ಬ್ರೇಕಿಂಗ್ ನ್ಯೂಸ್
20-07-26 10:17 pm HK News Desk ಕ್ರೈಂ
ತ್ರಿಪುರಾ, ಜುಲೈ 20: ತ್ರಿಪುರಾ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅನುರಾಗ್ ಧನಕರ್ ಅಗರ್ತಲಾದಲ್ಲಿರುವ ರಾಜ್ಯ ಪೊಲೀಸ್ ಪ್ರಧಾನ ಕಚೇರಿಯ ತಮ್ಮ ಚೇಂಬರ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸೋಮವಾರ ಬೆಳಗ್ಗೆ ಕಚೇರಿಗೆ ಆಗಮಿಸಿದ್ದ ಧನಕರ್ ಅವರ ಕೊಠಡಿಯಿಂದ ಗುಂಡಿನ ಸದ್ದು ಕೇಳಿಬಂದ ಬಳಿಕ ಸಿಬ್ಬಂದಿ ಒಳಗೆ ತೆರಳಿದಾಗ ಅವರು ತೀವ್ರ ರಕ್ತಸ್ರಾವದಿಂದ ಕುಸಿದುಬಿದ್ದ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ತಮ್ಮ ಸೇವಾ ಪಿಸ್ತೂಲ್ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಸಾವಿನ ನಿಖರ ಕಾರಣ ಇನ್ನೂ ದೃಢಪಟ್ಟಿಲ್ಲ.
ಘಟನೆ ಬಳಿಕ ತಕ್ಷಣವೇ ಅನುರಾಗ್ ಧನಕರ್ ಅವರನ್ನು ಸಮೀಪದ ಗೋವಿಂದ್ ವಲ್ಲಭ್ ಪಂತ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಆಸ್ಪತ್ರೆಗೆ ತರುವ ಮುನ್ನವೇ ಅವರು ಮೃತಪಟ್ಟಿದ್ದರು ಎಂದು ವೈದ್ಯರು ದೃಢಪಡಿಸಿದ್ದಾರೆ. ಆಸ್ಪತ್ರೆಯ ಮುಖ್ಯಸ್ಥ ಪ್ರದೀಪ್ ಭೌಮಿಕ್ ಮಾತನಾಡಿ, ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಧನಕರ್ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಮರಣೋತ್ತರ ಪರೀಕ್ಷೆಯ ಬಳಿಕವೇ ಸಾವಿನ ನಿಖರ ಕಾರಣ ತಿಳಿಯಲಿದೆ ಎಂದು ತಿಳಿಸಿದ್ದಾರೆ.
ವಿಧಿವಿಜ್ಞಾನ ತಂಡದಿಂದ ಪರಿಶೀಲನೆ;
ಡಿಜಿಪಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ವಿಧಿವಿಜ್ಞಾನ ತಜ್ಞರ ತಂಡ ಪೊಲೀಸ್ ಪ್ರಧಾನ ಕಚೇರಿಗೆ ಆಗಮಿಸಿ ಪರಿಶೀಲನೆ ನಡೆಸಿದೆ. ಅವರು ಈ ನಿರ್ಧಾರ ಕೈಗೊಳ್ಳಲು ವೈಯಕ್ತಿಕ ಅಥವಾ ವೃತ್ತಿಪರ ಒತ್ತಡ ಕಾರಣವಾಗಿತ್ತೇ ಎಂಬುದರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ.
1994ರ ಬ್ಯಾಚ್ನ ಐಪಿಎಸ್ ಅಧಿಕಾರಿ;
ಅನುರಾಗ್ ಧನಕರ್ ಅವರು 1994ರ ಬ್ಯಾಚ್ನ ಐಪಿಎಸ್ ಅಧಿಕಾರಿ ಆಗಿದ್ದರು. ಈ ಹಿಂದೆ ಅವರು ಹಲವು ಪ್ರಮುಖ ತನಿಖೆಗಳಲ್ಲಿ ಭಾಗಿಯಾಗಿದ್ದರು. 1984ರ ಸಿಖ್ ವಿರೋಧಿ ಹತ್ಯಾಕಾಂಡ ಪ್ರಕರಣದ ತನಿಖೆಗೆ ರಚಿಸಲಾಗಿದ್ದ ವಿಶೇಷ ತನಿಖಾ ತಂಡ (SIT) ನೇತೃತ್ವ ವಹಿಸಿದ್ದ ಅವರು, ಉದ್ಯಮಿ ನೀರವ್ ಮೋದಿ ಪ್ರಕರಣದ ಸಿಬಿಐ ತನಿಖೆಯಲ್ಲೂ ಪ್ರಮುಖ ಪಾತ್ರ ನಿರ್ವಹಿಸಿದ್ದರು.
ಮುಖ್ಯಮಂತ್ರಿ ಸೇರಿದಂತೆ ಗಣ್ಯರು ಭೇಟಿ ;
ಡಿಜಿಪಿ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ತ್ರಿಪುರಾ ಮುಖ್ಯಮಂತ್ರಿ ಮಾಣಿಕ್ ಸಾಹ, ಮುಖ್ಯ ಕಾರ್ಯದರ್ಶಿ ಜೆ.ಕೆ. ಸಿನ್ಹಾ, ಆರೋಗ್ಯ ಕಾರ್ಯದರ್ಶಿ ಕಿರಣ್ ಗಿಟ್ಟೆ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು.
ಡಿಜಿಪಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕೀಯ ಚರ್ಚೆಯೂ ಆರಂಭವಾಗಿದೆ. ವಿರೋಧ ಪಕ್ಷದ ನಾಯಕ ಜಿತೇಂದ್ರ ಚೌಧರಿ ಅವರು ಸಾವಿನ ಹಿಂದಿನ ನೈಜ ಕಾರಣ ತಿಳಿಯಲು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
"ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಕಚೇರಿಯಲ್ಲೇ ಮೃತಪಟ್ಟಿರುವುದು ಗಂಭೀರ ವಿಚಾರ. ಸಾವಿನ ನಿಜವಾದ ಕಾರಣ ಮತ್ತು ಅದರ ಹಿಂದಿನ ಬೆಳವಣಿಗೆಗಳನ್ನು ಬಹಿರಂಗಪಡಿಸಲು ನ್ಯಾಯಾಂಗ ತನಿಖೆ ಅಗತ್ಯ" ಎಂದು ಅವರು ಹೇಳಿದ್ದಾರೆ.
ತ್ರಿಪುರಾ ಬಿಜೆಪಿ ಅಧ್ಯಕ್ಷ ಅಭಿಷೇಕ್ ಡೆಬ್ರಾಯ್ ಕೂಡ ಧನಕರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಮರಣೋತ್ತರ ಪರೀಕ್ಷೆಯ ಬಳಿಕವೇ ಸಾವಿನ ಕಾರಣ ಸ್ಪಷ್ಟವಾಗಲಿದೆ ಎಂದು ತಿಳಿಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದು, ಮರಣೋತ್ತರ ಪರೀಕ್ಷೆ ಹಾಗೂ ವಿಧಿವಿಜ್ಞಾನ ವರದಿ ಬಳಿಕವೇ ಸಾವಿನ ಸಂಪೂರ್ಣ ಕಾರಣ ಬಹಿರಂಗವಾಗುವ ಸಾಧ್ಯತೆ ಇದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm