ಬ್ರೇಕಿಂಗ್ ನ್ಯೂಸ್
20-06-26 04:43 pm HK News Staffer ಕ್ರೈಂ
ಬೆಂಗಳೂರು, ಹೊಸಕೋಟೆ, ಜೂನ್ 15: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಿಎಂಟಿಸಿ ಬಸ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೊಂದು ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹೃದಯವಿದ್ರಾವಕವಾಗಿ ಪರಿಣಮಿಸಿದೆ.
ದೇವನಹಳ್ಳಿ ತಾಲ್ಲೂಕಿನ ತೆಲ್ಲಹಳ್ಳಿ ಗ್ರಾಮದ ಅರುಣ್ (35), ಅವರ ಪತ್ನಿ ಅನುಷಾ (32) ಹಾಗೂ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಐದು ವರ್ಷದ ಬಾಲಕಿ ಅನುಶಿಕಾ ಗಂಭೀರವಾಗಿ ಗಾಯಗೊಂಡಿದ್ದು, ಆಕೆಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿಯ ಪ್ರಕಾರ, ಸೂಲಿಬೆಲೆ-ಹೊಸಕೋಟೆ ಮಾರ್ಗವಾಗಿ ಸಂಚರಿಸುತ್ತಿದ್ದ ಬಿಎಂಟಿಸಿ ಬಸ್ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ ಬಸ್ ವಿರುದ್ಧ ಮಾರ್ಗದಲ್ಲಿ ಸಂಚರಿಸಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಹೇಳಲಾಗುತ್ತಿದೆ. ಬೈಕ್ ಹಾಗೂ ಬಸ್ ನಡುವೆ ನಡೆದ ಭೀಕರ ಡಿಕ್ಕಿಯಿಂದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ನಂತರ ಹೊಸಕೋಟೆ–ದೇವನಹಳ್ಳಿ ಮಾರ್ಗದಲ್ಲಿ ಕೆಲ ಗಂಟೆಗಳ ಕಾಲ ಭಾರೀ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿತ್ತು. ಸ್ಥಳಕ್ಕೆ ಸೂಲಿಬೆಲೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ ಹಾಗೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಘಟನೆಯ ಕುರಿತು ಮಾಹಿತಿ ನೀಡಿದ ಡಿವೈಎಸ್ಪಿ ಮಲ್ಲೇಶ್, ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ಅಪಘಾತ ಸಂಭವಿಸಿರುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಜೊತೆಗೆ, ಈ ರಸ್ತೆಯಲ್ಲಿ ವೇರ್‌ಹೌಸ್‌ಗಳು ಹೆಚ್ಚಿರುವುದರಿಂದ ಲಾರಿಗಳನ್ನು ರಸ್ತೆ ಬದಿಯಲ್ಲೇ ನಿಲ್ಲಿಸುವುದು ಸಹ ಅಪಘಾತಕ್ಕೆ ಸಹಾಯಕ ಕಾರಣವಾಗಿರುವುದಾಗಿ ಅವರು ಹೇಳಿದ್ದಾರೆ. ಈಗಾಗಲೇ ರಸ್ತೆಮೇಲೆ ನಿಲ್ಲಿಸಿದ್ದ ಲಾರಿಗಳನ್ನು ತೆರವುಗೊಳಿಸಲಾಗಿದ್ದು, ಮುಂದೆ ಇಂತಹ ನಿಲುಗಡೆಗಳನ್ನು ತಪ್ಪಿಸುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ಭೀಕರ ಘಟನೆ ಕುಟುಂಬವೊಂದನ್ನು ಸಂಪೂರ್ಣವಾಗಿ ಕಳೆದುಕೊಂಡಂತಹ ದುರಂತವಾಗಿದ್ದು, ಸ್ಥಳೀಯರಲ್ಲಿ ಆಘಾತ ಮತ್ತು ಶೋಕದ ವಾತಾವರಣ ನಿರ್ಮಿಸಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm