ಬ್ರೇಕಿಂಗ್ ನ್ಯೂಸ್
15-06-26 11:27 am HK News Staffer ಕ್ರೈಂ
ಹಾಸನ, ಜೂನ್ 15: ಧರ್ಮಸ್ಥಳದ ತೀರ್ಥಯಾತ್ರೆ ಮುಗಿಸಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾಗ ಮಾರ್ಗಮಧ್ಯೆ ಹೇಮಾವತಿ ಜಲಾಶಯದ ಹಿನ್ನೀರಿನಲ್ಲಿ ಈಜಾಡಲು ಐಬ ಹೋಗಿದ್ದ ಮೂವರು ಯುವಕರು ನೀರು ಪಾಲಾಗಿದ್ದಾರೆ. ಹಾಸನ ತಾಲೂಕಿನ ಶೆಟ್ಟಿಹಳ್ಳಿ ಚರ್ಚ್ ಸಮೀಪ ಭಾನುವಾರ ಸಂಜೆ ದುರ್ಘಟನ ಸಂಭವಿಸಿದೆ.
ಬೆಂಗಳೂರಿನ ಗಿರಿನಗರದ ಮಣಿಕಂಠ ಚರಣ (20), ಮಿಲನ್ (23) ಹಾಗೂ ಬ್ಯಾಟರಾಯನಪುರದ (20) ಮೃತ ದುರ್ವೈವಿಗಳು. ಬೆಂಗಳೂರಿನ ವಿವಿಧ ಬಡಾವಣೆಗಳ 10 ಮಂದಿ ಸ್ನೇಹಿತರು ಟೆಂಪೋ ಟ್ರಾವೆರ್ಸ್ ನಲ್ಲಿ ಶನಿವಾರ ಧರ್ಮಸ್ಥಳಕ್ಕೆ ತೆರಳಿ ಮಂಜುನಾಥಸ್ವಾಮಿ ದರ್ಶನ ಪಡೆದು ಭಾನುವಾರ ಬರುವಾಗ ಮಾರ್ಗಮಧ್ಯೆ ಹಾಸನದಿಂದ 14 ಕಿ.ಮೀ. ದೂರದ ಶೆಟ್ಟಿಹಳ್ಳಿ ಬಳಿ ಹೇಮಾವತಿ ಜಲಾಶಯದ ಹಿನ್ನೀರಿನ ಐತಿಹಾಸಿಕ ಶೆಟ್ಟಿಹಳ್ಳಿ ಚರ್ಚ್ ವೀಕ್ಷಿಸಲು ತೆರಳಿದ್ದರು.
ಮಧ್ಯಾಹ್ನ 3 ಗಂಟೆಗೆ ತೆರಳಿದ್ದು ಬಳಿಕ ಚರ್ಚ್ ಸುತ್ತಲೂ ಆವರಿಸಿರುವ ಹಿನ್ನೀರಿನಲ್ಲಿ ಈಜಾಡಲು ನೀರಿಗಿಳಿದಿದ್ದಾರೆ. ನೀರಿನ ಆಳ ತಿಳಿಯದೆ, ಈಜಾಡುತ್ತಾ ಹೋದ ಮೂವರು ಯುವಕರು ಮುಳುಗಿದ್ದಾರೆ. ಅವರನ್ನು ಸ್ನೇಹಿತರು ರಕ್ಷಿಸಲು ಹರಸಾಹಸಪಟ್ಟರೂ ಸಾಧ್ಯವಾಗದೆ ಸಹಾಯಕ್ಕಾಗಿ ಕೂಗಿದ್ದಾರೆ. ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಮೂವರೂ ನೀರಿನಲ್ಲಿ ಕಣ್ಮರೆಯಾಗಿದ್ದರು. ಮಾಹಿತಿ ಪಡೆದ ಗೊರೂರು ಠಾಣೆ ಪೊಲೀಸರು ಅಗ್ನಿ ಶಾಮಕ ದಳದೊಂದಿಗೆ ತೆರಳಿ ಸಂಜೆ 6 ಗಂಟೆ ವೇಳೆಗೆ ಮೂವರ ಮೃತದೇಹಗಳನ್ನೂ ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಹಾಸನದ ಹಿಮ್ಸ್ ಆಸ್ಪತ್ರೆ ಶವಾಗಾರಕ್ಕೆ ತಲುಪಿಸಿದ್ದಾರೆ.
ನೀರಿಗೆ ಇಳಿದಿದ್ದ ಮೃತ ಮೂವರು ಯುವಕರಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ನೀರಿನ ಆಳ, ಸುಳಿಯ ಅರಿವಿಲ್ಲದೆ ಅವರು ನದಿಯ ಆಳಕ್ಕೆ ಇಳಿದು ಮೃತಪಟ್ಟಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am