ಬ್ರೇಕಿಂಗ್ ನ್ಯೂಸ್
17-08-26 10:54 am HK News Staffer ಕ್ರೈಂ
ಬಂಟ್ವಾಳ, ಆ 17: ಹಾಸನ-ಮಂಗಳೂರು ಮಾರ್ಗವಾಗಿ ಅಕ್ರಮವಾಗಿ ಮಾದಕವಸ್ತು ಸಾಗಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದ ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು, ಓರ್ವ ಆರೋಪಿಯನ್ನು ಬಂಧಿಸಿ 1.05 ಕೋಟಿ ರೂ. ಮೌಲ್ಯದ ಮಾದಕವಸ್ತು, ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರಿನ ಕೆಂಗೇರಿ ನಿವಾಸಿ ಮಹಮ್ಮದ್ ಅಮೀರ್ ಜರ್ತಾಬ್ (35) ಎಂಬಾತ ಬಂಧಿತ ಆರೋಪಿ. ರಾತ್ರಿ ಹೊತ್ತು ಹಾಸನ ಕಡೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಮಾದಕವಸ್ತು ಸಾಗಿಸಲಾಗುತ್ತದೆ ಎಂಬ ಖಚಿತ ಮಾಹಿತಿ ಲಭಿಸಿತ್ತು. ಬಂಟ್ವಾಳ ತಾಲೂಕು ಕಡೇಶಿವಾಲಯ ಗ್ರಾಮದ ಅಮೈ ಎಂಬಲ್ಲಿ ಈ ಕಾರ್ಯಾಚರಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಿಳಿ ಬಣ್ಣದ ಟೊಯೆಟಾ ಕಾರನ್ನು ತಡೆಹಿಡಿದು ಪರಿಶೀಲನೆ ನಡೆಸಿದಾಗ ಆರೋಪಿಯು ಮಾದಕ ವಸ್ತು ಸಾಗಿಸುತ್ತಿರುವುದು ಪತ್ತೆಯಾಗಿದೆ. ತಪಾಸಣೆ ವೇಳೆ ಎಂಡಿಎಂಎ, ಕೊಕೇನ್ ಪತ್ತೆಯಾಗಿದ್ದು, ಖಾಲಿ ಪ್ಲಾಸ್ಟಿಕ್ ಡಬ್ಬ, ಡಿಜಿಟಲ್ ತೂಕದ ಯಂತ್ರಗಳೂ ಸಿಕ್ಕಿವೆ. ಒಟ್ಟು 538.63 ಗ್ರಾಂ ಎಂಡಿಎಂಎ ಮತ್ತು 99.12 ಗ್ರಾಂ ಕೊಕೈನ್ ಹಾಗೂ ಖಾಲಿ ಪ್ಲಾಸ್ಟಿಕ್ ಡಬ್ಬಿಗಳು, ಡಿಜಿಟಲ್ ತೂಕದ ಯಂತ್ರ, ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿವೆ. ಅವುಗಳನ್ನು ವಶಕ್ಕೆ ಪಡೆಯಲಾಗಿದ್ದು, ಮಾದಕ ವಸ್ತುಗಳ ಅಂದಾಜು ಮೌಲ್ಯವು ಎಂಡಿಎಂಎ 53,86,300 ಹಾಗೂ ಕೊಕೇನ್ 49,56,000 ರೂ. ಆಗಿದ್ದು, ಇತರೆ ವಶಪಡಿಸಿಕೊಂಡ ಸ್ವತ್ತುಗಳ ಮೌಲ್ಯ ಸೇರಿದಂತೆ ಒಟ್ಟು ಅಂದಾಜು ಮೌಲ್ಯ 1,05,59,450 ಆಗಿದೆ. ಆರೋಪಿಗೆ ಇರುವ ಸಂಪರ್ಕಗಳ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ಉಪವಿಭಾಗ ಎಎಸ್ಪಿ ಯಶ ಕುಮಾರ್ ಶರ್ಮಾ ಮಾರ್ಗದರ್ಶನ ಹಾಗೂ ಬಂಟ್ವಾಳ ಪೊಲೀಸ್ ಇನ್ಸ್ಪೆಕ್ಟರ್ ಅನಂತಪದ್ಮನಾಭ ನೇತೃತ್ವದಲ್ಲಿ ಗ್ರಾಮಾಂತರ ಠಾಣೆ ಎಸ್ಐ ಮಂಜುನಾಥ ಅವರ ತಂಡ ಈ ಕಾರ್ಯಾಚರಣೆ ನಡೆಸಿದೆ.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm