ಬ್ರೇಕಿಂಗ್ ನ್ಯೂಸ್
22-06-26 12:53 pm HK News Staffer ಕ್ರೈಂ
ಮಂಗಳೂರು, ಜೂನ್ 22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬ್ರಹ್ಮರಕೂಟ್ಲು ಸಮೀಪದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಟೋಲ್ಗೇಟ್ನಲ್ಲಿ ಟೋಲ್ ಶುಲ್ಕ ಪಾವತಿ ವಿಚಾರವಾಗಿ ಉದ್ಭವಿಸಿದ ವಿವಾದ ಭಾರೀ ಗಲಾಟೆಗೆ ತಿರುಗಿದ ಘಟನೆ ಬೆಳಕಿಗೆ ಬಂದಿದೆ. ಟೋಲ್ ಪಾವತಿಸುವುದನ್ನು ತಪ್ಪಿಸಲು ಕೆಲವು ವಾಹನಗಳು ಏಕಮುಖ ಸಂಚಾರ ನಿಯಮ ಉಲ್ಲಂಘಿಸಿ ನುಗ್ಗಿದಲ್ಲದೆ, ಸುರಕ್ಷತಾ ಬ್ಯಾರಿಯರ್ಗಳಿಗೆ ಡಿಕ್ಕಿ ಹೊಡೆದು ಹಾನಿಗೊಳಿಸಿರುವ ಆರೋಪ ಕೇಳಿಬಂದಿದೆ.
ಮಾಹಿತಿಯ ಪ್ರಕಾರ, ಸಿಪಿಐಎಂ ಪಕ್ಷದ ಕಾರ್ಯಕರ್ತರನ್ನು ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಬ್ರಹ್ಮರಕೂಟ್ಲು ಟೋಲ್ಗೇಟ್ಗೆ ಆಗಮಿಸಿತ್ತು. ಟೋಲ್ ಸಿಬ್ಬಂದಿ ನಿಯಮಾನುಸಾರ ಶುಲ್ಕ ಪಾವತಿಸುವಂತೆ ಸೂಚಿಸಿದಾಗ, ಚಾಲಕ ಮತ್ತು ವಾಹನದಲ್ಲಿದ್ದ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ವಿವಾದ ತೀವ್ರಗೊಂಡ ಬಳಿಕ ಬಸ್ ಚಾಲಕ ಟೋಲ್ ಪಾವತಿಸದೇ ವಾಹನವನ್ನು ಮುಂದಕ್ಕೆ ಚಲಾಯಿಸಿದ್ದು, ಈ ವೇಳೆ ಟೋಲ್ಗೇಟ್ನ ಸುರಕ್ಷತಾ ಬೂಮ್ ಬ್ಯಾರಿಯರ್ಗೆ ಡಿಕ್ಕಿ ಹೊಡೆದ ಅಲ್ಲಿಂದ ತೆರಳಿದೆ.


ಇದಾದ ಬಳಿಕ ಅದೇ ತಂಡದೊಂದಿಗೆ ಸಂಚರಿಸುತ್ತಿದ್ದ ಇನ್ನೂ ಕೆಲವು ವಾಹನಗಳು ಸಹ ಟೋಲ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ, ಏಕಮುಖ ಸಂಚಾರ ಮಾರ್ಗದಲ್ಲೇ ವಾಹನಗಳನ್ನು ನುಗ್ಗಿಸಿ ನಿಯಮ ಉಲ್ಲಂಘಿಸಿರುವ ಆರೋಪ ಕೇಳಿಬಂದಿದೆ.
ಘಟನೆಯ ವೇಳೆ ಟೋಲ್ ಸಿಬ್ಬಂದಿ ಮತ್ತು ವಾಹನದಲ್ಲಿದ್ದವರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಟೋಲ್ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರೂ ವಾಹನಗಳು ವೇಗವಾಗಿ ಸಾಗಿದ ಕಾರಣ ಗೊಂದಲ ಉಂಟಾಯಿತು ಎಂದು ಹೇಳಲಾಗಿದೆ.
ಇಡೀ ಘಟನೆ ಟೋಲ್ಗೇಟ್ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ದೃಶ್ಯಾವಳಿಗಳ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ಟೋಲ್ಗೇಟ್ನ ಸುರಕ್ಷತಾ ವ್ಯವಸ್ಥೆಗೆ ಹಾನಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೂ ಅಡಚಣೆ ಉಂಟಾಗಿದೆ ಎನ್ನಲಾಗಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm