ಬ್ರೇಕಿಂಗ್ ನ್ಯೂಸ್
09-08-26 12:56 pm HK News Staffer ಕ್ರೈಂ
ಬೆಂಗಳೂರು, ಆ 09: ಮನೆಯಿಂದಲೇ ಕೆಲಸ ಕೊಡಿಸುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ರೂಪಾಯಿ ಹಣ ಪೀಕಿಸಿ ವಂಚಿಸುತ್ತಿದ್ದ ಖತರ್ನಾಕ್ ದಂಪತಿಯನ್ನ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಕಾಳಿಕಾ ದೇವಿ ಎಂಟರ್ಪ್ರೈಸಸ್ ಹೆಸರಿನಲ್ಲಿ ಸಾವಿರಾರು ಜನರಿಗೆ ವಂಚಿಸಿರುವ ಆರೋಪ ದಂಪತಿಯ ಮೇಲಿದೆ.
ಬಂಧಿತರನ್ನು ಕಿರಣ್ ಹಾಗೂ ಪತ್ನಿ ಆರತಿ ಎಂದು ಗುರುತಿಸಲಾಗಿದೆ. ದಂಪತಿ ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಕೆಲಸದ ಆಮಿಷವೊಡ್ಡುವ ರೀಲ್ಸ್ಗಳನ್ನು ಪ್ರಕಟಿಸಿ ಜನರನ್ನು ಸೆಳೆಯುತ್ತಿದ್ದರು ಎನ್ನಲಾಗಿದೆ.
2 ಲಕ್ಷದಿಂದ 20 ಲಕ್ಷದವರೆಗೆ ಡೆಪಾಸಿಟ್ !
ಮೇಣದ ಬತ್ತಿ, ಡ್ರೈ ಫ್ರೂಟ್ಸ್ ಹಾಗೂ ಅಗರಬತ್ತಿ ಪ್ಯಾಕಿಂಗ್ ಕೆಲಸ ನೀಡುವುದಾಗಿ ನಂಬಿಸಿ, ಒಬ್ಬೊಬ್ಬರಿಂದ ₹2 ಲಕ್ಷದಿಂದ ₹20 ಲಕ್ಷದವರೆಗೆ ಹಣ ಡೆಪಾಸಿಟ್ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಕಚ್ಚಾ ವಸ್ತುಗಳ ಪ್ಯಾಕಿಂಗ್ ಕೆಲಸಕ್ಕಾಗಿ ₹1 ಲಕ್ಷ ಡೆಪಾಸಿಟ್ ಮಾಡಿದರೆ ಪ್ರತಿ ತಿಂಗಳು ₹23 ಸಾವಿರ ಆದಾಯ ನೀಡುವುದಾಗಿ ದಂಪತಿ ಭರವಸೆ ನೀಡಿದ್ದರು ಎನ್ನಲಾಗಿದೆ. ಇದನ್ನು ನಂಬಿದ ಹಲವರು ಸಾಲ-ಸೂಲ ಮಾಡಿ ಹಣ ಹೂಡಿಕೆ ಮಾಡಿದ್ದರು ಎಂದು ತಿಳಿದುಬಂದಿದೆ.
ಹಣ ಕಟ್ಟಿದವರಿಗೆ ಕೆಲಸವೂ ಇಲ್ಲ, ಹಣವೂ ಇಲ್ಲ!
ದಂಪತಿ ಮಾತು ನಂಬಿ ಹಣ ಪಾವತಿಸಿದ್ದ ಬಳಿಕ ಕೆಲಸವೂ ಸಿಗದೆ, ಹೂಡಿಕೆ ಮಾಡಿದ ಹಣವೂ ವಾಪಸ್ ಬರದೆ ಹಲವರು ಸಂಕಷ್ಟಕ್ಕೆ ಸಿಲುಕಿದ್ದರು ಎನ್ನಲಾಗಿದೆ. ಕಳೆದ ಕೆಲ ತಿಂಗಳಿಂದ ಹಣ ಕಳೆದುಕೊಂಡವರು ದಂಪತಿಯನ್ನು ಸಂಪರ್ಕಿಸಲು ಪ್ರಯತ್ನಿಸಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ ಎಂದು ಆರೋಪಿಸಲಾಗಿದೆ.
ದೇವನಹಳ್ಳಿ, ದೊಡ್ಡಬಳ್ಳಾಪುರ, ಚಿಕ್ಕಜಾಲ, ಕೋಲಾರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಇದೇ ಮಾದರಿಯಲ್ಲಿ ವಂಚನೆ ನಡೆಸಿರುವ ಆರೋಪ ದಂಪತಿಯ ಮೇಲಿದೆ.
ಕೋಟಿ ಕೋಟಿ ಹಣದ ಜಾಡು ಹಿಡಿದ ಪೊಲೀಸರು;
ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿರಣ್ ಹಾಗೂ ಆರತಿಯನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಎಷ್ಟು ಮಂದಿಯಿಂದ ಎಷ್ಟು ಹಣ ಸಂಗ್ರಹಿಸಿದ್ದಾರೆ? ಹಣವನ್ನು ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ? ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕೋಟಿ ಕೋಟಿ ಹಣದ ಜಾಡು ಹಿಡಿದ ಪೊಲೀಸರು
ಈ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಿರಣ್ ಹಾಗೂ ಆರತಿಯನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಎಷ್ಟು ಮಂದಿಯಿಂದ ಎಷ್ಟು ಹಣ ಸಂಗ್ರಹಿಸಿದ್ದಾರೆ? ಹಣವನ್ನು ಎಲ್ಲೆಲ್ಲಿ ಹೂಡಿಕೆ ಮಾಡಿದ್ದಾರೆ? ಎಂಬುದರ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಇಷ್ಟೆಲ್ಲಾ ಪ್ರಕರಣಗಳಾದರೂ ಜನರಿಗೆ ಬುದ್ಧಿ ಬರುತ್ತಿಲ್ಲ!
ಆನ್ಲೈನ್ ಉದ್ಯೋಗ, ವರ್ಕ್ ಫ್ರಮ್ ಹೋಮ್ ಹಾಗೂ ಸುಲಭವಾಗಿ ಹಣ ಗಳಿಸುವ ಆಮಿಷವೊಡ್ಡಿ ವಂಚಿಸುವ ಪ್ರಕರಣಗಳು ಪದೇಪದೇ ಬೆಳಕಿಗೆ ಬರುತ್ತಿದ್ದರೂ, ಜನರು ಇನ್ನೂ ಇಂತಹ ಆಮಿಷಗಳಿಗೆ ಸುಲಭವಾಗಿ ಬಲಿಯಾಗುತ್ತಿರುವುದು ಆತಂಕಕಾರಿ. ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಅಥವಾ ಜಾಹೀರಾತು ನೋಡಿ ಅಪರಿಚಿತ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ದೊಡ್ಡ ಮೊತ್ತದ ಹಣ ಪಾವತಿಸುವ ಮುನ್ನ ಅದರ ಸತ್ಯಾಸತ್ಯತೆ ಪರಿಶೀಲಿಸುವುದು ಅತ್ಯಂತ ಅಗತ್ಯ. ಜನರು ಎಚ್ಚರಿಕೆ ವಹಿಸದಿದ್ದರೆ ಇಂತಹ ಸೈಬರ್ ಹಾಗೂ ಆನ್ಲೈನ್ ವಂಚನೆಗಳಿಗೆ ಬಲಿಯಾಗುವವರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 12:56 pm
HK News Staffer
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm
ನನ್ನ ಪತಿಯ ರಕ್ತ ಚೆಲ್ಲಿದವರಿಗೆ ಕಠಿಣ ಶಿಕ್ಷೆ ಆಗ್ಬೇ...
08-08-26 06:04 pm
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am