ಬ್ರೇಕಿಂಗ್ ನ್ಯೂಸ್
02-07-26 12:04 pm HK News Staffer ಕ್ರೈಂ
ಭಟ್ಕಳ, ಜುಲೈ 1: ಇತ್ತೀಚೆಗೆ ನಡೆದ ಮುರಿನ್ಕಟ್ಟೆ ಧ್ವಂಸ ವಿವಾದ ಬಳಿಕ ಭಟ್ಕಳ ಪಟ್ಟಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಮುಂಬರುವ ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ.
ಗುಪ್ತಚರ ಇಲಾಖೆಯಿಂದ ಕೋಮು ಸೌಹಾರ್ದಕ್ಕೆ ಧಕ್ಕೆ ಉಂಟಾಗುವ ಸಾಧ್ಯತೆ ಕುರಿತ ಮಾಹಿತಿ ಹಿನ್ನೆಲೆಯಲ್ಲಿ, ಭಟ್ಕಳ ತಹಶೀಲ್ದಾರ್ ಪ್ರವೀಣ್ ಕರಾಂಡೆ ಅವರು ಒಟ್ಟು 60 ಮಂದಿಗೆ ನೋಟಿಸ್ ಜಾರಿ ಮಾಡಿದ್ದಾರೆ. ನೋಟಿಸ್ ಪಡೆದವರಲ್ಲಿ 40 ಮಂದಿ ಮುಸ್ಲಿಂ ಸಮುದಾಯದವರಾಗಿದ್ದು, 20 ಮಂದಿ ಹಿಂದೂ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಎಂದು ತಿಳಿದುಬಂದಿದೆ.
ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ, ಯಾವುದೇ ಅಹಿತಕರ ಚಟುವಟಿಕೆಗಳಲ್ಲಿ ಭಾಗಿಯಾಗುವುದಿಲ್ಲ ಹಾಗೂ ಸಮಾಜದಲ್ಲಿ ಸೌಹಾರ್ದಯುತವಾಗಿ ವರ್ತಿಸುತ್ತೇವೆ ಎಂಬ ಭರವಸೆಯೊಂದಿಗೆ ತಲಾ ₹50 ಸಾವಿರ ಮೊತ್ತದ ಸನ್ನಡತೆಯ ಮುಚ್ಚಳಿಕೆ ಬಾಂಡ್ ಬರೆದುಕೊಡಲು ನೋಟಿಸ್ನಲ್ಲಿ ಸೂಚಿಸಲಾಗಿದೆ.

ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್ಎಸ್ಎಸ್) ಸೆಕ್ಷನ್ 129(ಇ) ಅಡಿಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಶಾಂತಿ ಭಂಗದ ಸಾಧ್ಯತೆ ಇರುವ ವ್ಯಕ್ತಿಗಳ ವಿರುದ್ಧ ಮುನ್ನೆಚ್ಚರಿಕಾ ಕ್ರಮವಾಗಿ ನೋಟಿಸ್ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಆದರೆ, ಜಿಲ್ಲಾಡಳಿತದ ಈ ಕ್ರಮಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದು, ತಮಗೆ ನೋಟಿಸ್ ನೀಡಿರುವುದನ್ನು ಪ್ರಶ್ನಿಸಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ, “ನಿಮ್ಮಿಂದ ಶಾಂತಿ ಕಾಪಾಡುವ ಮುಚ್ಚಳಿಕೆ ಬಾಂಡ್ ಏಕೆ ಪಡೆದುಕೊಳ್ಳಬಾರದು?” ಎಂಬ ಕುರಿತು ವಿಚಾರಣೆ ನಡೆಸಲು ತಹಶೀಲ್ದಾರ್ ಅವರು ಸಂಬಂಧಪಟ್ಟವರಿಗೆ ಖುದ್ದಾಗಿ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ.
ಇನ್ನೊಂದೆಡೆ, ಯಾವುದೇ ವದಂತಿಗಳಿಗೆ ಕಿವಿಗೊಡದೆ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಮನವಿ ಮಾಡಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ನಿಗಾವನ್ನು ಹೆಚ್ಚಿಸಲಾಗಿದ್ದು, ಸಾರ್ವಜನಿಕ ಶಾಂತಿಗೆ ಧಕ್ಕೆ ತರುವವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am