ಬ್ರೇಕಿಂಗ್ ನ್ಯೂಸ್
20-07-26 07:47 pm HK News Staffer ಕ್ರೈಂ
ಚಿಕ್ಕಮಗಳೂರು, ಜುಲೈ 20: ಅನಾರೋಗ್ಯ ನಿವಾರಣೆಯಾಗಲೆಂದು ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಮೇಲೆ ದೇವಸ್ಥಾನದ ಪೂಜಾರಿಯೇ ನಂಬಿಕೆ ದುರುಪಯೋಗಪಡಿಸಿಕೊಂಡು ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಮಹಿಳೆ ಚಿಕ್ಕಮಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.
ಜುಲೈ 17ರಂದು ದಾಖಲಾಗಿರುವ ದೂರಿನ ಪ್ರಕಾರ, ಅನಾರೋಗ್ಯದ ಹಿನ್ನೆಲೆಯಲ್ಲಿ ಮಹಿಳೆ ಬಸ್ಕಲ್ನ ಪಂಜುರ್ಲಿ ದೇವಸ್ಥಾನಕ್ಕೆ ಆಗಾಗ್ಗೆ ಪೂಜೆಗಾಗಿ ತೆರಳುತ್ತಿದ್ದರು. ಈ ವೇಳೆ ದೇವಸ್ಥಾನದ ಪೂಜಾರಿ ಶ್ರೀಧರ್ ಪರಿಚಯವಾಗಿತ್ತು. ಈ ಪರಿಚಯವನ್ನು ದುರುಪಯೋಗಪಡಿಸಿಕೊಂಡ ಪೂಜಾರಿ, ಹಲವು ಬಾರಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.
ಈ ಘಟನೆ ಬಗ್ಗೆ ಯಾರಿಗಾದರೂ ಮಾಹಿತಿ ನೀಡಿದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಪೂಜಾರಿ ಬೆದರಿಕೆ ಹಾಕಿದ್ದರಿಂದ ಇಷ್ಟುದಿನ ಮೌನವಾಗಿದ್ದೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೆ, ಈ ದೌರ್ಜನ್ಯದ ಪರಿಣಾಮ ತಾನು ಗರ್ಭಿಣಿಯಾಗಿರುವುದಾಗಿ ಕೂಡ ಮಹಿಳೆ ಆರೋಪಿಸಿದ್ದಾರೆ.
ಆರೋಪಿ ಪತ್ತೆಗೆ ಪೊಲೀಸರ ಶೋಧ;
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿ ಪೂಜಾರಿ ಶ್ರೀಧರ್ನ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ. ಪ್ರಕರಣದ ಎಲ್ಲ ಆಯಾಮಗಳಲ್ಲೂ ತನಿಖೆ ಮುಂದುವರಿದಿದ್ದು, ಮಹಿಳೆಯ ಆರೋಪಗಳು ಹಾಗೂ ಲಭ್ಯವಾಗುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm