ಬ್ರೇಕಿಂಗ್ ನ್ಯೂಸ್
27-06-26 10:54 am HK News Staffer ಕ್ರೈಂ
ಮಂಗಳೂರು, ಜೂನ್ 27: ಮಂಗಳೂರಿನಲ್ಲಿ ಪೊಲೀಸರನ್ನೇ ಬೆಚ್ಚಿಬೀಳಿಸುವಂತಹ ಸಿನಿಮೀಯ ಘಟನೆ ನಡೆದಿದ್ದು, ಬಂಧಿತನಾಗಿದ್ದ ಖತರ್ನಾಕ್ ಸರಗಳ್ಳನೊಬ್ಬ ಹ್ಯಾಂಡ್‌ಕಫ್‌ನೊಂದಿಗೇ ಪಾಂಡೇಶ್ವರದ ಐವರು ಪೊಲೀಸ್ ಸಿಬ್ಬಂದಿಯ ಕೈಯಿಂದ ತಪ್ಪಿಸಿಕೊಂಡಿದ್ದಾನೆ. ನಾಗರದ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ಪೊಲೀಸರನ್ನು ತಳ್ಳಿ ಪರಾರಿಯಾಗಿರುವ ಈತನಿಗಾಗಿ ನಗರಾದ್ಯಂತ ಬಲೆ ಬೀಸಲಾಗಿದ್ದು, ಬಂಧನಕ್ಕೆ ಸಾರ್ವಜನಿಕರ ಸಹಕಾರ ಕೋರಲಾಗಿದೆ.
ಪರಾರಿಯಾಗಿರುವ ಆರೋಪಿ ಬಾಗಲಕೋಟೆ ಮೂಲದ ಅಲ್ತಾಫ್ ಹುಸೇನ್ ಎನ್ನಲಾಗಿದೆ. ಉತ್ತರ ಪ್ರದೇಶ ಮೂಲದ ಮಹಮ್ಮದ್ ಸಿದ್ದಿಕ್ ಹಾಗೂ ರವಿ ಬೌರ ಎಂಬ ಇಬ್ಬರು ಸಹಚರರೊಂದಿಗೆ ಸೇರಿ ವಾಹನ ಕಳ್ಳತನ, ಸರಗಳ್ಳತನ ಹಾಗೂ ಸುಲಿಗೆ ಕೃತ್ಯಗಳಲ್ಲಿ ತೊಡಗಿಕೊಂಡಿದ್ದ ಈತನ ವಿರುದ್ಧ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.
ಮಂಗಳೂರಿನ ಜಪ್ಪಿನಮೊಗರು ಸರಗಳ್ಳತನ ಪ್ರಕರಣದ ತನಿಖೆ ನಡೆಸುತ್ತಿದ್ದ ಪಾಂಡೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಅಲ್ತಾಫ್ ಹುಸೇನ್ ಗ್ಯಾಂಗ್ ಕುರಿತು ಖಚಿತ ಮಾಹಿತಿ ಲಭಿಸಿತ್ತು. ಕೃತ್ಯ ಎಸಗಿದ ಬಳಿಕ ಗ್ಯಾಂಗ್ ನಗರ ಬಿಟ್ಟು ಪರಾರಿಯಾಗಿದ್ದರೂ, ಅವರು ಮಂಗಳೂರಿನ ಮೀನುಗಾರಿಕಾ ಬಂದರು ಪ್ರದೇಶಕ್ಕೆ ಬಂದಿರುವ ಮಾಹಿತಿ ಪೊಲೀಸರಿಗೆ ದೊರಕಿತ್ತು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು ಅಲ್ತಾಫ್ ಹುಸೇನ್, ಮಹಮ್ಮದ್ ಸಿದ್ದಿಕ್ ಹಾಗೂ ರವಿ ಬೌರರನ್ನು ಬಂಧಿಸಿ ಠಾಣೆಗೆ ಕರೆತರುತ್ತಿದ್ದರು.
ಬಂಧಿತ ಆರೋಪಿಗಳನ್ನು ಪಾಂಡೇಶ್ವರ ಠಾಣೆಗೆ ಕರೆತರುತ್ತಿದ್ದ ವೇಳೆ ರೋಜಾರಿಯೋ ಚರ್ಚ್ ರಸ್ತೆಯಲ್ಲಿ ಅಲ್ತಾಫ್ ಹುಸೇನ್ ಏಕಾಏಕಿ ಪೊಲೀಸರನ್ನು ತಳ್ಳಿ ಹಲ್ಲೆ ಮಾಡಿ, ಕೈಗೆ ಹ್ಯಾಂಡ್‌ಕಫ್ ಇದ್ದ ಸ್ಥಿತಿಯಲ್ಲೇ ಓಡಿ ಪರಾರಿಯಾಗಿದ್ದಾನೆ. ಈ ವೇಳೆ ಆತನ ಸಹಚರರಾದ ಮಹಮ್ಮದ್ ಸಿದ್ದಿಕ್ ಹಾಗೂ ರವಿ ಬೌರ ಕೂಡ ತಪ್ಪಿಸಿಕೊಳ್ಳಲು ಯತ್ನಿಸಿದರು. ಆದರೆ ಐವರು ಪೊಲೀಸ್ ಸಿಬ್ಬಂದಿ ಹರಸಾಹಸಪಟ್ಟು ಇಬ್ಬರನ್ನೂ ಮತ್ತೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾದರು. ಆದರೆ ಅಲ್ತಾಫ್ ಹುಸೇನ್ ಮಾತ್ರ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾನೆ.
ಸಿಸಿಟಿವಿಯಲ್ಲಿ ಪರಾರಿ ದೃಶ್ಯ ಸೆರೆ ;
ಅಲ್ತಾಫ್ ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಗಳ ಆಧಾರದಲ್ಲಿ ಪೊಲೀಸರು ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಿದ್ದು, ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆತನಿಗಾಗಿ ಬಲೆ ಬೀಸಿದ್ದಾರೆ.
ಆರೋಪಿ ಅಲ್ತಾಫ್ ಹಾಗೂ ಗ್ಯಾಂಗ್ ವಿರುದ್ಧ ಮಂಗಳೂರು, ಹೈದರಾಬಾದ್, ಬಾಗಲಕೋಟೆ, ಗದಗ ಸೇರಿದಂತೆ ವಿವಿಧ ನಗರಗಳಲ್ಲಿ ವಾಹನ ಕಳ್ಳತನ, ಸರಗಳ್ಳತನ ಹಾಗೂ ಸುಲಿಗೆ ಪ್ರಕರಣಗಳು ದಾಖಲಾಗಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಸಾರ್ವಜನಿಕರಿಗೆ ಪೊಲೀಸರ ಮನವಿ;
ಪರಾರಿಯಾಗಿರುವ ಅಲ್ತಾಫ್ ಬಂಧನಕ್ಕಾಗಿ ಪೊಲೀಸರು ಸಾರ್ವಜನಿಕರ ಸಹಕಾರ ಕೋರಿದ್ದಾರೆ. ಈತನ ಬಗ್ಗೆ ಯಾವುದೇ ಸುಳಿವು ದೊರೆತರೆ ತಕ್ಷಣ ಸಮೀಪದ ಪೊಲೀಸ್ ಠಾಣೆ ಅಥವಾ ಪೊಲೀಸ್ ಕಂಟ್ರೋಲ್ ರೂಂಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am