ಬ್ರೇಕಿಂಗ್ ನ್ಯೂಸ್
06-07-26 04:49 pm HK News Staffer ಕ್ರೈಂ
ಮಂಗಳೂರು, ಜುಲೈ 6: ಪಣಂಬೂರು ಬೀಚ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಎಂಟ್ರಿ ಕೊಡುವ ಸಂದರ್ಭದಲ್ಲಿ ಚಾಲಕನ ನಿರ್ಲಕ್ಷ್ಯದಿಂದಾಗಿ ಬೃಹತ್ ಗಾತ್ರದ ಟ್ರೇಲರ್ ವಾಹನ ಹೆದ್ದಾರಿಯಲ್ಲಿ ಸಿಲುಕಿ ಭಾನುವಾರ ಸಂಜೆ ತೀವ್ರ ಟ್ರಾಫಿಕ್ ಜಾಮ್ ಉಂಟಾಗಿತ್ತು. ಘಟನೆಗೆ ಚಾಲಕನ ನಿರ್ಲಕ್ಷ್ಯ ಮತ್ತು ಕಂಪನಿ ಅಧಿಕಾರಿಗಳು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದೇ ಕಾರಣ ಎಂಬುದನ್ನು ಮನಗಂಡು ಮಂಗಳೂರು ಉತ್ತರ ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಶನಿವಾರ ಎನ್ಎಂಪಿಟಿ ಬಂದರಿಗೆ ಆಗಮಿಸಿದ್ದ ವಾಹನ ಸರಕನ್ನು ಇಳಿಸಿ ಭಾನುವಾರ ಸಂಜೆ ಹೊರಬಂದಿತ್ತು. ಆದರೆ ಬೀಚ್ ರಸ್ತೆಯಿಂದ ಹೆದ್ದಾರಿಗೆ ಸೇರುವ ಸಂದರ್ಭದಲ್ಲಿ ಟ್ರೇಲರ್ ಮುಂಭಾಗ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು ಹಿಂಭಾಗ ಪೂರ್ತಿಯಾಗಿ ಹೆದ್ದಾರಿಗೆ ಅಡ್ಡಲಾಗಿ ನಿಂತು ವಾಹನ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ಮಂಗಳೂರು–ಸುರತ್ಕಲ್ ನಡುವೆ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳು ಸಾಲುಗಟ್ಟಿ ಎರಡು ಗಂಟೆ ಕಾಲ ಟ್ರಾಫಿಕ್ ಜಾಮ್ ಆಗಿತ್ತು.




ಪ್ರಾಥಮಿಕ ತನಿಖೆಯಲ್ಲಿ, ಸಂಬಂಧಿಸಿದ ಬೃಹತ್ ಟ್ರೇಲರ್ ವಾಹನವು ರಸ್ತೆ ಸಂಚಾರಕ್ಕೆ ಅಗತ್ಯವಿರುವ ಅನುಮತಿ ಪಡೆಯದೇ/ಮಾಹಿತಿ ನೀಡದೇ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದೇ ಬೃಹತ್ ಯಂತ್ರೋಪಕರಣವನ್ನು ಸಾಗಾಟ ಮಾಡಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಟ್ರೇಲರ್ ವಾಹನದ ಚಾಲಕ ವಿನೋದ್ ಕುಮಾರ್ ಸಿಂಗ್, EXG Express Global Logistics ಟ್ರಾನ್ಸ್ ಪೋರ್ಟ್ ಕಂಪನಿಯ ಮಾಲೀಕ ಹಾಗೂ ಯಂತ್ರೋಪಕರಣ ಸಾಗಾಟಕ್ಕೆ ಸಂಬಂಧಿಸಿದ ಕಂಪನಿಯ ಅಧಿಕಾರಿಗಳ ವಿರುದ್ಧ ಮಂಗಳೂರು ಸಂಚಾರ ಉತ್ತರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 173/2026 ಕಲಂ 281, 285 ಬಿ.ಎನ್.ಎಸ್ ಮತ್ತು 184, 201 ಐ.ಎಂ.ವಿ ಅಕ್ಟ್ ರಂತೆ ಪ್ರಕರಣ ದಾಖಲಿಸಲಾಗಿದೆ.
ಸಾರ್ವಜನಿಕರ ಸುರಕ್ಷತೆ ಹಾಗೂ ವಾಹನ ಸಂಚಾರದ ಸುಗಮ ಸಂಚಾರದ ದೃಷ್ಟಿಯಿಂದ ಬೃಹತ್ ಗಾತ್ರದ ವಾಹನಗಳ ಚಾಲನೆ ಸಂದರ್ಭದಲ್ಲಿ ಮತ್ತು ಸಾಗಾಟ ಸಂಸ್ಥೆಗಳು ನಿಯಮಾನುಸಾರ ಅನುಮತಿ ಪಡೆದು, ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm