ಬ್ರೇಕಿಂಗ್ ನ್ಯೂಸ್
06-08-26 11:48 am HK News Staffer ಕ್ರೈಂ
ಮಂಗಳೂರು , ಆಗಸ್ಟ್ 6: 2019ರಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಹಲವು ವರ್ಷಗಳಿಂದ ತಲೆಮರೆಸಿಕೊಂಡು ವಿದೇಶದಲ್ಲಿ ನೆಲೆಸಿದ್ದ ಆರೋಪಿಯನ್ನು, ಭಾರತಕ್ಕೆ ಮರಳಿದ ತಕ್ಷಣ ಲುಕ್ ಔಟ್ ಸರ್ಕ್ಯುಲರ್ (LOC) ಆಧಾರದ ಮೇಲೆ ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಮುಂಬೈನ ಅಂಧೇರಿ ವೆಸ್ಟ್ ನಿವಾಸಿ ಅಶೋಕ್ ನಾರಾಯಣ್ (63) ಎಂದು ಗುರುತಿಸಲಾಗಿದೆ. 2019ರಲ್ಲಿ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ಬಳಿಕ ಆರೋಪಿ ಹಲವು ವರ್ಷಗಳಿಂದ ತಲೆಮರೆಸಿಕೊಂಡು, ಬಂಧನದಿಂದ ತಪ್ಪಿಸಿಕೊಳ್ಳಲು ವಿಳಾಸ ಬದಲಾಯಿಸಿಕೊಂಡಿದ್ದಲ್ಲದೆ, ನ್ಯಾಯಾಲಯಕ್ಕೂ ಹಾಜರಾಗದೆ ಪರಾರಿಯಾಗಿದ್ದ. ಈ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಯ ವಿರುದ್ಧ ಈಗಾಗಲೇ ಆರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ತನಿಖೆ ವೇಳೆ ಆರೋಪಿ ವಿದೇಶಕ್ಕೆ ತೆರಳಿರುವುದು ಪೊಲೀಸರಿಗೆ ತಿಳಿದುಬಂದಿತ್ತು. ಬಳಿಕ ಆತನ ಪಾಸ್ಪೋರ್ಟ್ ವಿವರಗಳನ್ನು ಸಂಗ್ರಹಿಸಿ, ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ ಮೂಲಕ ಲುಕ್ ಔಟ್ ಸರ್ಕ್ಯುಲರ್ (LOC) ಜಾರಿಗೊಳಿಸಲಾಗಿತ್ತು.
ವಿಮಾನ ನಿಲ್ದಾಣದಲ್ಲೇ ಬಂಧನ;
ಆಗಸ್ಟ್ 1ರಂದು ಆರೋಪಿ ವಿದೇಶದಿಂದ ಭಾರತಕ್ಕೆ ಮರಳಿದ ವೇಳೆ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಮಿಗ್ರೇಶನ್ ಅಧಿಕಾರಿಗಳು LOC ಆಧಾರದ ಮೇಲೆ ಬಂಧಿಸಿದ್ದಾರೆ. ಬಳಿಕ ಆಗಸ್ಟ್ 2ರಂದು ಕಂಕನಾಡಿ ನಗರ ಪೊಲೀಸ್ ಠಾಣೆಯ ಎಎಸ್ಐ ಜಗದೀಶ್ ಹಾಗೂ ಸಿಬ್ಬಂದಿ ರವಿಕುಮಾರ್ ಅವರು ಆರೋಪಿಯನ್ನ ಮಂಗಳೂರಿಗೆ ಕರೆತಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
06-08-26 03:49 pm
HK News Staffer
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಸಮರ್ಥ, ಛಲವಾದಿ...
04-08-26 09:12 pm
ಸಿದ್ದರಾಮಯ್ಯ ಆಪ್ತ ಎಂಬ ಕಾರಣಕ್ಕೆ ನನಗೆ ಅನ್ಯಾಯ ಆಗಿ...
04-08-26 09:10 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
06-08-26 11:03 pm
Mangaluru Staffer
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
ಹೆದ್ದಾರಿ ಬದಿ ವ್ಯಾಪಾರಿಗಳ ವಿರುದ್ಧ ಕಾರ್ಯಾಚರಣೆಗಿಳ...
06-08-26 08:09 pm
ಸುರತ್ಕಲ್ ಎನ್ಐಟಿಕೆ ಕಾಲೇಜು ಹಾಸ್ಟೆಲ್ನಲ್ಲಿ ಸ್ವಯ...
05-08-26 08:08 pm
06-08-26 09:31 pm
HK News Staffer
ಲವ್ - ಸೆಕ್ಸ್ ದೋಖಾ ; ಬಳ್ಳಾರಿಯಲ್ಲಿ ಬೆಚ್ಚಿಬೀಳಿಸಿ...
06-08-26 09:31 pm
ಬೆಂಗಳೂರು ; ಒಂದು ತಿಂಗಳ ಹಿಂದೆ ನೇಪಾಳದಿಂದ ಕೆಲಸಕ್ಕ...
06-08-26 06:13 pm
7 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ...
06-08-26 11:48 am
Surathkal Student Death: ಸುರತ್ಕಲ್ ; ವಾಲಿಬಾಲ್...
06-08-26 11:47 am