ಬ್ರೇಕಿಂಗ್ ನ್ಯೂಸ್
08-06-26 11:10 pm HK News Desk ಕ್ರೈಂ
ಮಂಗಳೂರು, ಜೂನ್ 8: ಬಂಟ ಮತ್ತು ಬಿಲ್ಲವ ಜಾತಿಗಳನ್ನು ಗುರಿಯಾಗಿಸಿ ಅವಮಾನಕಾರಿ ರೀತಿಯಲ್ಲಿ ಹೇಳಿಕೆ ನೀಡಿ ಜಾಲತಾಣದಲ್ಲಿ ವೈರಲ್ ಮಾಡಿರುವ ಆರೋಪದಲ್ಲಿ ಅನಿತಾ ಕಾಸರಗೋಡು ಎಂಬ ಮಹಿಳೆಯ ವಿರುದ್ಧ ನಗರದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ಬಿರುವೆರ್ ಕುಡ್ಲ ಸಂಘಟನೆಯ ರಾಕೇಶ್ ಎಂಬವರು ಬರ್ಕೆ ಠಾಣೆಗೆ ದೂರು ನೀಡಿ, ಅನಿತಾ ಎಂಬ ಮಹಿಳೆ ತನ್ನ ಫೇಸ್ಬುಕ್ ನಲ್ಲಿ ವಿಡಿಯೋ ಹರಿಯಬಿಟ್ಟು ಶೆಟ್ಟಿ ಮತ್ತು ಬಿಲ್ಲವ ಜಾತಿಯವರಷ್ಟು ಹಲ್ಕಟ್ ಬೇರೆ ಯಾರೂ ಇಲ್ಲ. ಇವರಿಗಿಂತ ಮುಸ್ಲಿಮರು ಆಗಬಹುದು, ಏನಾದ್ರೂ ಸಹಾಯ ಮಾಡುತ್ತಾರೆ ಎಂದು ನಿಂದಿಸಿ ವಿಡಿಯೋ ಮಾಡಿದ್ದಾರೆ. ಜಾತಿಗಳ ಮಧ್ಯೆ ವೈಷಮ್ಯ ಮೂಡಿಸಿ ಪ್ರಚೋದನಕಾರಿ ರೀತಿಯಲ್ಲಿ ಜನರನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ.


ಇದರಂತೆ ಬರ್ಕೆ ಠಾಣೆಯಲ್ಲಿ ಅನಿತಾ ಕಾಸರಗೋಡು ಎಂಬ ಮಹಿಳೆ ವಿರುದ್ಧ ಕಲಂ 196, 353(2) ಮತ್ತು 352 ಅಡಿ ಪೊಲೀಸರು ಕೇಸು ದಾಖಲಿಸಿದ್ದಾರೆ.
ಇದೇ ವೇಳೆ, ಬಿರುವೆರ್ ಕುಡ್ಲ ಸಂಸ್ಥಾಪಕ, ಅಧ್ಯಕ್ಷ ಉದಯ ಪೂಜಾರಿ ಅವರು ಅನಿತಾ ಕಾಸರಗೋಡು ಅವರನ್ನು ತಕ್ಷಣ ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಅವರ ಹೇಳಿಕೆಯಿಂದ ಲಕ್ಷಾಂತರ ಬಿಲ್ಲವ ಹಾಗೂ ಬಂಟ ಸಮುದಾಯದ ಜನರ ಧಾರ್ಮಿಕ ಮತ್ತು ಸಮುದಾಯದ ಭಾವನೆಗಳಿಗೆ ಧಕ್ಕೆಯಾಗಿದೆ. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಭಂಗ ತರುವಂತಹ ಹೇಳಿಕೆಗಳನ್ನು ನೀಡಿರುವ ಹಿನ್ನೆಲೆಯಲ್ಲಿ ಕಾನೂನು ಪ್ರಕಾರ ತ್ವರಿತ ಕ್ರಮ ಕೈಗೊಂಡು ಆರೋಪಿಯನ್ನು ಬಂಧಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm