ಬ್ರೇಕಿಂಗ್ ನ್ಯೂಸ್
20-08-26 01:58 pm HK News Staffer ಕ್ರೈಂ
ಬೆಂಗಳೂರು, ಆ.20: ಉಡುಪಿ ಜಿಲ್ಲೆಯ ಮಲ್ಪೆಯ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿ ವಿಶೇಷ ತನಿಖಾ ತಂಡವನ್ನು(ಎಸ್‍ಐಟಿ) ರಚನೆ ಮಾಡುವ ಬಗ್ಗೆ ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಭರವಸೆ ನೀಡಿದ್ದಾರೆ.
ಬುಧವಾರ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಬಿ.ಕೆ.ಹರಿಪ್ರಸಾದ್ ನಿಯಮ-330ರಡಿ ಪ್ರಸ್ತಾಪಿಸಿದ ಸೂಚನೆಗೆ ಉತ್ತರಿಸಿದ ಅವರು, ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಹಗರಣಕ್ಕೆ ಸಂಬಂಧಿಸಿದಂತೆ ದೂರುಗಳು ಸಲ್ಲಿಕೆಯಾಗಿದ್ದು, ಮೇಲ್ನೋಟಕ್ಕೆ ಅಕ್ರಮ ನಡೆದಿರುವುದು ಗೊತ್ತಾಗಿದೆ. ವಂಚನೆ ಹಾಗೂ ಮ್ಯಾನೇಜರ್ ಸಾವಿನ ಪ್ರಕರಣವನ್ನು ಎಸ್‍ಐಟಿಗೆ ವಹಿಸುವ ಸಂಬಂಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಬಿ.ಕೆ.ಹರಿಪ್ರಸಾದ್, ಉಡುಪಿಯ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‍ನಲ್ಲಿ ಸಾಲದ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ವಂಚನೆ ನಡೆದಿದೆ. ಅಲ್ಲದೆ ಮ್ಯಾನೇಜರ್ ಆಗಿದ್ದ ಸುಬ್ಬಣ್ಣ ಎಂಬುವರ ಕೊಲೆಯಾಗಿದೆ. ಕೃತ್ಯದ ಹಿಂದೆ ಬ್ಯಾಂಕ್ ಅಧ್ಯಕ್ಷ ಹಾಗೂ ಬಿಜೆಪಿ ಶಾಸಕರಾಗಿರುವ ಯಶ್‍ಪಾಲ್ ಸುವರ್ಣ ಅವರ ಪಾತ್ರವಿದೆ. ಹೀಗಾಗಿ ತನಿಖೆಯನ್ನು ಎಸ್‍ಐಟಿಗೆ ವಹಿಸಬೇಕು ಎಂದು ಆಗ್ರಹಿಸಿದರು.
ಉಡುಪಿ ಜಿಲ್ಲೆಯ ಇತಿಹಾಸದಲ್ಲಿ ಮಹಾಲಕ್ಷ್ಮೀ ಕೋ-ಆಪರೇಟಿವ್ ಬ್ಯಾಂಕ್‍ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಫಲಾನುಭವಿಗಳಿಗೆ 20 ಸಾವಿರ ಸಾಲ ನೀಡಿ ಅವರಿಂದ ದಾಖಲಾತಿ ಪಡೆದು 2 ಲಕ್ಷ ರೂ. ಸಾಲ ನೀಡಿರುವ ರೀತಿ ಸಾಲದ ಪತ್ರ ಸೃಷ್ಟಿಸಿದ್ದಾರೆ. ಈ ರೀತಿ 25 ಕೋಟಿ ರೂ.ಗೂ ಅಧಿಕ ಅಕ್ರಮವಾಗಿ ಸಾಲ ಪಡೆಯಲಾಗಿದೆ ಎಂದು ಅವರು ಆರೋಪಿಸಿದರು.
ವಂಚನೆ ಬೆಳಕಿಗೆ ಬರುತ್ತಿದ್ದಂತೆ ಮಲ್ಪೆಯ ಬ್ಯಾಂಕ್ ಶಾಖೆಯ ವ್ಯವಸ್ಥಾಪಕ ಸುಬ್ಬಣ್ಣ ಅವರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಇದು ಆತ್ಮಹತ್ಯೆಯಲ್ಲ. ಇದೊಂದು ವ್ಯವಸ್ಥಿತ ಕೊಲೆ. ಇದರ ಹಿಂದೆ ಸ್ಥಳೀಯ ಶಾಸಕರ ಕೈವಾಡವಿದೆ. ಸಮಗ್ರ ತನಿಖೆಗಾಗಿ ಎಸ್‍ಐಟಿ ರಚಿಸಬೇಕು ಹಾಗೂ ಬ್ಯಾಂಕ್‍ಗೆ ಕೂಡಲೇ ಆಡಳಿತಾಧಿಕಾರಿಯನ್ನು ನೇಮಿಸಬೇಕು ಎಂದು ಸರಕಾರಕ್ಕೆ ಒತ್ತಾಯಿಸಿದರು. ಸಚಿವರ ಪರವಾಗಿ ಉತ್ತರಿಸಿದ ಸಭಾನಾಯಕ ಡಾ.ಯತೀಂದ್ರ ಸಿದ್ದರಾಮಯ್ಯ, ನಕಲಿ ದಾಖಲಾತಿ ಸೃಷ್ಟಿಸಿ ಸಾಲ ಪಡೆದವರ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡಿಸಲಾಗುವುದು. ಬ್ಯಾಂಕ್ ವ್ಯವಹಾರ ಕುರಿತು ನಿಗಾ ವಹಿಸಲಾಗುವುದು ಎಂದು ಹೇಳಿದರು.
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 05:33 pm
HK News Staffer
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್‍ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm
ಆಸ್ತಿ ವಿವಾದ ; ಪ್ರಿಯಕರನ ಜೊತೆ ಸೇರಿ ಅಪ್ಪನನ್ನ ಕಲಿ...
18-08-26 10:06 pm