೀನಿವಾಸ ಸಿರಯಾನ್ (56) ಹಾಗೂ ಅರಕಲಗೂಡು ತಾಲೂಕಿನ ದೊಡ್ಡಗಾವನಹಳ್ಳಿ ಗ್ರಾಮದ ಉಪೇಂದ್ರ ಡಿ.ಸಿ. ಅಲಿಯಾಸ್ ಅಭಿಷೇಕ್ (28) ಎಂದು ಗುರುತಿಸಲಾಗಿದೆ.
ಶ್ರೀನಿವಾಸ ಸಿರಯಾನ್ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ 2017ರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ 6ನೇ ಜೆಎಂಎಫ್ಸಿ ನ್ಯಾಯಾಲಯದಲ್ಲಿ ಸಿ.ಸಿ. ನಂ.1108/2025 ಪ್ರಕರಣ ವಿಚಾರಣೆಯಲ್ಲಿತ್ತು. ನ್ಯಾಯಾಲಯಕ್ಕೆ ಹಾಜರಾಗದೇ ಇದ್ದ ಹಿನ್ನೆಲೆಯಲ್ಲಿ ಆತನ ವಿರುದ್ಧ ಹಲವು ಬಾರಿ ಜಾಮೀನು ರಹಿತ ವಾರಂಟ್ ಜಾರಿಗೊಳಿಸಲಾಗಿತ್ತು.
ಇನ್ನೋರ್ವ ಆರೋಪಿ ಉಪೇಂದ್ರ ಡಿ.ಸಿ. ಅಲಿಯಾಸ್ ಅಭಿಷೇಕ್ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ 2019ರಲ್ಲಿ ಕಳ್ಳತನ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿ.ಸಿ. ನಂ.815/2021ರ ಅಡಿಯಲ್ಲಿ ವಿಚಾರಣೆ ನಡೆಯುತ್ತಿದ್ದು, ನ್ಯಾಯಾಲಯಕ್ಕೆ ಗೈರಾಗಿದ್ದ ಕಾರಣ ಆತನ ವಿರುದ್ಧವೂ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿತ್ತು.
ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆ ;
ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಜೂನ್ 6ರಂದು ಕದ್ರಿ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಪತ್ತೆ ಹಚ್ಚಿ ಬಂಧಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am