ಬ್ರೇಕಿಂಗ್ ನ್ಯೂಸ್
15-07-26 07:40 pm HK News Staffer ಕ್ರೈಂ
ಮಂಗಳೂರು, ಜುಲೈ 15: ಭಾರೀ ಕುತೂಹಲ ಮತ್ತು ಸಂಚಲನ ಮೂಡಿಸಿದ್ದ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾರೆಂಬ ದೂರು ಮತ್ತು ಬುರುಡೆ ಮುಂದಿಟ್ಟು ಷಡ್ಯಂತ್ರ ನಡೆಸಿದ್ದಾರೆಂಬ ಆರೋಪದ ಪ್ರಕರಣದಲ್ಲಿ ರಾಜ್ಯ ಸರ್ಕಾರ ನೇಮಿಸಿದ್ದ ವಿಶೇಷ ತನಿಖಾ ತಂಡವು (ಎಸ್ಐಟಿ) ಒಂದು ವರ್ಷದ ಬಳಿಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ.
7 ಸಾವಿರಕ್ಕೂ ಅಧಿಕ ಪುಟಗಳ ವರದಿಯನ್ನು ಸಿದ್ಧಪಡಿಸಿರುವ ಎಸ್ಐಟಿ ಅಧಿಕಾರಿಗಳು, ಇದರೊಂದಿಗೆ ಆರೋಪಿಗಳು ಮತ್ತು ಸಾಕ್ಷ್ಯಗಾರರ ಹೇಳಿಕೆಯುಳ್ಳ ವಿಡಿಯೋ ರೆಕಾರ್ಡ್ ಗಳನ್ನೂ ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದ್ದಾರೆ. ಇದರಲ್ಲಿ ಒಟ್ಟು 255 ಸಾಕ್ಷಿಗಳ ಹೇಳಿಕೆಯನ್ನು ಮತ್ತು ವಿಧಿ ವಿಜ್ಞಾನ ತಂಡ ನೀಡಿರುವ ವರದಿಯನ್ನೂ ದಾಖಲಿಸಲಾಗಿದೆ.
ಬುರುಡೆ, ಅಸ್ಥಿಪಂಜರ, ಮೊಬೈಲ್, ದಾಖಲೆಗಳು ಮತ್ತು ಎಫ್.ಎಸ್.ಎಲ್ ಪ್ರಯೋಗಾಲಯಕ್ಕೆ ಕಳುಹಿಸಲಾದ ಎಲ್ಲ ರೀತಿಯ ವಸ್ತುಗಳನ್ನು ಕೂಡ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ವೇಳೆ, ಪ್ರಮುಖ ದೂರುದಾರ ಮತ್ತು ಆಬಳಿಕ ಸಾಕ್ಷ್ಯಗಾರನಾಗಿ ಬದಲಾಗಿದ್ದ ಚಿನ್ನಯ್ಯ ಮತ್ತು ಆತನ ಪತ್ನಿ ನ್ಯಾಯಾಲಯದ ಆವರಣಕ್ಕೆ ಬಂದಿದ್ದರು.






ಭಾರೀ ಸಂಚಲನ ಮೂಡಿಸಿದ್ದ ಪ್ರಕರಣ
ಧರ್ಮಸ್ಥಳದಲ್ಲಿ ಪೌರ ಕಾರ್ಮಿಕನಾಗಿ ನಿವೃತ್ತಿ ಪಡೆದು ಹೋಗಿದ್ದ ಚಿನ್ನಯ್ಯ ಸುಮಾರು ಹತ್ತು ವರ್ಷಗಳ ಬಳಿಕ ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದಾಗಿ ಹೇಳಿ ಧರ್ಮಸ್ಥಳ ಠಾಣೆಯಲ್ಲಿ 2025ರ ಮೇ ತಿಂಗಳಲ್ಲಿ ದೂರು ನೀಡಿದ್ದು ರಾಜ್ಯ ಮತ್ತು ದೇಶದಲ್ಲಿ ಭಾರೀ ಸಂಚಲನ ಮೂಡಿಸಿತ್ತು. ಆನಂತರ, ಎಡಿಜಿಪಿ ಪ್ರಣಬ್ ಮೊಹಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆಯಾಗಿದ್ದಲ್ಲದೆ, ಚಿನ್ನಯ್ಯ ಗುರುತಿಸಿದ್ದ 15 ಜಾಗಗಳಲ್ಲಿ ಎಸ್ಐಟಿ ಅಧಿಕಾರಿಗಳು ಅಗೆದು ಶವಗಳ ಶೋಧ ನಡೆಸಿದ್ದರು. ಆದರೆ ಆತ ಹೇಳಿದಷ್ಟು ಶವಗಳ ಬಗ್ಗೆ ಸಾಕ್ಷ್ಯ ಸಿಗದಿರುವ ಹಿನ್ನೆಲೆಯಲ್ಲಿ ತನಿಖೆ ದೂರುದಾರನ ವಿರುದ್ಧವೇ ತಿರುಗಿತ್ತು.
ಮೊದಲಿಗೆ ಮಾಸ್ಕ್ ಮ್ಯಾನ್ ಆಗಿದ್ದ ಚಿನ್ನಯ್ಯನನ್ನು ಆಗಸ್ಟ್ 23ರಂದು ಎಸ್ಐಟಿ ಬಂಧಿಸಿ ವಿಚಾರಣೆ ನಡೆಸಿತ್ತು. ಬಂಧನದ ಬಳಿಕ ಬುರುಡೆ ಷಡ್ಯಂತ್ರದ ಬಗ್ಗೆ ಹೇಳಿಕೆ ನೀಡಿದ್ದರಿಂದ ಒಟ್ಟು ಪ್ರಕರಣವೇ ತಿರುವು ಮುರುವಾಗಿತ್ತು. ಹೀಗಾಗಿ ಸುಳ್ಳು ದೂರು ಕೊಟ್ಟು ಕ್ಷೇತ್ರದ ಅವಹೇಳನಕ್ಕೆ ಷಡ್ಯಂತ್ರ ನಡೆಸಿದ್ದಾರೆಂದು ಎಸ್ಐಟಿ ಪ್ರಕರಣ ದಾಖಲಿಸಿದ್ದಲ್ಲದೆ, ಪ್ರಕರಣದ A1 ಆರೋಪಿಯಾಗಿ ಚಿನ್ನಯ್ಯನನ್ನು ಗುರುತಿಸಿತ್ತು. ಈ ನಡುವೆ, 2025 ರ ನವೆಂಬರ್ ನಲ್ಲಿ 3,500 ಕ್ಕೂ ಹೆಚ್ಚು ಪುಟಗಳ 'ಸುಳ್ಳು ಸಾಕ್ಷ್ಯ'ದ ಕುರಿತಾಗಿ ಪ್ರಥಮ ವರದಿಯನ್ನು ಎಸ್ಐಟಿ ಕೋರ್ಟಿಗೆ ಸಲ್ಲಿಸಿತ್ತು. ವರದಿಯಲ್ಲಿ ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್ ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ ಷಡ್ಯಂತ್ರ ರೂಪಿಸಿದ್ದಾರೆಂದು ಉಲ್ಲೇಖಿಸಲಾಗಿತ್ತು ಎನ್ನುವ ಮಾಹಿತಿಗಳಿದ್ದವು. ಇದೀಗ ಒಟ್ಟು ಪ್ರಕರಣದ ಬಗ್ಗೆ ಅಂತಿಮ ವರದಿಯನ್ನು ಸಿದ್ದಪಡಿಸಿ ಬೆಳ್ತಂಗಡಿ ಕೋರ್ಟಿಗೆ ಸಲ್ಲಿಸಲಾಗಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm