ಬ್ರೇಕಿಂಗ್ ನ್ಯೂಸ್
07-08-26 08:44 pm HK News Staffer ಕ್ರೈಂ
ಉಡುಪಿ, ಆ. 7: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಹಾಗೂ ಖಾಸಗಿ ಹೋಟೆಲ್‌ನಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದ ಕಲ್ಮಾಡಿ ನಿವಾಸಿ ಕೃತಿ ಬಂಗೇರಾ (27) ಮನೆಯಲ್ಲೇ ನೇಣು ಬಿಗಿದುಕೊಂಡು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಮಾಹಿತಿಯ ಪ್ರಕಾರ, ಕೃತಿ ಮನೆಯ ಬೆಡ್‌ರೂಮ್‌ನಲ್ಲಿ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಕುಟುಂಬದವರು ಗಮನಿಸಿ ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ಅಷ್ಟರಲ್ಲಾಗಲೇ ಆಕೆ ಕೊನೆ ಉಸಿರೆಳೆದಿದ್ದಾಳೆ.

ಕೃತಿ ಬಂಗೇರಾ ಉಡುಪಿಯ ಕಡಿಯಾಳಿಯಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಉದ್ಯೋಗಿಯಾಗಿದ್ದರು. ಆದರೆ ಕಳೆದ ಸುಮಾರು ಐದು ತಿಂಗಳುಗಳಿಂದ ಅವರು ಕೆಲಸಕ್ಕೆ ತೆರಳಿರಲಿಲ್ಲ. ಇದಕ್ಕೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಪ್ರಾಥಮಿಕ ಮಾಹಿತಿಯ ಪ್ರಕಾರ, ಆಕೆ ಕಳೆದ ಕೆಲವು ದಿನಗಳಿಂದ ತೀವ್ರ ಮಾನಸಿಕ ಒತ್ತಡದಲ್ಲಿದ್ದರು ಎನ್ನಲಾಗಿದೆ. ಘಟನೆ ನಡೆದ ವೇಳೆ ಅವರ ತಾಯಿ ಮನೆಯಿಂದ ಹೊರಗೆ ಹೋಗಿದ್ದರೆಂದು ತಿಳಿದುಬಂದಿದೆ. ಮನೆಗೆ ಮರಳಿದಾಗ ಕೃತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಹಾಗೂ ತನಿಖೆಯ ಬಳಿಕವೇ ಸಾವಿನ ನಿಖರ ಕಾರಣ ಸ್ಪಷ್ಟವಾಗಲಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
07-08-26 10:13 pm
HK News Desk
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
ಅಯೋಧ್ಯೆ ಕಾಣಿಕೆ ಹಣ ಕಳವು ತೀವ್ರ ಆಘಾತಕಾರಿ, ಯಾವುದೇ...
06-08-26 10:22 pm
ಹಿಂದೂ ದೇವಸ್ಥಾನಗಳನ್ನು ಸರ್ಕಾರದ ನಿಯಂತ್ರಣದಿಂದ ಮುಕ...
06-08-26 09:33 pm
07-08-26 10:37 pm
HK News Desk
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm
ಉಡುಪಿಯ ಯುವ ಮಾಡೆಲ್ ಮನೆಯಲ್ಲೇ ಆತ್ಮಹತ್ಯೆ ; ಖಾಸಗಿ...
07-08-26 08:44 pm
Udupi Murder, David Dsouza: ಕುಂದಾಪುರ ಶೂಟೌಟ್ ಮ...
07-08-26 06:00 pm
ಬಟ್ಟೆ ವಿಚಾರಕ್ಕೆ ಸಹೋದರಿಯರ ಸಣ್ಣ ಜಗಳ; ತಾಯಿ ಬೈದಿದ...
07-08-26 04:22 pm