ಬೈಕ್​ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂವರು ಸ್ಥಳದಲ್ಲೇ ಸಾವು

11-09-26 10:14 am       HK News Staffer   ಕ್ರೈಂ

ಬೈಕ್​ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಹನೂರು ತಾಲೂಕಿನ ಆರ್.ಎಸ್.ದೊಡ್ಡಿ‌ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.

ಚಾಮರಾಜನಗರ, ಸೆಪ್ಟೆಂಬರ್ 11: ಬೈಕ್​ಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ಹನೂರು ತಾಲೂಕಿನ ಆರ್.ಎಸ್.ದೊಡ್ಡಿ‌ ಸಮೀಪದ ಇಂಡಿಯನ್ ಆಯಿಲ್ ಪೆಟ್ರೋಲ್ ಬಂಕ್ ಬಳಿ ಸಂಭವಿಸಿದೆ.

ಹನೂರು ತಾಲೂಕಿನ ಕೊಪ್ಪ ಗ್ರಾಮದ ಸುರೇಶ್ (24), ಮಹೇಂದ್ರ (35) ಹಾಗೂ ಮುನಿಯಪ್ಪ (35) ಮೃತ ದುರ್ದೈವಿಗಳು. ಇವರು ತೆರಳುತ್ತಿದ್ದ ಬೈಕ್​ಗೆ ಮಲೆಮಹದೇಶ್ವರ ಬೆಟ್ಟದತ್ತ ಹೊರಟಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಇಬ್ಬರ ದೇಹಗಳು ಛಿದ್ರ ಛಿದ್ರವಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಗೌರಿ ಗಣೇಶ ಹಬ್ಬದ ಸಿದ್ಧತೆಯಲ್ಲಿ ತೊಡಗಿದ್ದ ಇವರು, ಇದಕ್ಕಾಗಿಯೇ ಕೊಳ್ಳೇಗಾಲದತ್ತ ತೆರಳುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ. ಸ್ಥಳಕ್ಕೆ, ಹನೂರು ಠಾಣೆ ಪೊಲೀಸರು ಭೇಟಿ ನೀಡಿ, ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೊಳ್ಳೇಗಾಲ ಉಪವಿಭಾಗ ಆಸ್ಪತ್ರೆಗೆ ರವಾನಿಸಿದ್ದಾರೆ. ಅಪಘಾತಕ್ಕೀಡಾದ ಕಾರು ಮತ್ತು ಬೈಕ್ ಎರಡನ್ನೂ ವಶಕ್ಕೆ ಪಡೆದಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.