ಬ್ರೇಕಿಂಗ್ ನ್ಯೂಸ್
08-09-26 01:11 pm HK News Staffer ಕ್ರೈಂ
ದಾವಣಗೆರೆ, ಸೆ 08: ಅಪಘಾತದಲ್ಲಿ ಗಾಯಗೊಂಡು ರಾತ್ರಿಯಿಡೀ ರಸ್ತೆ ಬದಿಯಲ್ಲೇ ನರಲಾಡುತ್ತಿದ್ದ ಚಿರತೆಯನ್ನ ರಕ್ಷಣೆ ಮಾಡಲು ಹೋದ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆಯೇ ಭಯಾನಕ ದಾಳಿ ಮಾಡಿರುವ ಘಟನೆ ದಾವಣಗೆರೆ ತಾಲೂಕಿನ ಕೊಕ್ಕನೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.
ಸೋಮವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಚಿರತೆಗೆ ರಭಸವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಪಕ್ಕದ ಇದರಿಂದ ಚರಂಡಿಗೆ ಬಿದ್ದ ಚಿರತೆಯ ಕಣ್ಣು ಹಾಗೂ ಸೊಂಟದ ಭಾಗಕ್ಕೆ ಗಂಭೀರ ಪೆಟ್ಟು ಬಿದ್ದಿದೆ. ಇದು ರಾಷ್ಟ್ರೀಯ ಹೆದ್ದಾರಿ ಪೆಟ್ರೋಲಿಂಗ್ ಪೊಲೀಸರ ಗಮನಕ್ಕೆ ಬಂದ ತಕ್ಷಣ ಸ್ಥಳಕ್ಕಾಗಮಿಸಿ, ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ರಾತ್ರಿಯಿಡೀ ಗಾಯದಿಂದ ನರಳಾಡುತ್ತಿದ್ದ ಚಿರತೆಗೆ ಚಿಕಿತ್ಸೆ ಕೊಡುವ ಸಲುವಾಗಿ, ಅದನ್ನು ರಕ್ಷಣೆ ಮಾಡಲು ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದರು.
ನಮಗೆ ರಾತ್ರಿ 12-30ರ ಸುಮಾರಿಗೆ ಚಿರತೆಯೊಂದು ಅಪಘಾತದಲ್ಲಿ ಗಾಯಗೊಂಡಿದೆ ಎಂದು ಮಾಹಿತಿ ಸಿಕ್ಕಿತು. ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಆಗಿದ್ದರಿಂದ ನಮ್ಮ ಸಿಬ್ಬಂದಿ ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ. ಅಪಘಾತವಾಗಿದ್ದರೂ ಸಹ ಚಿರತೆ ಆರೋಗ್ಯವಾಗಿಯೇ ಕಂಡರೂ ಕೂಡ ಅದಕ್ಕೆ ಮೇಲೆ ಎದ್ದೇಳಲು, ಸರಿಯಾಗಿ ನಡೆಯಲು ಆಗುತ್ತಿರಲಿಲ್ಲ. ಅದರೂ ಸಹ ಆಕ್ರಮಣಕಾರಿ ವರ್ತನೆ ತೋರುತ್ತಿತ್ತು. ಅದನ್ನು ಗಮನಿಸುತ್ತ, ಬಳಿಕ ಸೆರೆಹಿಡಿಯಲು ಮುಂದಾದೆವು. ಇದಕ್ಕಾಗಿ ಹಂಪಿಯಿಂದ ವೈದ್ಯರ ತಂಡವನ್ನು ಕರೆಯಿಸಿದೆವು. ವೈದ್ಯರ ತಂಡ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೆಳಗ್ಗೆ 9 ಗಂಟೆ ಸುಮಾರಿಗೆ ಮೊದಲ ಅರಿವಳಿಕೆ ಇಂಜೆಕ್ಷನ್ ನೀಡಿ ರಕ್ಷಣೆ ಮಾಡಲು ಯತ್ನಿಸಿದಾಗ, ಸಿಬ್ಬಂದಿಯ ಮೇಲೆಯೇ ಚಿರತೆ ದಾಳಿ ಮಾಡಿದೆ. ಇದರಿಂದ ಅರಣ್ಯ ರಕ್ಷಕ ಮರಳುಸಿದ್ದಪ್ಪ ಎಂಬವರ ಕೈ, ಕಾಲು, ಎದೆ ಭಾಗಕ್ಕೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡನೇ ಬಾರಿಗೆ ಅರಿವಳಿಕೆ ನೀಡಿದ ಬಳಿಕ ಚಿರತೆಯನ್ನು ಸೆರೆಹಿಡಿದು, ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಎಸಿಎಫ್ ಮಾಹಿತಿ ನೀಡಿದರು.
ಇದೇ ವೇಳೆ, ದಾವಣಗೆರೆಯಲ್ಲಿ ನುರಿತ ಅರಣ್ಯ ಇಲಾಖೆಯ ವನ್ಯಜೀವಿ ವೈದ್ಯರು ಯಾರೂ ಇಲ್ಲ. ವನ್ಯಜೀವಿ ವೈದ್ಯರ ಅವಶ್ಯಕತೆ ಇದೆ. ಹೀಗಾಗಿ, ನಾವು ಹಂಪಿಯಿಂದ ವೈಲ್ಡ್ ಲೈಫ್ ವೈದ್ಯರನ್ನು ಕರೆಸಿದ್ದೇವೆ ಎಂದು ಎಸಿಎಫ್ ಆನಂದ್ ತಿಳಿಸಿದರು.
ದಾವಣಗೆರೆ ತಾಲೂಕಿನ ಆನಗೋಡಿನಿಂದ ಕೊಕ್ಕನೂರು ಗ್ರಾಮದ ತನಕ ಈ ಭಾಗದಲ್ಲಿ ಕಾಡು ಪ್ರಾಣಿಗಳಿವೆ, ವಾಹನಗಳನ್ನು ನಿಧಾನವಾಗಿ ಚಲಿಸಿ ಎಂದು ಸೂಚನಾ ಫಲಕಗಳಿವೆ. ಆದರೂ ಸಹ ವಾಹನ ಸವಾರರು ನಿರ್ಲಕ್ಷ್ಯ ವಹಿಸುವುದರಿಂದ ಇಂತಹ ಘಟನೆಗಳು ಆಗಾಗ್ಗೆ ಜರುಗುತ್ತಿವೆ. ಈ ಹಿಂದೊಮ್ಮೆ ಚಿರತೆಯೊಂದು ಲಾರಿಗೆ ಸಿಲುಕಿ ಸಾವನ್ನಪ್ಪಿತ್ತು. ಬಳಿಕ ನರಿಯೊಂದು ಅಪಘಾತದಲ್ಲಿ ಮೃತಪಟ್ಟಿತ್ತು. ವಾಹನ ಸವಾರರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am