ಬ್ರೇಕಿಂಗ್ ನ್ಯೂಸ್
28-08-26 06:22 pm HK News Staffer ಕ್ರೈಂ
ಬೆಂಗಳೂರು, ಆ.28: ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇಳಿಸಲು ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಆದಾಯ ತೆರಿಗೆ (I-T) ಅಧಿಕಾರಿ ಹಾಗೂ ಅವರಿಗೆ ಸಾಥ್ ನೀಡಿದ್ದ ಚಾರ್ಟರ್ಡ್ ಅಕೌಂಟೆಂಟ್ ಗೆ ವಿಶೇಷ ಸಿಬಿಐ ಪ್ರಕರಣಗಳ ಪ್ರಧಾನ ವಿಶೇಷ ನ್ಯಾಯಾಲಯವು 3 ವರ್ಷಗಳ ಸಾದಾ ಜೈಲು ಶಿಕ್ಷೆ ಹಾಗೂ ಭಾರೀ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ.
14 ವರ್ಷಗಳ ಹಿಂದೆ ದಾಖಲಾಗಿದ್ದ ಲಂಚ ಪ್ರಕರಣದಲ್ಲಿ ಆದಾಯ ತೆರಿಗೆ ಅಧಿಕಾರಿ ವಿ. ನಾಗರಾಜ್ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ನಾಗಿನಚಂದ್ ವಿ. ಕಿಂಚಾ ಅವರಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ನಾಗರಾಜ್ ಅವರಿಗೆ ರೂ.3 ಲಕ್ಷ ಹಾಗೂ ಕಿಂಚಾ ಅವರಿಗೆ ರೂ.2 ಲಕ್ಷ ದಂಡವನ್ನೂ ವಿಧಿಸಲಾಗಿದೆ.
ಬೆಂಗಳೂರಿನ ಆದಾಯ ತೆರಿಗೆ ಕಚೇರಿಯ ವಾರ್ಡ್ 4(3)ರಲ್ಲಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ನಾಗರಾಜ್, ತೆರಿಗೆದಾರ ಎ.ಕೆ. ಹಲೀಂ ಅವರ ತೆರಿಗೆಗೆ ಒಳಪಡುವ ಆದಾಯವನ್ನು ರೂ.80 ಲಕ್ಷದಿಂದ 30 ಲಕ್ಷಕ್ಕೆ ಇಳಿಸುವುದಕ್ಕಾಗಿ ರೂ.20 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬಳಿಕ ಕಿಂಚಾ ಮೂಲಕ ಹಲೀಂ ಅವರಿಂದ ರೂ.5 ಲಕ್ಷ ಲಂಚ ಪಡೆದಿದ್ದರು. 2012ರ ಸೆಪ್ಟೆಂಬರ್ 8ರಂದು ಸಿಬಿಐ ನಡೆಸಿದ ಕಾರ್ಯಾಚರಣೆಯಲ್ಲಿ ಕಿಂಚಾ ಅವರ ಕಚೇರಿಯಲ್ಲಿ ಹಣವನ್ನು ವಶಪಡಿಸಿಕೊಳ್ಳಲಾಗಿತ್ತು.
ಶಿಕ್ಷೆಯ ಪ್ರಮಾಣ ಪ್ರಕಟಿಸುವ ಸಂದರ್ಭದಲ್ಲಿ ನ್ಯಾಯಾಧೀಶ ಮಂಜುನಾಥ್ ಸಂಗ್ರೇಶಿ, “ಸಾರ್ವಜನಿಕ ಕಚೇರಿಗಳಲ್ಲಿ ಭ್ರಷ್ಟಾಚಾರವನ್ನು ತಡೆಗಟ್ಟಲು ತ್ವರಿತ ಶಿಕ್ಷೆ ಹಾಗೂ ಕಠಿಣ ದಂಡ ವಿಧಿಸಬೇಕು ಎಂಬ ಸಮಾಜದ ನಿರೀಕ್ಷೆಯನ್ನು ನ್ಯಾಯಾಲಯ ಗಮನದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದರು. ಆರೋಪಿಗಳಿಗೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 7, 8 ಮತ್ತು 13(2) ಜೊತೆಗೆ 13(1)(ಡಿ) ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.
ತೆರಿಗೆ ವಿಚಾರದಲ್ಲಿ ತೆರಿಗೆದಾರರಿಂದ ಆರ್ಥಿಕ ಲಾಭ ಪಡೆಯುವ ಉದ್ದೇಶದಿಂದ ಇಬ್ಬರೂ ಆರೋಪಿಗಳು ಪರಸ್ಪರ ಸಾಮಾನ್ಯ ಉದ್ದೇಶದೊಂದಿಗೆ ಸಂಚು ರೂಪಿಸಿ ಕಾರ್ಯ ನಿರ್ವಹಿಸಿದ್ದರು ಎಂಬುದು ಸನ್ನಿವೇಶಗಳಿಂದ ಸ್ಪಷ್ಟವಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.
ಹಲೀಂ ಅವರಿಂದ ದೂರು ಸ್ವೀಕರಿಸಿದ ಬಳಿಕ ಸಿಬಿಐ ಅಧಿಕಾರಿಗಳು ಕಾರ್ಯಾಚರಣೆ ರೂಪಿಸಿದ್ದರು. ಕಿಂಚಾ ತಮ್ಮ ಕಚೇರಿಯಲ್ಲಿದ್ದಾಗಲೇ ಹಲೀಂ ಅವರು ಚೀಲದಲ್ಲಿ ತಂದಿದ್ದ ಲಂಚದ ಹಣವನ್ನು ನೀಡಿದ್ದರು. ಕಿಂಚಾ ಚೀಲ ತೆರೆದು ಹಣ ಎಣಿಸಿ ರೂ.5 ಲಕ್ಷ ಇದೆ ಎಂದು ಖಚಿತಪಡಿಸಿಕೊಂಡಿದ್ದರು. ಬಳಿಕ ದೂರುದಾರರು ಕೊಠಡಿಯಿಂದ ಹೊರಬಂದು ಸಿಬಿಐ ಅಧಿಕಾರಿಯೊಬ್ಬರಿಗೆ ಕರೆ ಮಾಡಿ, “ದಯವಿಟ್ಟು ನನ್ನ ರೈಲು ಟಿಕೆಟ್ ವ್ಯವಸ್ಥೆ ಮಾಡಿ” ಎಂಬ ಸಂಕೇತದ ಮಾತು ಹೇಳಿದ್ದರು. ಕೂಡಲೇ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಅಲ್ಲಿ ನಾಗರಾಜ್ ಜೊತೆಗಿದ್ದ ಕಿಂಚಾ ಅವರನ್ನು ಬಂಧಿಸಿದ್ದರು.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm