ಬ್ರೇಕಿಂಗ್ ನ್ಯೂಸ್
04-07-26 05:58 pm HK News Staffer ಕ್ರೈಂ
ಮಂಗಳೂರು, ಜುಲೈ 4: 'ಡಿಜಿಟಲ್ ಅರೆಸ್ಟ್’ ಸೈಬರ್ ವಂಚನೆ ಪ್ರಕರಣಗಳಲ್ಲಿ ಆರೋಪಿಗಳ ವಹಿವಾಟಿಗೆಬ ನೆರವಾಗಲು ಅಮಾಯಕರನ್ನು ನಂಬಿಸಿ ಕಮಿಷನ್ ಮೇರೆಗೆ ಬ್ಯಾಂಕ್ ಖಾತೆಗಳನ್ನು ಮಾಡಿಸಿಕೊಡುತ್ತಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ಕುಡ್ತಮುಗೇರು ನಿವಾಸಿ ಜುಬೈರ್ (32) ಬಂಧಿತ ಸೈಬರ್ ವಂಚಕ.
ಜುಲೈ 3ರಂದು ಆರೋಪಿಯನ್ನು ಬಂಧಿಸಿದ ಸೈಬರ್ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಠಾಣೆಯಲ್ಲಿ ದಾಖಲಾಗಿದ್ದ ‘ಡಿಜಿಟಲ್ ಅರೆಸ್ಟ್’ ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಈತನ ಕತರ್ನಾಕ್ ಪ್ಲಾನ್ ತಿಳಿದುಬಂದಿತ್ತು. ಮುಗ್ಧ ಸಾರ್ವಜನಿಕರಿಗೆ ಆಮಿಷ ಒಡ್ಡಿ ಅವರ ಹೆಸರಿನಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆಸುತ್ತಿದ್ದ. ಬಳಿಕ ಈ ಖಾತೆಗಳನ್ನು ಸೈಬರ್ ವಂಚಕರಿಗೆ ನೀಡಿ, ಅದರ ಮೂಲಕ ಕೋಟ್ಯಂತರ ರೂಪಾಯಿ ಅಕ್ರಮ ಹಣದಹ ವಹಿವಾಟು ನಡೆಸಲು ಪರೋಕ್ಷವಾಗಿ ಸಹಕರಿಸುತ್ತಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ.
ಈತನ ವಿರುದ್ಧ ಈಗಾಗಲೇ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಂದು ದರೋಡೆ ಪ್ರಕರಣ ಸೇರಿದಂತೆ ರಾಜ್ಯದ ಬೇರೆ ಬೇರೆ ಠಾಣೆಗಳಲ್ಲಿ ಒಟ್ಟು 4 ಗಂಭೀರ ಪ್ರಕರಣಗಳು ದಾಖಲಾಗಿವೆ. ವಾರಂಟ್ ಜಾರಿಯಾಗಿದ್ದರೂ ಪೊಲೀಸರ ಕೈಗೆ ಸಿಗದೆ ಈತ ದೀರ್ಘ ಕಾಲದಿಂದ ತಲೆಮರೆಸಿಕೊಂಡಿದ್ದ. ಇದೀಗ ಸೈಬರ್ ಸೆಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಜುಬೈರ್ ನನ್ನು ಜೈಲಿಗಟ್ಟಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm