ಬ್ರೇಕಿಂಗ್ ನ್ಯೂಸ್
25-08-26 12:45 pm HK News Staffer ಕ್ರೈಂ
ಉಡುಪಿ , ಆ. 25: ಮಲ್ಪೆ ಬಂದರಿನಲ್ಲಿ ಲಂಗರು ಹಾಕಲಾಗಿದ್ದ ಮೀನುಗಾರಿಕಾ ಬೋಟ್ನ ಕ್ಯಾಬಿನ್ನಲ್ಲಿ ಮೀನುಗಾರ ಕಾರ್ಮಿಕರಿಬ್ಬರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ, ಚೂರಿ ಇರಿತದಿಂದ ಓರ್ವ ಮೃತಪಟ್ಟಿರುವ ಘಟನೆ ಮಂಗಳವಾರ ಮುಂಜಾನೆ ನಡೆದಿದೆ.
ಮೃತನನ್ನು ಚಿಕ್ಕಮಗಳೂರು ಮೂಲದ ಅಭಿಷೇಕ್ ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದ ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಸೋಮವಾರ ರಾತ್ರಿ ಬೋಟ್ನಲ್ಲೇ ಗೋವಿಂದ ಹಾಗೂ ಅಭಿಷೇಕ್ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಮಂಗಳವಾರ ಮುಂಜಾನೆ ಮತ್ತೆ ಇಬ್ಬರ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಗೋವಿಂದ ಅಭಿಷೇಕ್ಗೆ ಚೂರಿಯಿಂದ ಇರಿದು ಕೊಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಮಲ್ಪೆ ಪೊಲೀಸ್ ಠಾಣೆಯ ಅನೀಲ್ ಕುಮಾರ್ ನೇತೃತ್ವದ ಸಿಬ್ಬಂದಿ ಆದರ್ಶ ಹಾಗೂ ಕುಬೇರ ಕಾರ್ಯಪ್ರವೃತ್ತರಾಗಿ ಆರೋಪಿಗಾಗಿ ಶೋಧ ಆರಂಭಿಸಿದರು. ಪೊಲೀಸರು ನಡೆಸಿದ ತ್ವರಿತ ಕಾರ್ಯಾಚರಣೆಯಲ್ಲಿ ಆರೋಪಿ ಉಡುಪಿ ರೈಲು ನಿಲ್ದಾಣದ ಮೂಲಕ ಹೈದರಾಬಾದ್ ಅಥವಾ ಮುಂಬೈಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ವಶಕ್ಕೆ ಪಡೆಯಲಾಗಿದೆ.
ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ತೆರಳದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆಗಳಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಎಂದು ಪ್ರಾಥಮಿಕ ವಿಚಾರಣೆಯಲ್ಲಿ ತಿಳಿದುಬಂದಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ಮುಂದುವರಿಸಿದ್ದು, ಕೊಲೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ಇನ್ನಷ್ಟೇ ಸ್ಪಷ್ಟವಾಗಬೇಕಿದೆ. ಈ ಸಂಬಂಧ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am