ಬ್ರೇಕಿಂಗ್ ನ್ಯೂಸ್
03-08-26 12:26 pm HK News Staffer ಕ್ರೈಂ
ಮಂಗಳೂರು, ಆ. 3: ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಿಂದ ಪೊಲೀಸರ ಕಣ್ಣು ತಪ್ಪಿಸಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಜೈಲು ಅಧಿಕಾರಿಗಳ ದೂರಿನ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯ ಬಂಧನಕ್ಕೆ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
ಪರಾರಿಯಾದ ಆರೋಪಿಯನ್ನು ರೋಶನ್ ಫರ್ನಾಂಡಿಸ್ (36) ಎಂದು ಗುರುತಿಸಲಾಗಿದೆ. ಮೂಡುಬಿದಿರೆ ತಾಲೂಕಿನ ಸಮೀಪದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಈತನನ್ನು ಪುಂಜಾಲಕಟ್ಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿತ್ತು.
ಜೈಲಿನಲ್ಲಿದ್ದ ವೇಳೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ರೋಶನ್ ನನ್ನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಭಾನುವಾರ ಮುಂಜಾನೆ ಆಸ್ಪತ್ರೆಯಲ್ಲಿದ್ದ ವೇಳೆ ಪೊಲೀಸರ ಕಣ್ತಪ್ಪಿಸಿ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ಘಟನೆ ತಿಳಿಯುತ್ತಿದ್ದಂತೆಯೇ ಜೈಲು ಅಧಿಕಾರಿಗಳು ಮಂಗಳೂರು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, "ಜೈಲು ಅಧಿಕಾರಿಗಳು ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ," ಎಂದು ತಿಳಿಸಿದ್ದಾರೆ.
ಆಸ್ಪತ್ರೆಯಿಂದ ಪರಾರಿಯಾಗಿರುವ ಆರೋಪಿಯ ಸುಳಿವು ಪತ್ತೆಹಚ್ಚಲು ಪೊಲೀಸರು ಹಾಗೂ ಜೈಲು ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ಮುಂದುವರಿಸಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ತಪಾಸಣೆ ತೀವ್ರಗೊಳಿಸಲಾಗಿದೆ.
03-08-26 08:44 pm
HK News Staffer
ನನಗೆ ಅನ್ಯಾಯವಾಗಿದೆ, ನನ್ನನ್ನು ಉದ್ದೇಶಪೂರ್ವಕವಾಗಿ...
03-08-26 04:45 pm
ಸುಪ್ರೀಂ ಕೋರ್ಟ್ ಮೆಟ್ಟಿಲೇರಿ ಎಂಕೆ ಪ್ರಾಣೇಶ್ ವಿರುದ...
03-08-26 03:23 pm
ಡಿಕೆಶಿ ಸರ್ಕಾರದ ಮೆಗಾ ಸಂಪುಟ ವಿಸ್ತರಣೆ ; ಸಂಜೆ 4ಕ್...
03-08-26 01:46 pm
ಜಂಕ್ಫುಡ್ ವಿರುದ್ಧ ಖಾದರ್ ಸಮರ ; ಶಾಲಾ–ಕಾಲೇಜುಗಳ...
01-08-26 04:26 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
03-08-26 10:50 pm
HK News Desk
Sweethin Harman, Latent Show, Mangalore: ಜನಪ್...
03-08-26 11:42 am
Mangalore Rain: ಭಾರೀ ಮಳೆಯ ನಡುವೆ ಬಂಟ್ವಾಳದಲ್ಲಿ...
02-08-26 09:42 pm
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
03-08-26 01:48 pm
HK News Staffer
ಬೆಳ್ತಂಗಡಿ ; ಕಾಡಾನೆ ದಾಳಿಗೆ ದಿನಗೂಲಿ ಕಾರ್ಮಿಕ ಬಲಿ...
03-08-26 12:51 pm
ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ವೆನ್ಲಾಕ್ ಆಸ್ಪತ್...
03-08-26 12:26 pm
ಉಳ್ಳಾಲ ಚೀರುಂಭ ಭಗವತೀ ಕ್ಷೇತ್ರದ ಆಡಳಿತ ವಿವಾದ ; ಅಧ...
01-08-26 08:44 pm
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm