ಬ್ರೇಕಿಂಗ್ ನ್ಯೂಸ್
16-07-26 05:10 pm HK News Staffer ಕ್ರೈಂ
ಮಂಗಳೂರು, ಜುಲೈ 16: 'ಡ್ರಗ್ಸ್ ಫ್ರೀ ಮಂಗಳೂರು' ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ರಾಜಧಾನಿ ದೆಹಲಿಯಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಬೆಂಗಳೂರಿಗೆ ತರುತ್ತಿರುವಾಗ ಬೆಳ್ತಂಗಡಿ ಮೂಲದ ಇಬ್ಬರನ್ನು ಬಾಗಲಕೋಟೆ ಜಿಲ್ಲೆಯಲ್ಲಿ ದಸ್ತಗಿರಿ ಮಾಡಿದ್ದು ಅವರ ಬಳಿಯಿದ್ದ ಬೃಹತ್ ಪ್ರಮಾಣದ ಐದು ಕೋಟಿ ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿದ್ದಾರೆ.
ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ಅಲ್ಫಾಜ್(28) ಮತ್ತು ಉಜಿರೆ ಲಾಯಿಲ ನಿವಾಸಿ ಮೊಹಮ್ಮದ್ ಮುಸ್ತಾಫಾ (28) ಬಂಧಿತರು.
ಕಳೆದ ಜೂನ್ 25ರಂದು ಮಂಗಳೂರು ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಬಳಿಯ ಮನೆಯೊಂದರಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಅಣ್ಣಪ್ಪ ಸ್ವಾಮಿ @ ಮನು ಎಂಬಾತನನ್ನು ದಸ್ತಗಿರಿ ಮಾಡಿದ್ದರು. ಆತನ ವಶದಿಂದ 1,50,000/- ರೂ. ಮೌಲ್ಯದ 15.17 ಗ್ರಾಂ ಮಾದಕ ವಸ್ತು ಎಂಡಿಎಂಎ ಸ್ವಾಧೀನಪಡಿಸಲಾಗಿತ್ತು. ಆತನಿಗೆ ಡ್ರಗ್ಸ್ ಪೂರೈಕೆ ಎಲ್ಲಿಂದ ಆಗುತ್ತಿದೆ ಎಂಬ ಮಾಹಿತಿ ಬೆನ್ನತ್ತಿ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದರು.



ದೆಹಲಿಯಿಂದ ಮಾದಕವಸ್ತು ಖರೀದಿಸಿ ಬೆಂಗಳೂರಿಗೆ ತರಲಾಗುತ್ತಿದೆ ಎಂಬ ಖಚಿತ ಮಾಹಿತಿ ಪಡೆದ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿಗಳು ಜುಲೈ 15ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಎಂಬಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ರಾಯಲ್ ಇನ್ ಲಾಡ್ಜ್ ಗೆ ದಾಳಿ ನಡೆಸಿ ಮಾದಕ ವಸ್ತುವನ್ನು ಹೊಂದಿದ್ದ ಆರೋಪಿಗಳಾದ ಅಲ್ಪಾಜ್ ಮತ್ತು ಮುಸ್ತಫಾ ಎಂಬವರನ್ನು ಬಲೆಗೆ ಕೆಡವಿದ್ದಾರೆ. ಆರೋಪಿಗಳ ವಶದಿಂದ ಒಟ್ಟು 5 ಕೋಟಿ 20 ಲಕ್ಷ ರೂ. ಮೌಲ್ಯದ 5 ಕೆಜಿ 196 ಗ್ರಾಂ ಎಂಡಿಎಂಎ, ಬ್ಯಾಗ್ ಮತ್ತು ಮೊಬೈಲ್ ಫೋನ್ ಗಳನ್ನು ವಶಪಡಿಸಲಾಗಿದೆ.
ಆರೋಪಿ ಮೊಹಮ್ಮದ್ ಅಲ್ಫಾಜ್ ಎಂಬಾತನ ವಿರುದ್ದ ಈ ಹಿಂದೆ 2024 ರಲ್ಲಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಹಾಗೂ 2026 ರಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಎಂ.ಡಿ.ಎಂ.ಎ ಮಾರಾಟ ಮಾಡಿದ ಬಗ್ಗೆ ಪ್ರಕರಣಗಳು ದಾಖಲಾಗಿರುತ್ತವೆ. ಆರೋಪಿಗಳು ಕಾರಿನಲ್ಲಿ ದೆಹಲಿಯಿಂದ ಮಾದಕ ವಸ್ತುವನ್ನು ಖರೀದಿಸಿ, ಬೆಂಗಳೂರು ನಗರವನ್ನು ಕೇಂದ್ರವಾಗಿಸಿಕೊಂಡು ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ಜಿಲ್ಲೆಗಳಿಗೆ ಪೂರೈಕೆ ಮಾಡುತ್ತಿದ್ದರು. ಈ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು ಅವರ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm