ಬ್ರೇಕಿಂಗ್ ನ್ಯೂಸ್
07-09-26 07:44 pm HK News Staffer ಕ್ರೈಂ
ನವದೆಹಲಿ , ಸೆ.7: ದೆಹಲಿಯ ಸತ್ಯ ನಿಕೇತನದಲ್ಲಿ ಬಾಲಕರ ಪಿಜಿಯಾಗಿ (PG) ಬಳಸಲಾಗುತ್ತಿದ್ದ ಆರು ಅಂತಸ್ತಿನ ಕಟ್ಟಡ ಕುಸಿದುಬಿದ್ದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಕಾರ್ಯಾಚರಣೆ ಎರಡನೇ ದಿನವೂ ಮುಂದುವರಿದಿದೆ.
ದೆಹಲಿ ವಿಶ್ವವಿದ್ಯಾಲಯದ ದಕ್ಷಿಣ ಕ್ಯಾಂಪಸ್ ಸಮೀಪದ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಸುಮಾರು 1.30ಕ್ಕೆ ಕಟ್ಟಡ ಕುಸಿದುಬಿದ್ದಿತ್ತು. ಸ್ಥಳೀಯವಾಗಿ ‘ಹಾಸ್ಟೆಲ್ ಡೇಜ್’ ಎಂದು ಕರೆಯಲಾಗುತ್ತಿದ್ದ ಈ ಕಟ್ಟಡದಲ್ಲಿ ದಕ್ಷಿಣ ಕ್ಯಾಂಪಸ್ ವ್ಯಾಪ್ತಿಯ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ವಾಸಿಸುತ್ತಿದ್ದರು.
ನೆಲಮಹಡಿಯಲ್ಲಿ ದುರಸ್ತಿ, ಏಕಾಏಕಿ ಕುಸಿದ ಕಟ್ಟಡ
ಸ್ಥಳೀಯರ ವಿಚಾರಣೆ ಪ್ರಕಾರ, ಕಟ್ಟಡ ಸುಮಾರು 40ರಿಂದ 50 ವರ್ಷ ಹಳೆಯದಾಗಿತ್ತು. ನೆಲಮಹಡಿ ಹಾಗೂ ಮೇಲ್ಭಾಗದಲ್ಲಿ ಐದು ಅಂತಸ್ತುಗಳನ್ನು ಹೊಂದಿದ್ದ ಕಟ್ಟಡವನ್ನು ಸುಮಾರು 75 ಹಾಸಿಗೆಗಳ ಪಿಜಿ ವಸತಿ ಸೌಲಭ್ಯವಾಗಿ ಬಳಸಲಾಗುತ್ತಿತ್ತು. ಕಟ್ಟಡದ ನೆಲಮಹಡಿಯಲ್ಲಿ ದುರಸ್ತಿ ಮತ್ತು ನವೀಕರಣ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲೇ ಕಟ್ಟಡ ಕುಸಿದಿದೆ ಎಂದು ತಿಳಿದುಬಂದಿದೆ. ಕಟ್ಟಡದ ಮಾಲೀಕರು ಗುರುಗ್ರಾಮ್‌ನಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಕಟ್ಟಡ ಕುಸಿದ ವೇಳೆ ಸುಮಾರು 50 ವಿದ್ಯಾರ್ಥಿಗಳು ಒಳಗಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಭಾನುವಾರ ಆಗಿದ್ದರಿಂದ ಹೆಚ್ಚಿನ ವಿದ್ಯಾರ್ಥಿಗಳು ತಮ್ಮ ಕೊಠಡಿಗಳಲ್ಲೇ ಇದ್ದರು.
ಸ್ಥಳಕ್ಕೆ ಕನಿಷ್ಠ 12 ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕರೆಸಲಾಗಿದ್ದು, ಕಾಂಕ್ರೀಟ್ ಸ್ಲ್ಯಾಬ್‌ಗಳು ಹಾಗೂ ಕಬ್ಬಿಣದ ಗರ್ಡರ್‌ಗಳನ್ನು ತೆರವುಗೊಳಿಸಲು ಎಕ್ಸವೇಟರ್‌ಗಳು ಸೇರಿದಂತೆ ವಿವಿಧ ಯಂತ್ರೋಪಕರಣಗಳನ್ನು ಬಳಸಲಾಗುತ್ತಿದೆ. ಸ್ಥಳದಲ್ಲಿ ಜನರನ್ನು ನಿಯಂತ್ರಿಸಲು ಗಲಭೆ ನಿಯಂತ್ರಣ ತಂಡಗಳನ್ನೂ ನಿಯೋಜಿಸಲಾಗಿದೆ.
ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮುನ್ನವೇ ಸ್ಥಳೀಯರು ಅವಶೇಷಗಳಡಿ ಸಿಲುಕಿದ್ದವರನ್ನು ರಕ್ಷಿಸಲು ಪ್ರಯತ್ನಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ವಿಡಿಯೋವೊಂದರಲ್ಲಿ ವ್ಯಕ್ತಿಯೊಬ್ಬರು ಕಾಂಕ್ರೀಟ್ ಸ್ಲ್ಯಾಬ್‌ನಡಿ ಸಿಲುಕಿರುವುದು ಕಂಡುಬಂದಿದ್ದು, ಅವರನ್ನು ರಕ್ಷಿಸಲು ಹಲವು ಮಂದಿ ಒಟ್ಟಾಗಿ ಸ್ಲ್ಯಾಬ್ ಎತ್ತಲು ಪ್ರಯತ್ನಿಸುತ್ತಿರುವ ದೃಶ್ಯವಿದೆ. ರಕ್ಷಣಾ ಕಾರ್ಯಾಚರಣೆ ಸೋಮವಾರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಈವರೆಗೆ ಒಟ್ಟು 12 ಮಂದಿಯನ್ನು ರಕ್ಷಿಸಲಾಗಿದೆ. ಉಳಿದವರಿಗಾಗಿ ಶೋಧ ಮುಂದುವರಿದಿದೆ.
ಕಟ್ಟಡ ಮಾಲೀಕ ಹರಿರಾಮ್ ಗುಪ್ತಾ ಬಂಧನ
ಈ ನಡುವೆ, ಕಟ್ಟಡದ ಮಾಲೀಕ ಹರಿರಾಮ್ ಗುಪ್ತಾ ಅವರನ್ನು ರಾಜಸ್ಥಾನದ ಭಿವಡಿಯಲ್ಲಿ ಬಂಧಿಸಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಹರಿರಾಮ್ ಗುಪ್ತಾ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು. ಕಟ್ಟಡ ಕುಸಿದ ಬೆನ್ನಲ್ಲೇ ನಿರ್ಲಕ್ಷ್ಯ ತೋರಿದ್ದಕ್ಕಾಗಿ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ದಕ್ಷಿಣ ವಲಯದ ಐವರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಕಟ್ಟಡ ಕುಸಿತದ ಘಟನೆ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಯುದ್ಧೋಪಾದಿಯಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಕುಸಿದ ಕಟ್ಟಡದ ಪಕ್ಕದಲ್ಲಿದ್ದ ಮತ್ತೊಂದು ಕಟ್ಟಡವನ್ನೂ ಖಾಲಿ ಮಾಡಿಸಲಾಗಿದೆ. ದಕ್ಷಿಣ ದೆಹಲಿ ಬಿಜೆಪಿ ಸಂಸದ ರಾಮ್‌ವೀರ್ ಸಿಂಗ್ ಬಿಧೂರಿ ಮಾತನಾಡಿ, ಕಟ್ಟಡ ಕುಸಿತದ ಕುರಿತು ತನಿಖೆ ನಡೆಸಲು ಸರ್ಕಾರ ತನಿಖಾ ಸಮಿತಿ ರಚಿಸಿದೆ ಎಂದು ತಿಳಿಸಿದ್ದಾರೆ. ಸಮಿತಿಯ ವರದಿ ಬಳಿಕ ತಪ್ಪಿತಸ್ಥರೆಂದು ಕಂಡುಬರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಕಟ್ಟಡ ಕುಸಿತ ಘಟನೆ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ಕಟ್ಟಡ ಕುಸಿತಕ್ಕೆ ಸಂಬಂಧಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (PIL) ವಿಚಾರಣೆ ನಡೆಸಲು ದೆಹಲಿ ಹೈಕೋರ್ಟ್ ಸೋಮವಾರ ಒಪ್ಪಿಗೆ ಸೂಚಿಸಿದೆ.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 01:22 pm
HK News Staffer
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
ದಕ್ಷಿಣ ಕನ್ನಡ- ಚಿಕ್ಕಮಗಳೂರು ಸಂಪರ್ಕ ಕೊಂಡಿ ಚಾರ್ಮಾ...
05-09-26 04:58 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm