ಬ್ರೇಕಿಂಗ್ ನ್ಯೂಸ್
29-06-26 07:25 pm HK News Staffer ಕ್ರೈಂ
ಮಂಗಳೂರು, ಜೂನ್ 29: ಮಂಗಳೂರು ನಗರದ ಕೊಡಿಯಾಲಬೈಲಿನಲ್ಲಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳಿಸಿದ್ದು ಬಾಂಬ್ ಪತ್ತೆದಳ ಮತ್ತು ಶ್ವಾನದಳ ಪೊಲೀಸರು ಸ್ಥಳದಲ್ಲಿ ಶೋಧ ನಡೆಸಿದ್ದಾರೆ.
ಮಂಗಳೂರು ಜಿಲ್ಲಾ ಕೋರ್ಟಿನ ಇ-ಮೇಲ್ ವಿಳಾಸಕ್ಕೆ ಅನ್ಬನಂತನ್ ಐಯ್ಯಪ್ಪನ್ ಎಂಬ ಹೆಸರಿನಲ್ಲಿ ಇ-ಮೇಲ್ ಸಂದೇಶ ಬಂದಿದ್ದು ಕೋರ್ಟ್ ಆವರಣದಲ್ಲಿ ಕೆಮಿಕಲ್ ಬಾಂಬ್ ಇಟ್ಟು ಸ್ಟೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ. ಇಸ್ರೇಲ್ ದೂತಾವಾಸದೊಂದಿಗೆ ಮಂಗಳೂರು ನ್ಯಾಯಾಲಯವನ್ನೂ ಜೂನ್ 29ರ ಮಧ್ಯಾಹ್ನ ಒಂದು ಗಂಟೆಗೆ ಬಾಂಬಿಟ್ಟು ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದ.
ತನ್ನನ್ನು GenZ DMK ಲೀಡರ್ ಎಂದು ಹೇಳಿಕೊಂಡಿರುವ ಅನ್ಬನಂತನ್ ಐಯ್ಯಪ್ಪನ್, ಸಂಸದ ಎನ್. ಆರ್. ಇಳಂಗೋವನ್ ನಾಡಿಗೆ ದ್ರೋಹ ಎಸಗಿದ್ದಾರೆ, ಈ ಕಾರಣಕ್ಕಾಗಿ ಬಾಂಬ್ ಹಾಕುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾನೆ. ಎಲ್ಲಾ ನ್ಯಾಯಾಧೀಶರ ಮೂಗು ಮತ್ತು ಬಾಯಿಗಳನ್ನು ಮುಚ್ಚಿ ಅವರನ್ನು ಕೂಡಲೇ ಸ್ಥಳಾಂತರಿಸಿ ಎಂದು ಬೆದರಿಕೆ ಹಾಕಿದ್ದಾನೆ.
ಬಾಂಬ್ ಬೆದರಿಕೆ ಹಿನ್ನೆಲೆ ನ್ಯಾಯಾಲಯ ಆವರಣದಲ್ಲಿ ಬಾಂಬ್ ಪತ್ತೆ ದಳ ಮತ್ತು ಸ್ವಾನದಳದಿಂದ ಶೋಧ ನಡೆಸಲಾಗಿದೆ. ಕೋರ್ಟ್ ಕಟ್ಟಡದ ಎಲ್ಲ ಕೊಠಡಿಗಳಲ್ಲಿ ಶೋಧ ಕಾರ್ಯಾಚರಣೆ ಮಾಡಲಾಗಿದೆ. ನಿನ್ನೆ ರಾತ್ರಿ ಇಮೇಲ್ ಬಂದಿದ್ದು ಮಂಗಳೂರು ಪೊಲೀಸರು ಮಧ್ಯಾಹ್ನ ವೇಳೆಗೆ ಕೋರ್ಟ್ ಆವರಣದಲ್ಲಿ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ, ಚಾಮರಾಜನಗರ ಜಿಲ್ಲಾ ಕೋರ್ಟಿಗೂ ಇದೇ ರೀತಿಯ ಇಮೇಲ್ ಸಂದೇಶ ಬಂದಿದೆ. ಎರಡು ದಿನಗಳ ಹಿಂದೆ ಕಾರವಾರ ಮತ್ತು ಬಾಗಲಕೋಟ ಜಿಲ್ಲಾ ನ್ಯಾಯಾಲಯಗಳಿಗೂ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಧಾರವಾಡ ಹೈಕೋರ್ಟ್ ಪೀಠಕ್ಕೂ ಭದ್ರತೆ ಒದಗಿಸಲಾಗಿದೆ. ಜೂನ್ 26ರಂದು ಉಡುಪಿ ಜಿಲ್ಲಾ ಕೋರ್ಟಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿತ್ತು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am