ಬ್ರೇಕಿಂಗ್ ನ್ಯೂಸ್
03-07-26 12:25 pm HK News Staffer ಕ್ರೈಂ
ಮಂಗಳೂರು, ಜುಲೈ 3: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ ಎಸೆಯಲು ಯತ್ನಿಸಿದ ಖದೀಮನನ್ನು ಜೈಲಿನ ಭದ್ರತಾ ವಿಭಾಗದ ಕೆಎಸ್ಐಎಸ್ಎಫ್ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿದಿರುವ ಘಟನೆ ನಡೆದಿದೆ. ಬಂಧಿತ ಆರೋಪಿಯಿಂದ ಗಾಂಜಾ, ಲೈಟರ್ ಹಾಗೂ ಗಾಂಜಾ ಸೇದುವ ಪೇಪರ್ಗಳನ್ನು ವಶಪಡಿಸಲಾಗಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಕೊಳತ್ತಮಜಲು ಕೋಳಕೇರಿ ಮೂಲದ, ಪ್ರಸ್ತುತ ಉರ್ವದಲ್ಲಿ ವಾಸವಿರುವ ತಿಲಕ್ರಾಜ್ ಬಂಧಿತ ಆರೋಪಿ. ಈ ಕೃತ್ಯದ ಹಿಂದೆ ಮೂಡುಶೆಡ್ಡೆ ನಿವಾಸಿ ಕಿರಣ್ ಹಾಗೂ ಸದ್ಯ ಕಾರಾಗೃಹದಲ್ಲಿ ಬಂಧಿಯಾಗಿರುವ ಕೈದಿ ಲಾಯ್ ವೇಗಸ್ ಕೈವಾಡ ಇರುವುದು ಪೊಲೀಸರ ಪ್ರಾಥಮಿಕ ವಿಚಾರಣೆಯಿಂದ ಬೆಳಕಿಗೆ ಬಂದಿದೆ.
ಜುಲೈ 2ರಂದು ಮುಂಜಾನೆ 4:20ರ ಸುಮಾರಿಗೆ ಆರೋಪಿ ತಿಲಕ್ರಾಜ್ ಜೈಲಿನ ಕಾಂಪೌಂಡ್ ಗೋಡೆಯ ಹೊರಗೆ ಸಂಶಯಾಸ್ಪದವಾಗಿ ಓಡಾಡುತ್ತಾ, ಕಾರಾಗೃಹದ ಒಳಗಿರುವ ಅಡುಗೆ ಮನೆ ಪ್ರದೇಶಕ್ಕೆ ಪೊಟ್ಟಣವೊಂದನ್ನು ಎಸೆದಿದ್ದ. ಈ ಘಟನೆಯನ್ನು ಅಲ್ಲಿ ಕಾವಲು ನಿಂತಿದ್ದ ಕೆಎಸ್ಐಎಸ್ಎಫ್ ಆರ್ಪಿಸಿ ಕಿರಣ್ ತಕ್ಷಣವೇ ಗಮನಿಸಿದ್ದಾರೆ. ಕೂಡಲೇ ಅವರು ಎಎಸ್ಐ ಕಿರಣ್ ಅಂಬಿಗ ಅವರಿಗೆ ಅಲರ್ಟ್ ಸಂದೇಶ ರವಾನಿಸಿದ್ದಾರೆ. ಜೈಲು ಸಿಬ್ಬಂದಿ ತನ್ನನ್ನು ಹಿಡಿಯಲು ಬರುತ್ತಿರುವುದನ್ನು ಕಂಡ ಆರೋಪಿ ತಿಲಕ್ರಾಜ್ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಅಷ್ಟಕ್ಕೇ ಬಿಡದ ಸಿಬ್ಬಂದಿ ಸುಮಾರು 500 ಮೀಟರ್ನಷ್ಟು ದೂರ ಆತನನ್ನು ಬೆನ್ನಟ್ಟಿಕೊಂಡು ಹೋಗಿ ಬಂಧಿಸಿದ್ದಾರೆ.
ಬಳಿಕ ಕೆಎಸ್ಐಎಸ್ಎಫ್ ಸೂಚನೆಯಂತೆ ಬರ್ಕೆ ಪೊಲೀಸರು ಸ್ಥಳಕ್ಕೆ ಬಂದು ವಿಚಾರಣೆ ಮಾಡಿದಾಗ ಜೈಲಿನೊಳಗೆ ಗಾಂಜಾ, ಡ್ರಗ್ಸ್ ತೂರುವ ಜಾಲ ಬಯಲಾಗಿದೆ. ಮೂಡುಶೆಡ್ಡೆ ನಿವಾಸಿ ಕಿರಣ್ ಎಂಬಾತ ತನಗೆ ಗಾಂಜಾ, ಲೈಟರ್ ಹಾಗೂ ರೋಲಿಂಗ್ ಪೇಪರ್ ನೀಡಿ, ಜೈಲಿನಲ್ಲಿರುವ ಲಾಯ್ ವೇಗಸ್ ಎಂಬಾತನ ಮೊಬೈಲ್ ನಂಬರ್ ಕೊಟ್ಟಿದ್ದ ಎಂದು ತಿಲಕ್ರಾಜ್ ಬಾಯಿಬಿಟ್ಟಿದ್ದಾನೆ. ಈ ಕೆಲಸಕ್ಕಾಗಿ ತನಗೆ ₹2,000 ಅಡ್ವಾನ್ಸ್ ನೀಡಲಾಗಿತ್ತು. ಜೈಲಿನೊಳಗಿದ್ದ ಕೈದಿ ಲಾಯ್ ವೇಗಸ್ ಫೋನ್ ಮಾಡಿ ಕರೆಕ್ಟಾಗಿ ಅಡುಗೆ ಮನೆ ಇರುವ ಜಾಗಕ್ಕೆ ಎಸೆಯುವಂತೆ ಹೇಳಿದ್ದ ಎಂದು ಆರೋಪಿ ತಿಳಿಸಿದ್ದಾನೆಂದು ವಿಚಾರಣೆ ನಡೆಸಿದ ಪೊಲೀಸರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿ ಬರ್ಕೆ ಪೊಲೀಸರು ಆರೋಪಿಗಳಾದ ತಿಲಕ್ರಾಜ್ ಮತ್ತು ಲಾಯ್ ವೇಗಸ್ ವಿರುದ್ಧ ಎನ್ಡಿಪಿಎಸ್ ಕಾಯ್ದೆ ಹಾಗೂ ಕರ್ನಾಟಕ ಕಾರಾಗೃಹಗಳ ತಿದ್ದುಪಡಿ ಕಾಯ್ದೆ-2022ರ ಸೆಕ್ಷನ್ 42ರ ಅಡಿಯಲ್ಲಿ ಕೇಸ್ ದಾಖಲಿಸಿಕೊಂಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am