ಬ್ರೇಕಿಂಗ್ ನ್ಯೂಸ್
27-07-26 10:21 pm HK News Staffer ಕ್ರೈಂ
ಕಾಪು, ಜು. 27: ಪ್ರಯಾಣಿಕರು ತುಂಬಿದ್ದ ಎರಡು ಖಾಸಗಿ ಎಕ್ಸ್ಪ್ರೆಸ್ ಬಸ್ಗಳ ಚಾಲಕರು ಟೈಮಿಂಗ್ ವಿಚಾರಕ್ಕೆ ಪರಸ್ಪರ ಡಿಕ್ಕಿ ಹೊಡೆದುಕೊಂಡ ಘಟನೆ ಕಾಪು ಬಸ್ ಸ್ಟಾಂಡ್ ಬಳಿ ನಡೆದಿದೆ. ಘಟನೆಯಿಂದ ಬಸ್ಗಳಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದು, ಸುಮಾರು 15 ನಿಮಿಷಗಳ ಕಾಲ ಸರ್ವಿಸ್ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ನಾಲ್ವರನ್ನು ಬಂಧಿಸಿ, ಎರಡೂ ಬಸ್ಗಳನ್ನು ವಶಕ್ಕೆ ಪಡೆದಿದ್ದಾರೆ.
ಉಡುಪಿಯಿಂದ ಮಂಗಳೂರಿನತ್ತ ಸಂಚರಿಸುತ್ತಿದ್ದ ಆನಂದ್ ಟ್ರಾವೆಲ್ಸ್ ಹಾಗೂ ಸಂದೇಶ್ ಟ್ರಾವೆಲ್ಸ್ ಬಸ್ಗಳ ಚಾಲಕರು ಮತ್ತು ನಿರ್ವಾಹಕರ ನಡುವೆ ಉದ್ಯಾವರದಿಂದಲೇ ಟೈಮಿಂಗ್, ಓವರ್ಟೇಕ್ ಹಾಗೂ ಪ್ರಯಾಣಿಕರನ್ನು ಹತ್ತಿಸುವ ವಿಚಾರವಾಗಿ ವಾಗ್ವಾದ ನಡೆಯುತ್ತಿತ್ತು ಎನ್ನಲಾಗಿದೆ. ಇದೇ ವಿವಾದ ಕಾಪು ಬಸ್ ನಿಲ್ದಾಣದಲ್ಲಿ ತಾರಕಕ್ಕೇರಿ, ಸಂದೇಶ್ ಟ್ರಾವೆಲ್ಸ್ ಬಸ್ ಪ್ರಯಾಣಿಕರನ್ನು ಹತ್ತಿಸಲು ಹಾಗೂ ಇಳಿಸಲು ನಿಲ್ಲಿಸಿದ್ದ ವೇಳೆ, ಹಿಂದಿನಿಂದ ಬಂದ ಆನಂದ್ ಟ್ರಾವೆಲ್ಸ್ ಬಸ್ ಉದ್ದೇಶಪೂರ್ವಕವಾಗಿ ಅದರ ಬಲಭಾಗಕ್ಕೆ ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಡಿಕ್ಕಿಯ ರಭಸಕ್ಕೆ ಎರಡೂ ಬಸ್ಗಳಲ್ಲಿದ್ದ ಪ್ರಯಾಣಿಕರು ಆತಂಕದಿಂದ ಕಿರುಚಾಡಿದ್ದು, ಕೆಲಕಾಲ ಪರಿಸ್ಥಿತಿ ಉದ್ವಿಗ್ನಗೊಂಡಿತು. ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳು ಸಂಭವಿಸಿಲ್ಲ.
ಘಟನೆಯ ಬಳಿಕ ಎರಡೂ ಬಸ್ಗಳ ಚಾಲಕರು ಪರಸ್ಪರ ಆರೋಪ-ಪ್ರತ್ಯಾರೋಪ ನಡೆಸುತ್ತಾ, ಬಸ್ಗಳನ್ನು ರಸ್ತೆಯಿಂದ ತೆರವುಗೊಳಿಸಲು ನಿರಾಕರಿಸಿದರು. ಸ್ಥಳೀಯರು ಹಾಗೂ ಆಟೋ ಚಾಲಕರು ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಕಾರಣ, ಸರ್ವಿಸ್ ರಸ್ತೆಯಲ್ಲಿ ಸುಮಾರು 15 ನಿಮಿಷಗಳ ಕಾಲ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಉದ್ದ ಸಾಲು ನಿರ್ಮಾಣವಾಯಿತು.
ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಧಾವಿಸಿದ ಕಾಪು ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡು, ಎರಡೂ ಬಸ್ಗಳನ್ನು ಪೊಲೀಸ್ ಠಾಣೆಗೆ ಸಾಗಿಸಿ ವಿಚಾರಣೆ ನಡೆಸಿದರು.
ತನಿಖೆಯ ಬಳಿಕ ಘಟನೆಗೆ ಸಂಬಂಧಿಸಿದಂತೆ ಬಸ್ ಚಾಲಕರಾದ ರಮೇಶ್ ಮತ್ತು ಅಭಿಷೇಕ್, ನಿರ್ವಾಹಕರಾದ ವಿಜಯಕುಮಾರ್ ಹಾಗೂ ಹರೀಶ್ ಬಿ. ಹೆಗ್ಡೆ ಅವರನ್ನು ಬಂಧಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಎರಡೂ ಬಸ್ಗಳನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಮುಂದುವರಿಸಿದ್ದಾರೆ.


ಸರ್ವಿಸ್ ರಸ್ತೆಯಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪಕ್ಕೆ ಮತ್ತೆ ಆಕ್ರೋಶ;
ಕಾಪು ಸರ್ವಿಸ್ ರಸ್ತೆಯಲ್ಲಿ ಖಾಸಗಿ ಎಕ್ಸ್ಪ್ರೆಸ್ ಬಸ್ಗಳ ಟೈಮಿಂಗ್ ಪೈಪೋಟಿ, ಅಜಾಗರೂಕ ಚಾಲನೆ ಹಾಗೂ ನಿರ್ವಾಹಕರ ನಡುವಿನ ಪದೇಪದೇ ನಡೆಯುವ ಗಲಾಟೆಗಳು ಸಾರ್ವಜನಿಕರ ಜೀವಕ್ಕೆ ಅಪಾಯ ತಂದೊಡ್ಡುತ್ತಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಘಟನೆಗಳು ಮರುಕಳಿಸದಂತೆ ಸರ್ವಿಸ್ ರಸ್ತೆಯಲ್ಲಿ ಎಕ್ಸ್ಪ್ರೆಸ್ ಬಸ್ಗಳ ಸಂಚಾರಕ್ಕೆ ನಿಷೇಧ ಹೇರಬೇಕು ಎಂಬ ಬೇಡಿಕೆ ಮತ್ತೊಮ್ಮೆ ಬಲವಾಗಿ ಕೇಳಿಬಂದಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 06:52 pm
HK News Staffer
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm