ಬ್ರೇಕಿಂಗ್ ನ್ಯೂಸ್
13-08-26 01:17 pm HK News Staffer ಕ್ರೈಂ
ಕಾಸರಗೋಡು, ಆ.13: ವಿವಾಹ ನಿಶ್ಚಿತಾರ್ಥ ಆಗಿದ್ದ ಎಸ್ ಬಿಐ ಬ್ಯಾಂಕ್ ಉದ್ಯೋಗಿಗಳಾಗಿದ್ದ ಕಾಸರಗೋಡು ಮತ್ತು ಕಣ್ಣೂರಿನ ಯುವ ಜೋಡಿ ವಿಡಿಯೋ ಕರೆಯ ಬಳಿಕ ಪ್ರತ್ಯೇಕ ಜಾಗದಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.
ಕಾಸರಗೋಡು ಜಿಲ್ಲೆಯ ಪಳ್ಳಿಕ್ಕರ ಪೂಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಮೈಸೂರು ಜಿಲ್ಲೆಯ ಹುಣಸೂರಿನ ಬಾಡಿಗೆ ಮನೆಯಲ್ಲಿ ಸಾವಿಗೆ ಶರಣಾಗಿದ್ದಾರೆ. ಇವರು ಹುಣಸೂರಿನ ಎಸ್ಬಿಐ ಶಾಖೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬುಧವಾರ ಬೆಳಗ್ಗೆ ಘಟನೆ ನಡೆದಿದ್ದು ಇದಾಗಿ ಕೆಲವೇ ಗಂಟೆಗಳಲ್ಲಿ ಬೆಳಗ್ಗೆ 10 ಗಂಟೆಯ ಸುಮಾರಿಗೆ, ಅನುಶ್ರೀ ಅವರೊಂದಿಗೆ ನಿಶ್ಚಿತಾರ್ಥ ಆಗಿದ್ದ ಯುವಕ ಕಣ್ಣೂರು ಮೂಲದ ವಿ. ಅಮಲ್ (26) ಎರ್ನಾಕುಲಂ ನಾರ್ತ್ ರೈಲ್ವೇ ನಿಲ್ದಾಣದ ಬಳಿಯ ಹೋಟೆಲ್ ಕೊಠಡಿಯಲ್ಲಿ ಸಾವಿಗೆ ಶರಣಾಗಿದ್ದಾರೆ. ಅಮಲ್ ಅವರು ಎರ್ನಾಕುಲಂನ ಎಂ.ಜಿ. ರೋಡ್ ಎಸ್ಬಿಐ ಶಾಖೆಯಲ್ಲಿ ಕೆಲಸ ಮಾಡುತ್ತಿದ್ದರು.
ಅನುಶ್ರೀ ಮತ್ತು ಅಮಲ್ ನಡುವೆ ಇತ್ತೀಚೆಗಷ್ಟೇ ನಿಶ್ಚಿತಾರ್ಥ ನೆರವೇರಿತ್ತು. ಮುಂದಿನ ಡಿಸೆಂಬರ್ 26ರಂದು ಮದುವೆಗೆ ದಿನಾಂಕ ನಿಗದಿಯಾಗಿತ್ತು. ಕಳೆದ ಶನಿವಾರವಷ್ಟೇ ಇಬ್ಬರೂ ಕಾಸರಗೋಡಿನ ಮನೆಗೆ ಬಂದು ಭಾನುವಾರ ಸಂಜೆ ವಾಪಸ್ ತೆರಳಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆನಂತರ ತಮ್ಮ ಕೆಲಸದ ಸ್ಥಳಕ್ಕೆ ತೆರಳಿದ್ದು ಬುಧವಾರ ಬೆಳಗ್ಗೆ ಇಬ್ಬರೂ ವಿಡಿಯೋ ಕರೆ ಮಾಡಿದ್ದಾರೆ. ಈ ವೇಳೆ, ಏನು ಮಾತುಕತೆ ಆಗಿದೆ, ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಗೊತ್ತಾಗಿಲ್ಲ. ಇಬ್ಬರೂ ಡೆತ್ ನೋಟ್ ಬರೆದಿಟ್ಟಿಲ್ಲ. ಖಾಸಗಿ ಮಾತುಕತೆ ವಿಷಯದಲ್ಲಿ ವೈಮನಸ್ಸಿನಿಂದಾಗಿ ಸಾವಿನ ನಿರ್ಧಾರಕ್ಕೆ ಬಂದಿರುವ ಸಾಧ್ಯತೆ ಇದೆ.
ಅಮಲ್ ಸ್ನೇಹಿತ ನೀಡಿದ ಮಾಹಿತಿ ಮೇರೆಗೆ ಎರ್ನಾಕುಲಂ ಟೌನ್ ನಾರ್ತ್ ಪೊಲೀಸರು ಉಳಿದುಕೊಂಡಿದ್ದ ಹೋಟೆಲ್ಗೆ ತೆರಳಿ ಪರಿಶೀಲನೆ ನಡೆಸಿದಾಗ ಆತನೂ ಬೆಳಗ್ಗೆ ಹತ್ತು ಗಂಟೆ ವೇಳೆಗೆ ಕೊಠಡಿಯಲ್ಲಿ ಸಾವಿಗೆ ಶರಣಾಗಿದ್ದ. ಎರಡೂ ಕಡೆಯ ಪೊಲೀಸರು ಅನುಶ್ರೀ ಮತ್ತು ಅಮಲ್ ಸಾವಿನ ಕುರಿತಾಗಿ ತನಿಖೆ ಕೈಗೊಂಡಿದ್ದಾರೆ. ವಿವಾಹಕ್ಕೆ ಕೆಲವೇ ದಿನ ಇರುವಾಗ ದುರಂತ ಸಂಭವಿಸಿರುವುದು ಎರಡೂ ಕುಟುಂಬಗಳಲ್ಲಿ ಆಘಾತ ಮೂಡಿಸಿದೆ.
13-08-26 02:22 pm
HK News Staffer
ಸಚಿವ ಸ್ಥಾನ ಕೈತಪ್ಪಿದ ಮಂಕಾಳ ವೈದ್ಯಗೆ ವಿಧಾನಸಭೆ ಉಪ...
13-08-26 01:00 pm
ಕೊನೆಗೂ ಖಾತೆ ಫೈನಲ್ ; ಜಮೀರ್ ಡೌನ್ ಗ್ರೇಡ್, ಖಾದರ್...
12-08-26 06:57 pm
ರಾಜ್ಯದಲ್ಲಿ ಗುಟ್ಕಾ, ಪಾನ್ ಮಸಾಲಾ ಉತ್ಪನ್ನಗಳಿಗೆ ನಿ...
12-08-26 06:06 pm
13 ಸಚಿವರಿಗೆ ಖಾತೆ ಹಂಚಿಕೆ; ಮುನಿಯಪ್ಪ ಸಮಾಜ ಕಲ್ಯಾಣ...
12-08-26 02:58 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
12-08-26 11:06 pm
HK News Desk
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
Mangalore Railway, Train: ಕಾಲು ಜಾರಿ ರೈಲಿನಡಿ ಬ...
11-08-26 10:23 pm
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
13-08-26 01:17 pm
HK News Staffer
Mangalore crime, Arrest: ಕೈ ಕೋಳದಲ್ಲೇ ಪೊಲೀಸರನ್...
12-08-26 11:18 pm
Panambur Robbery, Update, Mangalore: ಪಣಂಬೂರು...
12-08-26 07:47 pm
ಉಡುಪಿಯಲ್ಲಿ ಶಿಕ್ಷಕಿಯ ಮನೆಯ ಟೆರೇಸ್ ಬಾಗಿಲು ಮುರಿದ...
11-08-26 05:34 pm
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm