ಬ್ರೇಕಿಂಗ್ ನ್ಯೂಸ್
23-06-26 02:15 pm HK News Staffer ಕ್ರೈಂ
ಮಂಗಳೂರು, ಜೂನ್ 23: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎನ್ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು ದಿಢೀರ್ ಆಗಿ ಮತ್ತೆ ಬಜ್ಪೆ ಠಾಣೆಗೆ ಬಂದಿದ್ದಾರೆ. ಡಿವೈಎಸ್ಪಿ ರಾಜೀವ್ ಸಿಂಗ್, ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಸೇರಿದಂತೆ ಐವರು ಅಧಿಕಾರಿಗಳ ತಂಡ ಬಜ್ಪೆಗೆ ಆಗಮಿಸಿದೆ.
ಕೆಲವರಿಗೆ ನೋಟೀಸ್ ನೀಡಿ ವಿಚಾರಣೆಗೆ ಬರುವಂತೆ ಸೂಚಿಸಿದೆ ಎನ್ನುವ ಮಾಹಿತಿ ಇದೆ. ಅಧಿಕಾರಿಗಳು ಠಾಣೆಯಲ್ಲಿ ಬೀಡು ಬಿಟ್ಟಿದ್ದು, ಕೆಲವು ದಾಖಲಾತಿಗಳನ್ನು ಮುಂದಿಟ್ಟು ಶಂಕಿತರ ಮೇಲೆ ನಿಗಾ ಇಟ್ಟಿದ್ದಾರೆ. ಕಳೆದ ವರ್ಷ 2025ರ ಆಗಸ್ಟ್ 2ರಂದು ಮಂಗಳೂರು ಹೊರವಲಯದ ಸುರತ್ಕಲ್ ಮತ್ತು ಬಜ್ಪೆ ಠಾಣೆ ವ್ಯಾಪ್ತಿಯ 14 ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಒಯ್ದಿದ್ದರು ಎನ್ನಲಾಗಿತ್ತು. ಇದೀಗ ಒಂದು ವರ್ಷದ ಬಳಿಕ ತಂಡ ಮರಳಿದ್ದು ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಲಿಂಕ್ ಹೊಂದಿರುವ ಕೆಲವರನ್ನು ವಿಚಾರಣೆಗೆ ಕರೆಸಿದೆ.

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ಸೇರಿ 12 ಮಂದಿಯನ್ನು ಬಂಧಿಸಲಾಗಿತ್ತು. ಪ್ರಕರಣದಲ್ಲಿ ವಿದೇಶದಿಂದ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ತನಿಖೆಗೆ ವಹಿಸಲಾಗಿತ್ತು. ಪ್ರಕರಣದಲ್ಲಿ ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳನ್ನು ತನಿಖೆಗೆ ಒಳಪಡಿಸಿದ್ದು ಸಂಶಯ ಬಂದ ಅಂಶಗಳನ್ನು ಆಧರಿಸಿ ತನಿಖೆ ಮುಂದುವರಿಸಲಾಗಿತ್ತು.
ಬಜಪೆ ಠಾಣೆ ವ್ಯಾಪ್ತಿಯ 10 ಕಡೆ ಹಾಗೂ ಸುರತ್ಕಲ್ ಠಾಣೆ ವ್ಯಾಪ್ತಿಯ ನಾಲ್ಕು ಕಡೆಗಳಲ್ಲಿ ಕೊಲೆ ಆರೋಪಿಗಳ ಮನೆ ಹಾಗೂ ಎಸ್ ಡಿಪಿಐ ಮುಖಂಡರ ಮನೆಗೆಲಳಿಗೆ ದಾಳಿ ನಡೆಸಿದ್ದರು. ವಶಕ್ಕೆ ಪಡೆದಿದ್ದ ಹಲವು ದಾಖಲೆಗಳನ್ನು ಪರಿಶೀಲಿಸಿರುವ ಅಧಿಕಾರಿಗಳು ವರ್ಷದ ನಂತರ ತನಿಖೆ ಸಕ್ರಿಯಗೊಳಿಸಿದ್ದಾರೆ. 2025 ರ ಮೇ 1ರಂದು ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ರಾತ್ರಿ ಎಂಟು ಗಂಟೆ ವೇಳೆಗೆ ಸುಹಾಸ್ ಶೆಟ್ಟಿ ಬರ್ಬರ ಹತ್ಯೆಯಾಗಿತ್ತು.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm