ಬ್ರೇಕಿಂಗ್ ನ್ಯೂಸ್
19-06-26 09:07 pm HK News Staffer ಕ್ರೈಂ
ಬೆಂಗಳೂರು, ಜೂನ್ 19 : ಪೊಲೀಸ್ ಅಧಿಕಾರಿಯೊಬ್ಬರು ದರೋಡೆಕೋರರ ಗ್ಯಾಂಗ್ ಕಟ್ಟಿಕೊಂಡು ಕೇರಳ ಮೂಲದ ಉದ್ಯಮಿಗಳನ್ನು ಹೆದರಿಸಿ ಲಕ್ಷಾಂತರ ರೂಪಾಯಿ ಲೂಟಿ ಮಾಡಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ದರೋಡೆ ಪ್ರಕರಣದಲ್ಲಿ ಸಿಐಡಿ ವಿಭಾಗದ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಮುಖ್ಯ ಸೂತ್ರಧಾರಿಯಾಗಿದ್ದು, ಸದ್ಯ ಪೊಲೀಸರು ದರೋಡೆಗೆ ಬಳಸಿದ್ದ ಅಧಿಕೃತ ಸಿಐಡಿ ಜೀಪನ್ನು ಜಪ್ತಿ ಮಾಡಿದ್ದಾರೆ. ಕೇರಳ ಮೂಲದ ಉದ್ಯಮಿಗಳು ವ್ಯಾಪಾರ ಮತ್ತು ಟ್ರೇಡಿಂಗ್ ಉದ್ದೇಶಗಳಿಗಾಗಿ ಲಕ್ಷಾಂತರ ರೂಪಾಯಿ ನಗದಿನೊಂದಿಗೆ ಬೆಂಗಳೂರಿಗೆ ಬಂದು ಮಡಿವಾಳದ ಖಾಸಗಿ ಹೋಟೆಲ್ ಒಂದರಲ್ಲಿ ತಂಗಿದ್ದರು. ಉದ್ಯಮಿಗಳ ಬಳಿ ದೊಡ್ಡ ಮೊತ್ತದ ಹಣವಿರುವ ಬಗ್ಗೆ ನಿಖರ ಮಾಹಿತಿ ಪಡೆದಿದ್ದ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ, ಹಣ ಸುಲಿಗೆ ಮಾಡಲು ಸ್ಕೆಚ್ ಹಾಕಿದ್ದರು. ಇದಕ್ಕಾಗಿ ಹ್ಯಾರಿಸ್, ಕುಪೇಂದ್ರ, ಶಪಿ ಮತ್ತು ಶಾನಿ ಎಂಬ ನಾಲ್ವರೊಂದಿಗೆ ಸೇರಿ ದರೋಡೆಗೆ ಸಂಚು ರೂಪಿಸಿದ್ದರು.
ದಾಳಿಯ ದಿನದಂದು ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ನೇತೃತ್ವದ ತಂಡವು ಹೋಟೆಲ್ ಮುಂಭಾಗದಲ್ಲಿ ಇಲಾಖೆಯ ಅಧಿಕೃತ ಸಿಐಡಿ ಜೀಪನ್ನು ತಂದು ನಿಲ್ಲಿಸಿತ್ತು. ಜೀಪ್ ಒಳಗಡೆ ಇನ್ಸ್ಪೆಕ್ಟರ್ ಮಹೇಶ್ ಕಾಯುತ್ತಿದ್ದರೆ, ಇತ್ತ ಗ್ಯಾಂಗ್ನ ಇಬ್ಬರು ಸದಸ್ಯರು ಹೋಟೆಲ್ ಕೋಣೆಯೊಳಗೆ ನುಗ್ಗಿದ್ದಾರೆ. ತಾವು ಕ್ರೈಮ್ ವಿಭಾಗದ ಪೊಲೀಸರೆಂದು ಹೇಳಿಕೊಂಡು ನಕಲಿ ಗುರುತಿನ ಚೀಟಿ ತೋರಿಸಿದ ಆರೋಪಿಗಳು, "ನೀವು ಅಕ್ರಮವಾಗಿ ಟ್ರೇಡಿಂಗ್ ಮಾಡಲು ಹಣ ತಂದಿದ್ದೀರಿ" ಎಂದು ಉದ್ಯಮಿಗಳನ್ನು ಬ್ಲ್ಯಾಕ್ ಮೇಲ್ ಮಾಡಿದ್ದಾರೆ.
ಇದರಿಂದ ಭಯಭೀತರಾದ ಉದ್ಯಮಿಗಳಿಂದ 20 ಲಕ್ಷ ರೂಪಾಯಿ ಹಣವನ್ನು ದೋಚಿದ ದರೋಡೆಕೋರರು, ಹೊರಗೆ ಕಾಯುತ್ತಿದ್ದ ಅದೇ ಸಿಐಡಿ ಜೀಪ್ ಹತ್ತಿ ಪರಾರಿಯಾಗಿದ್ದಾರೆ. ವಂಚಕರ ಜಾಲಕ್ಕೆ ಬಿದ್ದಿರುವುದು ತಡವಾಗಿ ಅರಿವಾದ ತಕ್ಷಣ ಸಂತ್ರಸ್ತ ಉದ್ಯಮಿಗಳು ಮಡಿವಾಳ ಪೊಲೀಸ್ ಠಾಣೆಗೆ ಧಾವಿಸಿ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಹೋಟೆಲ್ ನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ದರೋಡೆಗೆ ಇಲಾಖೆಯ ಜೀಪ್ ಬಳಸಿರುವುದು ಪತ್ತೆಯಾಗಿದೆ.

ತಕ್ಷಣವೇ ಕಾರ್ಯಾಚರಣೆ ನಡೆಸಿದ ಮಡಿವಾಳ ಪೊಲೀಸರು ದರೋಡೆ ಗ್ಯಾಂಗ್ ಸದಸ್ಯನಾದ ಕುಪೇಂದ್ರ ಎಂಬಾತನನ್ನು ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಇಡೀ ದರೋಡೆಯ ಮಾಸ್ಟರ್ ಮೈಂಡ್ ಸ್ವತಃ ಸಿಐಡಿ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಎಂಬ ಆಘಾತಕಾರಿ ಸತ್ಯ ಬಯಲಾಗಿದೆ.
ಇನ್ಸ್ಪೆಕ್ಟರ್ ನಾಪತ್ತೆ, ತೀವ್ರ ಶೋಧ
ತಮ್ಮ ತಂಡದ ಸಹಚರ ಸಿಕ್ಕಿಬೀಳುತ್ತಿದ್ದಂತೆ ಇನ್ಸ್ಪೆಕ್ಟರ್ ಮಹೇಶ್ ಕನಕಗಿರಿ ಸೇರಿದಂತೆ ಉಳಿದ ನಾಲ್ವರು ಆರೋಪಿಗಳು ರಾತ್ರೋರಾತ್ರಿ ತಲೆಮರೆಸಿಕೊಂಡಿದ್ದಾರೆ. ಸದ್ಯ ಪೊಲೀಸರು ದರೋಡೆಗೆ ಬಳಸಿದ್ದ ಸಿಐಡಿ ಜೀಪನ್ನು ವಶಕ್ಕೆ ಪಡೆದಿದ್ದು, ತಲೆಮರೆಸಿಕೊಂಡ ಪೊಲೀಸ್ ಅಧಿಕಾರಿ ಮತ್ತು ಆತನ ಇತರೆ ಸಹಚರರ ಪತ್ತೆಗಾಗಿ ಬೆಂಗಳೂರು ಹಾಗೂ ನೆರೆ ಜಿಲ್ಲೆಗಳಲ್ಲಿ ವ್ಯಾಪಕ ಜಾಲ ಬೀಸಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm