ಬ್ರೇಕಿಂಗ್ ನ್ಯೂಸ್
08-06-26 12:33 pm HK News Staffer ಕ್ರೈಂ
ಹಾಸನ, ಜೂನ್ 8: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರೌಡಿಶೀಟರ್ನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ನಗರದಲ್ಲಿ ನಡೆದಿದೆ. ಜಿಲ್ಲಾ ನ್ಯಾಯಾಲಯದ ಎದುರೇ ನಡೆದ ಈ ಕೃತ್ಯ ನಗರದಲ್ಲಿ ಆತಂಕ ಸೃಷ್ಟಿಸಿದೆ.
ಹಾಸನ ನಗರದ ಚನ್ನಪಟ್ಟಣ ಪ್ರದೇಶದಲ್ಲಿರುವ ಜಿಲ್ಲಾ ನ್ಯಾಯಾಲಯದ ಮುಂಭಾಗ ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಮಂಜೇಶ್ (43) ಕೊಲೆಯಾದ ರೌಡಿಶೀಟರ್ ಎಂದು ಗುರುತಿಸಲಾಗಿದೆ.
ಮಂಜೇಶ್ ಅವರ ತಾಯಿ ಹಾಸನ ಮೂಲದವರಾಗಿದ್ದು, ಕುಟುಂಬ ಬೆಂಗಳೂರಿನಲ್ಲಿ ನೆಲೆಸಿತ್ತು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿ ಗುರುತಿಸಿಕೊಂಡಿದ್ದ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆ ದುಷ್ಕರ್ಮಿಗಳು ಮಾರಕಾಸ್ತ್ರಗಳೊಂದಿಗೆ ದಾಳಿ ನಡೆಸಿದ್ದಾರೆ.
ಮುಖದ ಗುರುತು ಸಿಗದಂತೆ ತೀವ್ರವಾಗಿ ಹಲ್ಲೆ ನಡೆಸಿ ಕೊಲೆಗೈದ ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಘಟನೆ ನಡೆದ ರೀತಿ ಹಳೆಯ ವೈಷಮ್ಯ ಅಥವಾ ಗ್ಯಾಂಗ್ವಾರ್ ಶಂಕೆಗೆ ಕಾರಣವಾಗಿದೆ ಎಂದು ಹೇಳಲಾಗುತ್ತಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಆರೋಪಿಗಳ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ.
ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm