ಬ್ರೇಕಿಂಗ್ ನ್ಯೂಸ್
12-06-26 11:58 am HK News Staffer ಕ್ರೈಂ
ಶಿವಮೊಗ್ಗ, ಜೂನ್ 12: ಜೈಲಿನಲ್ಲಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದು, ಬುರ್ಖಾ ಧರಿಸಿ ಮಹಿಳೆ ಹತ್ಯೆಗೆ ಬಂದಿದ್ದ ಮೂವರು ಯುವಕರನ್ನು ಸಾರ್ವಜನಿಕರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಶಿವಮೊಗ್ಗ ನಗರದ ಕೆ.ಆರ್ ಪುರಂ ರಸ್ತೆಯಲ್ಲಿ ನಡೆದಿದೆ.
ಕೊಲೆ ಪ್ರಕರಣವೊಂದರಲ್ಲಿ ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿರುವ ವ್ಯಕ್ತಿಯೊಬ್ಬ ತನ್ನ ಪತ್ನಿಯ ಕೊಲೆಗೆ ಸುಪಾರಿ ನೀಡಿದ್ದ. ಆತನ ಸಹಚರರಾದ ಅಸ್ಲಾಂ(25), ಮಹೇಶ್ (20), ದರ್ಶನ್ (20) ಮತ್ತು ಮುನ್ನಾ(24) ಎಂಬ ನಾಲ್ವರು ಯುವಕರು ತಮ್ಮ ಗುರುತು ತಿಳಿಯದಂತೆ ಬುರ್ಖಾ ಧರಿಸಿ ಕೆ.ಆರ್. ಪುರಂನಲ್ಲಿರುವ ಮಹಿಳೆಯ ಮನೆ ಬಳಿ ಬಂದಿದ್ದಾರೆ.
ಆದರೆ, ಇವರ ವಿಚಿತ್ರ ನಡವಳಿಕೆ ಮತ್ತು ಚಲನವಲನಗಳನ್ನು ಗಮನಿಸಿದ ಸ್ಥಳೀಯ ನಿವಾಸಿಗಳಿಗೆ ಅನುಮಾನ ಬಂದಿದೆ. ಕೂಡಲೇ ಸಾರ್ವಜನಿಕರು ಒಟ್ಟು ಸೇರಿ ನಾಲ್ವರನ್ನು ಸುತ್ತುವರೆದು ತರಾಟೆಗೆ ತೆಗೆದುಕೊಂಡಿದ್ದಾರೆ. ತಪಾಸಣೆ ನಡೆಸಿದಾಗ ಬುರ್ಖಾ ಒಳಗಿದ್ದ ಗಂಡಸರ ಅಸಲಿ ಮುಖವಾಡ ಬಯಲಾಗಿದ್ದು, ನಾಲ್ವರಿಗೂ ರಸ್ತೆಯಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಈ ನಡುವೆ ಮುನ್ನಾ ಎಂಬಾತ ಸ್ಥಳದಿಂದ ಪರಾರಿಯಾಗಿದ್ದಾನೆ. ಉಳಿದ ಮೂವರು ಆರೋಪಿಗಳಾದ ಅಸ್ಲಾಂ, ಮಹೇಶ್ ಮತ್ತು ದರ್ಶನ್ನನ್ನು ಹಿಡಿದು ದೊಡ್ಡಪೇಟೆ ಪೊಲೀಸರಿಗೆ ಒಪ್ಪಿಸಲಾಗಿದೆ. ಸ್ಥಳೀಯರ ಸಮಯಪ್ರಜ್ಞೆಯಿಂದಾಗಿ ಮಹಿಳೆಯ ಪ್ರಾಣ ಉಳಿದಿದೆ ಎಂದು ಕುಟುಂಬದವರು ಹೇಳಿದ್ದಾರೆ. ಬುರ್ಖಾ ಧರಿಸಿ ಇಂತಹ ಅಪರಾಧ ಕೃತ್ಯಗಳಿಗೆ ಮುಂದಾಗಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ.
ಪತ್ನಿ ತನ್ನನ್ನು ನೋಡಲು ಜೈಲಿಗೆ ಬರುತ್ತಿಲ್ಲ ಮತ್ತು ಖರ್ಚಿಗೆ ಹಣ ನೀಡುತ್ತಿಲ್ಲ ಎಂಬ ಕಾರಣಕ್ಕೆ ಜೈಲಿನಲ್ಲಿರುವ ಪತಿ, ತನ್ನ ಪತ್ನಿ ತಬಸ್ಸುಮ್ ಬಾನು ವಿರುದ್ಧ ತೀವ್ರ ಆಕ್ರೋಶಗೊಂಡಿದ್ದ. ಸೇಡು ತೀರಿಸಿಕೊಳ್ಳಲು ಜೈಲಿನಿಂದಲೇ ತನ್ನ ಸಹಚರರಿಗೆ ಪತ್ನಿಯ ಹತ್ಯೆಗೆ ಸುಪಾರಿ ನೀಡಿದ್ದ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am