ಬ್ರೇಕಿಂಗ್ ನ್ಯೂಸ್
17-09-26 11:45 am HK News Staffer ಕ್ರೈಂ
ಮಂಗಳೂರು, ಸೆಪ್ಟೆಂಬರ್ 17: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾಭ ಗಳಿಸಬಹುದೆಂದು ನಂಬಿಸಿ, ನಗರದ 60 ವರ್ಷದ ಹಿರಿಯ ಮಹಿಳೆಯೊಬ್ಬರಿಗೆ ಬರೋಬ್ಬರಿ 13,74,319 ರೂ. ವಂಚಿಸಿರುವ ಸೈಬರ್ ಕ್ರೈಂ ಪ್ರಕರಣವೊಂದು ನಡೆದಿದೆ..
ನಗರದ ನಿವಾಸಿಯಾದ 60 ವರ್ಷದ ಮಹಿಳೆ ಹಣ ಕಳೆದುಕೊಂಡ ಸಂತ್ರಸ್ತೆ. ಈ ಸಂಬಂಧ ಮಂಗಳೂರು ನಗರ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಅಪರಿಚಿತ ಸೈಬರ್ ವಂಚಕರ ವಿರುದ್ಧ ಪ್ರಕರಣ ದಾಖಲಾಗಿದೆ.
ವಂಚನೆ ನಡೆದಿದ್ದು ಹೇಗೆ?
ದೂರಿನ ಪ್ರಕಾರ, ಮೇ 28ರಂದು ಸಂತ್ರಸ್ತೆ ತಮ್ಮ ಮೊಬೈಲ್ ವಾಟ್ಸಾಪ್ ನೋಡುತ್ತಿದ್ದ ವೇಳೆ ‘wsfx Global Pay / Quantam AI’ ಎಂಬ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಷೇರು ಟ್ರೇಡಿಂಗ್ನಲ್ಲಿ ಹೂಡಿಕೆ ಮಾಡಿದರೆ ಅಧಿಕ ಲಾಭ ಗಳಿಸಬಹುದು ಎಂಬ ಸಂದೇಶಗಳು ಬಂದಿದ್ದವು.
ಇದಾದ ಬಳಿಕ, 'ಜೋಶುವಾ ಬಿ. ಸಾಜಿ' ಎಂಬ ಹೆಸರಿನಲ್ಲಿ +447824915764 ನಂಬರ್ನಿಂದ ಅಪರಿಚಿತ ವ್ಯಕ್ತಿಯೊಬ್ಬ ಸಂತ್ರಸ್ತ ಮಹಿಳೆಗೆ ವಾಟ್ಸ್ಆ್ಯಪ್ ಕರೆ ಮಾಡಿದ್ದಾನೆ. ತಾನು ತಿಳಿಸುವ ಕಂಪನಿಯಲ್ಲಿ ಹೆಸರು ನೋಂದಾಯಿಸಿಕೊಂಡು ಟ್ರೇಡಿಂಗ್ನಲ್ಲಿ ಹಣ ತೊಡಗಿಸಿದರೆ ದುಪ್ಪಟ್ಟು ಲಾಭ ಪಡೆಯಬಹುದು ಎಂದು ಬಲವಾಗಿ ನಂಬಿಸಿದ್ದಾನೆ.
ಅಪರಿಚಿತ ವ್ಯಕ್ತಿಯ ಮಾತು ನಂಬಿದ ಮಹಿಳೆ, ಮೇ 28ರಂದು ಆತ ಸೂಚಿಸಿದಂತೆ ಆರಂಭಿಕವಾಗಿ 15,819 ಹಣವನ್ನು ಯುಪಿಐ ಮೂಲಕ ಪಾವತಿಸಿದ್ದಾರೆ. ಬಳಿಕ ಹೆಚ್ಚಿನ ಲಾಭದ ಆಸೆಗೆ ಬಿದ್ದ ಸಂತ್ರಸ್ತೆ, ಮೇ 28ರಿಂದ ಆಗಸ್ಟ್ 27ರ ಅವಧಿಯಲ್ಲಿ ಆರೋಪಿಗಳು ನೀಡಿದ ವಿವಿಧ ಬ್ಯಾಂಕ್ ಖಾತೆಗಳಿಗೆ NEFT ಹಾಗೂ RTGS ಮೂಲಕ ಹಂತ - ಹಂತವಾಗಿ ಒಟ್ಟು 13,58,500 ಹಣವನ್ನು ವರ್ಗಾಯಿಸಿದ್ದಾರೆ.
ಹೂಡಿಕೆ ಮಾಡಿದ ಬಳಿಕ ಮಹಿಳೆಯು ಹಣವನ್ನು ಹಿಂಪಡೆಯಲು ಪ್ರಯತ್ನಿಸಿದಾಗ ಸಾಧ್ಯವಾಗಿಲ್ಲ. ಇದರಿಂದ ಆತಂಕಗೊಂಡ ಸಂತ್ರಸ್ತೆ ಆರೋಪಿಯ ಮೊಬೈಲ್ ಸಂಖ್ಯೆಗೆ ಕರೆ ಮಾಡಿದಾಗ ಆತ ಕರೆಯನ್ನು ಸ್ವೀಕರಿಸದೇ ಸಂಪರ್ಕ ಕಡಿತಗೊಳಿಸಿದ್ದಾನೆ. ಅನುಮಾನಗೊಂಡ ಮಹಿಳೆ ಸಿಇಎನ್ ಅಪರಾಧ ಪೊಲೀಸ್ ಠಾಣೆಗೆ ಬಂದು ವಿಚಾರಿಸಿದಾಗ ತಾನು ಸೈಬರ್ ವಂಚಕರ ಜಾಲಕ್ಕೆ ಬಲಿಯಾಗಿರುವುದು ಖಚಿತವಾಗಿದೆ.
ಒಟ್ಟಾರೆಯಾಗಿ ಮೇ 28ರಿಂದ ಆಗಸ್ಟ್ 27ರ ವರೆಗೆ 13,74,319 ರೂ. ಹಣವನ್ನು ಹಂತ-ಹಂತವಾಗಿ ವರ್ಗಾಯಿಸಿಕೊಂಡು ವಂಚಿಸಿದ ಅಪರಿಚಿತ ಜಾಲದ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಮಹಿಳೆ ನೀಡಿದ ದೂರಿನ ಮೇರೆಗೆ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
A 60-year-old woman from Mangaluru has allegedly been cheated of ₹13.74 lakh after cyber fraudsters lured her with promises of high returns from stock market investments.
07-11-26 09:34 pm
HK News Desk
ವಿಧಾನ ಪರಿಷತ್ ಚುನಾವಣೆ ಸೋಲಿಗೆ ಸ್ಟಿಂಗ್ ಕಾರಣ ; 5...
03-11-26 09:48 pm
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲ...
03-11-26 01:01 pm
ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ, ಹಿರಿಯ ವಕೀಲ ಬ...
30-10-26 08:26 pm
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
07-11-26 10:38 pm
HK News Desk
Cyprian Pinto, Odanadi Stanley: ಪಾದ್ರಿ ಕೃತ್ಯ...
07-11-26 03:39 pm
ಪಡೀಲ್ ಕಣ್ಣೂರು ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪ...
06-11-26 11:03 pm
ಕಾಂಗ್ರೆಸ್ ಕಾಲದಲ್ಲಿ 11 ಬಾರಿ ಎಸ್ಐಆರ್ ಲೀಗಲ್, ಈಗ...
06-11-26 09:35 pm
ಮಂಗಳೂರು ಮೂಲದ ಯಾಯಿನ್ ಕಿರಣ್ ರೈ ಯುಎಇ ಅಂಡರ್-19 ಕ್...
06-11-26 09:21 pm
07-11-26 11:07 pm
HK News Desk
15 ದಿನಗಳಲ್ಲಿ ಏಳು ಕೊಲೆ ! ಚಿನ್ನಾಭರಣ ದೋಚಿ ಶವಗಳನ್...
07-11-26 10:39 am
Mangalorr Police, Arrest: ವಾಕಿಂಗ್ ಮಾಡುತ್ತಿದ್ದ...
06-11-26 08:08 pm
Naresh Bhat, Wife Murder: ಪತ್ನಿ ವಿಷ ಕುಡಿದು ಆತ...
06-11-26 05:01 pm
ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ ; ಪತ್ನಿ ಮೇಲಿನ ಸಿ...
06-11-26 10:55 am