ಬ್ರೇಕಿಂಗ್ ನ್ಯೂಸ್
11-06-26 08:44 pm HK News Staffer ಕ್ರೈಂ
ಉಡುಪಿ, ಜೂನ್ 11 : ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಿಡ್ನಾಪ್ ಮತ್ತು ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಮನೋಜ್ ಕೋಡಿಕೆರೆ ಮತ್ತು ಚೇತನ್ ಪಡೀಲ್ ಎಂಬವರನ್ನು ಕಡೆಗೂ ಖಚಿತ ಮಾಹಿತಿ ಆಧರಿಸಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಸುರತ್ಕಲ್ ಬಳಿಯ ಕೋಡಿಕೆರೆ ನಿವಾಸಿ ಮನೋಜ್ ಕುಲಾಲ್ ಅಲಿಯಾಸ್ ಮನೋಜ್ ಕೊಡಿಕೆರೆ ಮತ್ತು ಚೇತನ್ ಅಲಿಯಾಸ್ ಚೇತು ಪಡೀಲ್ ಬಂಧಿತರು. ಇಬ್ಬರು ಆರೋಪಿಗಳ ಪತ್ತೆಗಾಗಿ ಉಡುಪಿ ಪೊಲೀಸರು ಸಾರ್ವಜನಿಕ ಪ್ರಕಟಣೆ ಹೊರಡಿಸಿ, ಮಾಹಿತಿ ನೀಡಿದವರಿಗೆ ತಲಾ 50,000 ರೂಪಾಯಿ ನಗದು ಬಹುಮಾನ ಘೋಷಿಸಿದ್ದರು. ಇದರಂತೆ, ಸಾರ್ವಜನಿಕರಿಂದ ಲಭಿಸಿದ ನಿಖರವಾದ ಮಾಹಿತಿ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು ಇಬ್ಬರನ್ನೂ ಹೆಡೆಮುರಿ ಕಟ್ಟಿದ್ದಾರೆ.
ಚೇತನ್ ಪಡೀಲ್ ನನ್ನು ಎಪ್ರಿಲ್ 30ರಂದು ಪೊಲೀಸರು ಮೊದಲಿಗೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆನಂತರ, ಮನೋಜ್ ಕೋಡಿಕೆರೆ ಪತ್ತೆಗಾಗಿ ತೀವ್ರ ಹುಡುಕಾಟ ಮುಂದುವರಿಸಲಾಗಿತ್ತು. ಜೂನ್ 11ರಂದು ನಿಗೂಢ ಜಾಗದಲ್ಲಿ ಅಡಗಿದ್ದ ಮನೋಜ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಸೆರೆಹಿಡಿಯಲು ಪ್ರಾಣದ ಹಂಗು ತೊರೆದು ನಿಖರ ಮಾಹಿತಿ ನೀಡಿದ ಸಾರ್ವಜನಿಕರಿಗೆ ಘೋಷಿತ ಬಹುಮಾನದ ಮೊತ್ತವನ್ನು ಶೀಘ್ರದಲ್ಲೇ ಹಸ್ತಾಂತರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am