ಬ್ರೇಕಿಂಗ್ ನ್ಯೂಸ್
24-08-26 12:06 pm HK News Staffer ಕ್ರೈಂ
ಉಡುಪಿ, ಆ.24: ಬ್ರಹ್ಮಾವರ ಸಮೀಪದ ಗಾಂಧಿನಗರದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ವಿಕೋಪಕ್ಕೆ ತಿರುಗಿ, ಹೆತ್ತ ತಂದೆ-ತಾಯಿಯನ್ನೇ ಮಗ ಸುತ್ತಿಗೆಯಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಿದ್ದಾನೆ.
ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಮತ್ತು ಅವರ ಪತ್ನಿ ಶಂಶಾದ್ ಬೇಗಂ ಮೃತಪಟ್ಟ ದುರ್ದೈವಿ ದಂಪತಿ. ಮೆಹಬೂಬ್ ಅಲಿ ಅವರು ಲಾರಿ ಚಾಲಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಮಗ ಶಾಹಿದ್ ಅಲಿ ಅಮಾನುಷ ಕೃತ್ಯ ಎಸಗಿದ್ದಾನೆ.
ಭಾನುವಾರ ರಾತ್ರಿ ಮನೆಯಲ್ಲಿ ತಂದೆ, ತಾಯಿಯೊಂದಿಗೆ ಯಾವುದೋ ವಿಚಾರಕ್ಕೆ ಸಂಬಂಧಿಸಿ ಜಗಳ ಉಂಟಾಗಿದೆ. ಈ ವೇಳೆ ತೀವ್ರ ಸಿಟ್ಟಿಗೆದ್ದ ಶಾಹಿದ್ ಅಲಿ ಮನೆಯಲ್ಲಿದ್ದ ಸುತ್ತಿಗೆಯನ್ನು ತೆಗೆದುಕೊಂಡು ಇಬ್ಬರ ತಲೆ ಹಾಗೂ ದೇಹಕ್ಕೆ ಮನಸೋ ಇಚ್ಛೆ ಹೊಡೆದಿದ್ದಾನೆ. ತೀವ್ರ ರಕ್ತಸ್ರಾವದಿಂದ ಗಂಭೀರ ಗಾಯಗೊಂಡ ದಂಪತಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಹತ್ಯೆಯ ಬಳಿಕ ಆರೋಪಿಯೇ ಬ್ರಹ್ಮಾವರ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾನೆ ಎನ್ನಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಬ್ರಹ್ಮಾವರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಶಾಹಿದ್ ಅಲಿಯನ್ನು ವಶಕ್ಕೆ ಪಡೆದಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಕುಟುಂಬ ಕಲಹ ಅಥವಾ ಬೇರೇನಾದರೂ ಹಿನ್ನೆಲೆ ಇದೆಯೇ ಎಂಬ ನೆಲೆಯಲ್ಲಿ ಪೊಲೀಸರು ತನಿಖೆ ನಡೆಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm