ಬ್ರೇಕಿಂಗ್ ನ್ಯೂಸ್
14-07-26 02:43 pm HK News Staffer ಕ್ರೈಂ
ಮಂಗಳೂರು, ಜುಲೈ 14: ಮಂಗಳೂರಿನ ಸುರತ್ಕಲ್, ಉರ್ವಾ ಮತ್ತು ವಿವಿಧ ಕಡೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ಪೊಲೀಸ್ ಠಾಣೆಗಳಲ್ಲೂ ತೀವ್ರ ಕಾರ್ಯಾಚರಣೆ ನಡೆಸುವಂತೆ ಆದೇಶ ಹೊರಡಿಸಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ನಿರ್ಧಾರವನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸುತ್ತದೆ. ಕರಾವಳಿ ಭಾಗದಲ್ಲಿ ಕಾನೂನು ಬಾಹಿರವಾಗಿ ಬಾಂಗ್ಲಾ ಪ್ರಜೆಗಳು ನುಸುಳಿ ಕಾರ್ಯಾಚರಿಸುತ್ತಿದ್ದು ರಾಷ್ಟ್ರೀಯ ಭದ್ರತೆಗೆ ಮತ್ತು ಸ್ಥಳೀಯರ ಹಿತಾಸಕ್ತಿಗೆ ಧಕ್ಕೆ ತರುವಂತಹ ಗಂಭೀರ ಆತಂಕಕಾರಿ ವಿಷಯವಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಕೈಗೊಂಡಿರುವ ತನಿಖೆ ಮತ್ತು ಮುಂಜಾಗ್ರತಾ ಕ್ರಮಗಳು ಅತ್ಯಂತ ಶ್ಲಾಘನೀಯ ಎಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪುವೆಲ್ ತಿಳಿಸಿದ್ದಾರೆ.
ಅಕ್ರಮ ನುಸುಳುಕೋರರ ಜಾಲವು ಕೇವಲ ಮಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿರದೆ, ಇಡೀ ಕರಾವಳಿ ಭಾಗದಲ್ಲಿ ಹರಡಿರುವ ಸಾಧ್ಯತೆ ದಟ್ಟವಾಗಿದೆ. ಆದ್ದರಿಂದ, ಪಶ್ಚಿಮ ವಲಯದ ಪೊಲೀಸ್ ಮಹಾನಿರೀಕ್ಷಕರು (IGP) ತಕ್ಷಣವೇ ಮಧ್ಯಪ್ರವೇಶಿಸಿ, ಇದೇ ಮಾದರಿಯ ಕಟ್ಟುನಿಟ್ಟಿನ ತಪಾಸಣೆ ಮತ್ತು ಕಾರ್ಯಾಚರಣೆಯ ಆದೇಶವನ್ನು ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಸೇರಿದಂತೆ ಸಮಗ್ರ ಕರಾವಳಿ ಜಿಲ್ಲೆಗಳ ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗಳಿಗೂ ಹೊರಡಿಸಬೇಕೆಂದು ವಿಶ್ವ ಹಿಂದೂ ಪರಿಷತ್ ಈ ಮೂಲಕ ಆಗ್ರಹಿಸುತ್ತದೆ.
ವಿಶ್ವ ಹಿಂದೂ ಪರಿಷತ್ ಸಂಪೂರ್ಣ ಸಹಕಾರ
ಸಾರ್ವಜನಿಕರು ಕೂಡ ತಮ್ಮ ಸುತ್ತಮುತ್ತಲ ವ್ಯಾಪ್ತಿಯಲ್ಲಿ ಯಾರಾದರೂ ಅನುಮಾನಾಸ್ಪದ ವಾಸ್ತವ್ಯ ಹೂಡಿರುವುದು ಕಂಡುಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಅಥವಾ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಪೊಲೀಸ್ ಅಧಿಕಾರಿಗಳ ಈ ಕರೆಗೆ ಪೂರಕವಾಗಿ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸಲು ಹಾಗೂ ದೇಶದ ಭದ್ರತೆ ಮತ್ತು ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಕರಾವಳಿ ಜಿಲ್ಲೆಗಳಲ್ಲಿ ಅಡಗಿರುವ ಅಕ್ರಮ ಬಾಂಗ್ಲಾ ಪ್ರಜೆಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಗೆ ಸಂಪೂರ್ಣ ಸಹಕಾರ ನೀಡಲು ವಿಶ್ವ ಹಿಂದೂ ಪರಿಷತ್ ಸದಾ ಸಿದ್ಧವಿದೆ ಎಂದು ವಿಶ್ವ ಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹಕಾರ್ಯದರ್ಶಿ ಶರಣ್ ಕುಮಾರ್ ಪಂಪುವೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm