ಬ್ರೇಕಿಂಗ್ ನ್ಯೂಸ್
06-06-26 09:01 pm HK News Staffer ಕ್ರೈಂ
ಶಿವಮೊಗ್ಗ, ಜೂನ್ 6: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಖಾಸಗಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟು ಕರಕಲಾದ ಘಟನೆ ಶಿವಮೊಗ್ಗ-ಉಡುಪಿ ಗಡಿಭಾಗದ ಹುಲಿಕಲ್ ಘಾಟ್‌ನಲ್ಲಿ ನಡೆದಿದೆ. ಸಮಯಪ್ರಜ್ಞೆ ಮೆರೆದ ಚಾಲಕ ಮತ್ತು ನಿರ್ವಾಹಕರಿಂದಾಗಿ ಬಸ್‌ನಲ್ಲಿದ್ದ 17 ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಹುಲಿಕಲ್ ಘಾಟ್‌ನಲ್ಲಿ ಈ ಅವಘಡ ಸಂಭವಿಸಿದೆ. ಉಡುಪಿಗೆ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ಹಾಗೂ ನಿರ್ವಾಹಕರು ತಕ್ಷಣವೇ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ.



ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿ ಧಗಧಗನೆ ಹೊತ್ತಿ ಉರಿದ ಪರಿಣಾಮ ವಾಹನ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಹುಲಿಕಲ್ ಘಾಟ್ ಕುಸಿತದ ಬಳಿಕ ಸಂಪರ್ಕ ಸಾರಿಗೆ ವ್ಯವಸ್ಥೆಯ ಭಾಗವಾಗಿ ಈ ಬಸ್ ಕಾರ್ಯನಿರ್ವಹಿಸುತ್ತಿತ್ತು ಎಂದು ತಿಳಿದುಬಂದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಗ್ನಿ ಅವಘಡದ ಪರಿಣಾಮ ಕೆಲಕಾಲ ಹುಲಿಕಲ್ ಘಾಟ್‌ನಲ್ಲಿ ಸಂಚಾರ ವ್ಯತ್ಯಯ ಉಂಟಾಯಿತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am