ಬ್ರೇಕಿಂಗ್ ನ್ಯೂಸ್
10-06-26 01:48 pm HK News Staffer ಕ್ರೈಂ
ಉಡುಪಿ, ಜೂನ್ 10: ರೈಲ್ವೇ ನಿಲ್ದಾಣಗಳ ಸಮೀಪ ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿ ದರೋಡೆ ಮಾಡುತ್ತಿದ್ದ ಅಂತರಾಜ್ಯ ಮುಸುಕುಧಾರಿ ಕಳ್ಳರ ತಂಡ ‘TATTO – 313’ ಜಾಲವನ್ನು ಭೇದಿಸುವಲ್ಲಿ ಮಣಿಪಾಲ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ವೃತ್ತಿಪರ ಕಳ್ಳರನ್ನು ಬಂಧಿಸಿದ್ದು, ಅವರಿಂದ ಅಂದಾಜು ₹7.90 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಲಾಗಿದೆ. ಬೆಂಗಳೂರಿನ ಸಿಂಗಸಂದ್ರ ನಿವಾಸಿ ಆರ್. ದರ್ಶನ್ (25) ಹಾಗೂ ದಾವಣಗೆರೆ ಮೂಲದ ಚಂದ್ರು (28) ಬಂಧಿತರು.
ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ಮಂಚಿಕೋಡಿ ನಿವಾಸಿ ಅಮಿತಾ ಡ್ಯಾನಿಯಲ್ ಅವರು ಕಳೆದ ಫೆಬ್ರವರಿ 3ರಂದು ನಸುಕಿನ ವೇಳೆ ತಮ್ಮ ಮನೆಗೆ ಬೀಗ ಹಾಕಿ ತಾಯಿ ಮನೆಗೆ ತೆರಳಿದ್ದರು. ಫೆಬ್ರವರಿ 4ರಂದು ಮಧ್ಯಾಹ್ನ ಅವರ ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಪಕ್ಕದ ಮನೆಯವರು ಅಮಿತಾಗೆ ಮಾಹಿತಿ ನೀಡಿದ್ದರು. ಅಮಿತಾ ಅವರು ಬಂದು ಪರಿಶೀಲಿಸಿದಾಗ ಕಳ್ಳರು ಬಾಗಿಲು ಮುರಿದು ಒಳನುಗ್ಗಿ ಕಪಾಟಿನಲ್ಲಿದ್ದ 75 ಗ್ರಾಂ ತೂಕದ ₹7 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿತ್ತು. ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಕೈಗೆತ್ತಿಕೊಂಡ ಮಣಿಪಾಲ ಪೊಲೀಸ್ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡವು ತಾಂತ್ರಿಕ ಸುಳಿವುಗಳ ಆಧಾರದಲ್ಲಿ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿತು. ವಿಚಾರಣೆಯಲ್ಲಿ ಆರೋಪಿಗಳು ಕಳ್ಳತನ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ. ನ್ಯಾಯಾಲಯದಿಂದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದ ಅಧಿಕಾರಿಗಳು, ಕಳ್ಳರು ನೀಡಿದ ಸುಳಿವಿನ ಮೇರೆಗೆ ಶಿವಮೊಗ್ಗದ ಲಾಡ್ಜ್ ಒಂದರ ಕೊಠಡಿಯ ಮೇಲೆ ದಾಳಿ ನಡೆಸಿದ್ದು ಅಲ್ಲಿ ಕಳ್ಳರು ಬಚ್ಚಿಟ್ಟಿದ್ದ ಆಭರಣಗಳನ್ನು ವಶಪಡಿಸಿದ್ದಾರೆ.
5.06 ಲಕ್ಷ ಮೌಲ್ಯದ ಚಿನ್ನದ ಕರಿಮಣಿ ಸರ – 01 (39.70 ಗ್ರಾಂ), 1.86 ಲಕ್ಷ ಮೌಲ್ಯದ ಚಿನ್ನದ ನೆಕ್ಲಿಸ್ – 01 (13.30 ಗ್ರಾಂ), 54,000 ಮೌಲ್ಯದ ಚಿನ್ನದ ಚೈನ್ – 01 (3.87 ಗ್ರಾಂ), 44,000 ಮೌಲ್ಯದ ಚಿನ್ನದ ಕಿವಿಯೋಲೆ – 01 ಜೊತೆ (3.15 ಗ್ರಾಂ) ಮತ್ತು ಆರೋಪಿಗಳ ಬಳಿಯಿದ್ದ 2 ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದೆ.
‘TATTO 313’ ಗ್ಯಾಂಗ್ ವಿಲಕ್ಷಣ ವೈಖರಿ
ಬಂಧಿತ ಆರೋಪಿಗಳು ತಮ್ಮ ಕೈಗಳ ಮೇಲೆ ‘TATTO 313’ ಎಂಬ ಹಚ್ಚೆ (ಟ್ಯಾಟೂ) ಹಾಕಿಸಿಕೊಂಡಿದ್ದು ಇದೇ ಹೆಸರಿನಲ್ಲಿ ಗ್ಯಾಂಗ್ ಕಟ್ಟಿಕೊಂಡಿದ್ದರು. ಕರ್ನಾಟಕ, ತಮಿಳುನಾಡು ಹಾಗೂ ಆಂಧ್ರಪ್ರದೇಶ ರಾಜ್ಯಗಳ ರೈಲ್ವೆ ಹಳಿ ಮತ್ತು ನಿಲ್ದಾಣಗಳ ಪಕ್ಕದಲ್ಲಿರುವ ಬೀಗ ಹಾಕಿದ ಮನೆಗಳನ್ನು ಹಗಲು ವೇಳೆ ಗುರುತಿಸಿ, ರಾತ್ರಿ ವೇಳೆ ದರೋಡೆ ಮಾಡುತ್ತಿದ್ದರು. ಕೃತ್ಯ ಎಸಗುವಾಗ ಇವರು ಮುಖಕ್ಕೆ ಮಾಸ್ಕ್, ಕೈಗಳಿಗೆ ಗ್ಲೌಸ್ ಹಾಗೂ ಕಾಲಿಗೆ ಸಾಕ್ಸ್ ಧರಿಸುತ್ತಿದ್ದರು. ಕಾಲಿಗೆ ಸಾಕ್ಸ್ ಧರಿಸುವುದರಿಂದ ಯಾವುದೇ ರೀತಿಯ ಬೆರಳಚ್ಚು ಅಥವಾ ಪಾದದ ಗುರುತುಗಳು ಪೊಲೀಸರಿಗೆ ಸಿಗುತ್ತಿರಲಿಲ್ಲ. ಬಾಗಿಲು ಮುರಿಯಲು ಬಲವಾದ ಕಬ್ಬಿಣದ ಆಯುಧಗಳನ್ನು ಬಳಸುತ್ತಿದ್ದರು. ಆರೋಪಿಗಳ ವಿರುದ್ಧ ಕರ್ನಾಟಕ ಹಾಗೂ ತಮಿಳುನಾಡಿನಲ್ಲಿ ಹತ್ತಾರು ಪ್ರಕರಣಗಳು ದಾಖಲಾಗಿದ್ದು, 2025ರ ಸೆಪ್ಟೆಂಬರ್ ತಿಂಗಳಲ್ಲಿ ಸುರತ್ಕಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣದಲ್ಲೂ ಇವರ ಕೈವಾಡ ಇರುವುದು ತನಿಖೆಯಲ್ಲಿ ಬಹಿರಂಗವಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am