ಬ್ರೇಕಿಂಗ್ ನ್ಯೂಸ್
29-06-26 04:45 pm HK News Staffer ಕ್ರೈಂ
ಉಡುಪಿ, ಜೂನ್ 29: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನ ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ನಂತರ ಹೆತ್ತ ತಂದ ತಾಯಿ ಮೇಲೆ ಹಲ್ಲೆ ಹಾಗೂ ಬೆದರಿಕೆ ಹಾಕಿದ ಗಂಭೀರ ಆರೋಪದಡಿ ಮಲ್ಪೆ ಪೊಲೀಸ್ ಠಾಣೆಯಲ್ಲಿ ದುಷ್ಟ ಮಗನ ಮೇಲೆ ಪ್ರಕರಣ ದಾಖಲಾಗಿದೆ.
ಬದನಿಡಿಯೂರು ಗ್ರಾಮದ 69 ವರ್ಷದ ಸರಸು ಸುರ್ವರ್ಣ ನೀಡಿದ ದೂರಿನ ಪ್ರಕಾರ, ಅವರ ಎರಡನೇ ಪುತ್ರ ವಿನೋದ್ ಸುರ್ವರ್ಣ ಈ ಕೃತ್ಯ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ.
ಸರಸು ಸುರ್ವರ್ಣ ಹೆಸರಿನಲ್ಲಿದ್ದ ಮನೆಯಲ್ಲಿ ಮಗನೊಂದಿಗೆ ವಾಸವಾಗಿದ್ದ ಸಂದರ್ಭ, ವಿನೋದ್ ನಿರಂತರವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸುವಂತೆ ತಾಯಿಗೆ ಒತ್ತಡ ಹೇರಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಆಸ್ತಿಯನ್ನು ಮಗನ ಹೆಸರಿಗೆ ಬರೆಯಲು ಒಪ್ಪದಿದ್ದಾಗ ಹಲ್ಲೆ ಮಾಡಿ ಬೆದರಿಕೆ ಹಾಕಿ ಒತ್ತಾಯಪೂರ್ವಕವಾಗಿ ದಾಖಲೆಗಳನ್ನು ಸಹಿ ಮಾಡಿಸಿಕೊಂಡಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ನಂತರ ಒತ್ತಾಯಪೂರ್ವಕವಾಗಿ ರಿಜಿಸ್ಟರ್ ಕಚೇರಿಗೆ ಕರೆದುಕೊಂಡು ಹೋಗಿ ಸರಸು ಸುವರ್ಣರ ಹೆಸರಿನಲ್ಲಿದ್ದ 11 ಸೆಂಟ್ಸ್ ಜಾಗ ಮತ್ತು ಮನೆಯನ್ನು ವಿನೋದ ತನ್ನ ಹೆಸರಿಗೆ ಮಾಡಿಕೊಂಡಿದ್ದು ನಂತರ ಈ ವಿಷಯವನ್ನು ಯಾರಿಗೂ ಹೇಳಿಬಾರದಾಗಿ ಬೆದರಿಕೆ ಹಾಕಿದ್ದ. ನೊಂದ ತಾಯಿ ಈ ವಿಚಾರವಾಗಿ ಕುಂದಾಪುರ ಉಪ ವಿಭಾಗಾಧಿಕಾರಿಗಳ ಕೋರ್ಟ್ನಲ್ಲಿ ಕೇಸು ದಾಖಲಿಸಿದ್ದು, ಈ ವಿಚಾರ ತಿಳಿದ ವಿನೋದ್, ಸರಸು ಸುವರ್ಣ ಮತ್ತು ಅವರ ಗಂಡ ದಾಸು, ಮಗಳು ವಿನುತರನ್ನು ಮನೆಯಿಂದ ಹೊರಗೆ ಹಾಕಿದ್ದಾನೆ.
ಈ ಘಟನೆ ಬಳಿಕ ಸರಸು ಎಸಿ ನ್ಯಾಯಾಲಯದ ಮೊರೆ ಹೋಗಿ ಕಾನೂನು ಕ್ರಮಕ್ಕೆ ಮನವಿ ಮಾಡಿದ್ದಾರೆ. ಮಲ್ಪೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆಸ್ತಿ ದಾಖಲೆಗಳು, ವರ್ಗಾವಣೆ ಪ್ರಕ್ರಿಯೆ ಹಾಗೂ ಹಲ್ಲೆ–ಬೆದರಿಕೆ ಆರೋಪಗಳ ಬಗ್ಗೆ ಪ್ರತ್ಯೇಕ ತನಿಖೆ ಆರಂಭಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am