ಬ್ರೇಕಿಂಗ್ ನ್ಯೂಸ್
22-07-26 10:55 am HK News Staffer ಕ್ರೈಂ
ಮಂಗಳೂರು, ಜುಲೈ 22: ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯೊಬ್ಬ ಮನೆಯ ಡ್ರಾವರಿನಲ್ಲಿ ಇಟ್ಟಿದ್ದ 6.37 ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕಳವುಗೈದ ಪ್ರಕರಣದಲ್ಲಿ ಉತ್ತರ ಪ್ರದೇಶ ಮೂಲದ ಕಾರ್ಮಿಕನನ್ನು ಕಂಕನಾಡಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಗರದ ಮೇರಿಹಿಲ್ ಬಾಂದೋಟ್ಟು ಎಂಬಲ್ಲಿ ಮನೆಯೊಂದರ ಹಿಂಭಾಗದ ಕೊಠಡಿಯ ಛಾವಣಿ ಬದಲಾವಣೆ ಹಾಗೂ ನಂತರ ಹಾಲ್ನಲ್ಲಿ ಫಾಲ್ಸ್ ಸೀಲಿಂಗ್ ಕಾಮಗಾರಿಯನ್ನು ಮೇಸ್ತ್ರಿ ಹಾಗೂ ಸಹಾಯಕ ಕೆಲಸದಾರರ ಮೂಲಕ ನಡೆಸಲಾಗಿತ್ತು. ಈ ಅವಧಿಯಲ್ಲಿ ಮನೆಯ ಕೋಣೆಯ ಟೇಬಲ್ ಡ್ರಾವರ್ನಲ್ಲಿ ಸಣ್ಣ ಪರ್ಸ್ ನಲ್ಲಿ ಇರಿಸಿದ್ದ 20 ಗ್ರಾಂ ತೂಕದ ಚಿನ್ನದ ಕಡಗ, 17 ಗ್ರಾಂ ತೂಕದ ಚಿನ್ನದ ಚೈನ್, 8 ಗ್ರಾಂ ತೂಕದ ಉಂಗುರ, 4 ಗ್ರಾಂ ತೂಕದ ಚಿನ್ನದ ಉಂಗುರ ಹಾಗೂ ಸೊನಾಟಾ ಕಂಪನಿಯ ಗೋಲ್ಡ್ ಕೋಟೆಡ್ ವಾಚ್ ಸೇರಿ ಸುಮಾರು ರೂ 6,37,000/ ಬೆಲೆಯ ಸೊತ್ತುಗಳು ಕಳವು ಆಗಿದ್ದು, ಈ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಠಾಣಾ ಅ.ಕ್ರ 68/2026 ಕಲಂ 305 ಬಿ.ಎನ್.ಎಸ್ ರಂತೆ ಪ್ರಕರಣ ದಾಖಲಾಗಿತ್ತು.
ಪ್ರಕರಣ ದಾಖಲಿಸಿ ತನಿಖೆ ಕೈಗೊಂಡು ಮನೆ ಕೆಲಸಕ್ಕೆ ಇದ್ದ ಕೆಲಸಗಾರರನ್ನು ಕೂಲಂಕುಷವಾಗಿ ವಿಚಾರಣೆಯನ್ನು ನಡೆಸಿದಾಗ ಆರೋಪಿ ಉತ್ತರ ಪ್ರದೇಶ ಮೂಲದ, ಹಾಲಿ ಮಂಗಳೂರು ಬಂದರಿನಲ್ಲಿ ನೆಲೆಸಿದ್ದ ಜಹೀರುದ್ದೀನ್ (24) ಚಿನ್ನಾಭರಣ ಹಾಗೂ ವಾಚನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಆರೋಪಿಯಿಂದ ಕಳವಾಗಿದ್ದ ಚಿನ್ನಾಭರಣಗಳನ್ನು ಹಾಗೂ ವಾಚನ್ನು ಪೊಲೀಸರು ವಶಪಡಿಸಿದ್ದಾರೆ. ಆರೋಪಿಯನ್ನು ಮುಂದಿನ ಕ್ರಮದ ಕುರಿತು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದೆ.
ಪ್ರಕರಣವನ್ನು ಭೇಧಿಸುವಲ್ಲಿ ಮಂ.ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಡಿ.ಅರ್ ಮಂಜಪ್ಪ, ಪೊಲೀಸ್ ಸಬ್ ಇನ್ಸ್ಪೆಕ್ಟರ್ ಅರುಣ್ ಕುಮಾರ್.ಡಿ ಹಾಗೂ ಠಾಣೆಯ ಸಿಬ್ಬಂದಿಯ ತಂಡವು ಕ್ಷಿಪ್ರ ಹಾಗೂ ಕೂಲಂಕುಷವಾಗಿ ವಿಚಾರಣೆಯನ್ನು ನಡೆಸಿ ಪ್ರಕರಣವನ್ನು 24 ಗಂಟೆಯೊಳಗೆ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm