ಬ್ರೇಕಿಂಗ್ ನ್ಯೂಸ್
20-09-26 04:39 pm HK News Staffer ಕ್ರೈಂ
ಕಾರ್ಕಳ, ಸೆ.20: ಮಾಜಿ ಸಚಿವ, ಹಿರಿಯ ಕಾಂಗ್ರೆಸ್ ಮುಖಂಡ ರಮಾನಾಥ ರೈ ಅವರಿದ್ದ ಇನೋವಾ ಕಾರಿಗೆ ಬಸ್ ಡಿಕ್ಕಿಯಾದ ಘಟನೆ ಕಾರ್ಕಳ - ಮೂಡುಬಿದ್ರೆ ಹೆದ್ದಾರಿಯ ಸಾಣೂರು ಎಂಬಲ್ಲಿ ನಡೆದಿದ್ದು ರಮಾನಾಥ ರೈ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ.
ರಮಾನಾಥ ರೈ ಅವರು ತಮ್ಮ ಕಾರಿನಲ್ಲಿ ಮೂಡುಬಿದ್ರೆಯಿಂದ ಕಾರ್ಕಳ ತಾಲೂಕಿನ ಬಜಗೋಳಿ ಕಡೆಗೆ ಕಾರ್ಯಕ್ರಮ ನಿಮಿತ್ತ ತೆರಳುತ್ತಿದ್ದರು. ಇದೇ ವೇಳೆ, ಕಾರ್ಕಳದಿಂದ ಮೂಡುಬಿದ್ರೆ ಕಡೆಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಸಾಣೂರು ತಿರುವಿನಲ್ಲಿ ಕಾರಿಗೆ ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನ ಮುಂಭಾಗದಲ್ಲಿ ಕುಳಿತಿದ್ದ ರಮಾನಾಥ ರೈ ಮತ್ತು ಚಾಲಕನಿಗೆ ಪೆಟ್ಟು ಬಿದ್ದಿದ್ದು ಅವರನ್ನು ಸ್ಥಳೀಯರು ಸೇರಿ ಹೊರಗೆಳೆದು ಕಾರ್ಕಳದ ಕೆಎಂಸಿ ಅಧೀನದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಭಾನುವಾರ ಮಧ್ಯಾಹ್ನ ಘಟನೆ ನಡೆದಿದ್ದು ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ರೈಯವರ ಪಿಎ ಡೆಂಜಿಲ್ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಬಸ್ಸಿನಲ್ಲಿದ್ದ ಆರು ಮಂದಿಗೆ ಗಾಯಗಳಾಗಿವೆ.



ಕಾರು ಮತ್ತು ಬಸ್ಸಿನಲ್ಲಿದ್ದ ಮಹಿಳೆ ಸೇರಿ ಹಲವು ಪ್ರಯಾಣಿಕರಿಗೆ ಗಾಯಗಳಾಗಿದ್ದು ಅವರನ್ನು ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಮಾನಾಥ ರೈ ಅವರನ್ನು ಇಂದು ಸಂಜೆಯೇ ಮಂಗಳೂರಿಗೆ ತರಲಾಗುತ್ತಿದ್ದು ಅಪಾಯದಿಂದ ಪಾರಾಗಿದ್ದಾರೆಂದು ಆಪ್ತರು ತಿಳಿಸಿದ್ದಾರೆ.
Former minister and senior Congress leader Ramanath Rai was injured after a private bus collided head-on with the Innova car in which he was travelling at Sanuru on the Karkala–Moodbidri highway on Sunday. Several others also sustained injuries in the accident.
07-11-26 09:34 pm
HK News Desk
ವಿಧಾನ ಪರಿಷತ್ ಚುನಾವಣೆ ಸೋಲಿಗೆ ಸ್ಟಿಂಗ್ ಕಾರಣ ; 5...
03-11-26 09:48 pm
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲ...
03-11-26 01:01 pm
ಹಿರಿಯ ಸಂಶೋಧಕಿ ಡಾ.ಇಂದಿರಾ ಹೆಗ್ಗಡೆ, ಹಿರಿಯ ವಕೀಲ ಬ...
30-10-26 08:26 pm
ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್ ; ಕೇಂದ್ರ ಸಚಿವ ಕುಮ...
30-10-26 05:15 pm
29-10-26 09:28 pm
HK News Staffer
ಆಡಳಿತ ಬದಲಾವಣೆ ಉದ್ದೇಶದ ಹಿಂಸಾತ್ಮಕ ಪ್ರತಿಭಟನೆಗಳಲ್...
29-10-26 08:23 pm
'ಮೋದಿ ಅಪ್ಪನೂ ಜೈಲಿಗೆ ಹೋಗಬೇಕಾಗುತ್ತೆ!' ; ವಿವಾದಕ್...
25-10-26 09:40 pm
ಹಿಂದೂ ರಾಷ್ಟ್ರ ಎಂದರೆ ಮುಸ್ಲಿಮರನ್ನು ಹೊರಗಿಡುವುದಲ್...
21-10-26 04:21 pm
ಫ್ರಾನ್ಸ್, ಬಾಂಗ್ಲಾ ರೀತಿ ಭಾರತದಲ್ಲಿ ಆಗೋದು ಸಾಧ್ಯವ...
20-10-26 01:18 pm
07-11-26 10:38 pm
HK News Desk
Cyprian Pinto, Odanadi Stanley: ಪಾದ್ರಿ ಕೃತ್ಯ...
07-11-26 03:39 pm
ಪಡೀಲ್ ಕಣ್ಣೂರು ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಪ...
06-11-26 11:03 pm
ಕಾಂಗ್ರೆಸ್ ಕಾಲದಲ್ಲಿ 11 ಬಾರಿ ಎಸ್ಐಆರ್ ಲೀಗಲ್, ಈಗ...
06-11-26 09:35 pm
ಮಂಗಳೂರು ಮೂಲದ ಯಾಯಿನ್ ಕಿರಣ್ ರೈ ಯುಎಇ ಅಂಡರ್-19 ಕ್...
06-11-26 09:21 pm
07-11-26 11:07 pm
HK News Desk
15 ದಿನಗಳಲ್ಲಿ ಏಳು ಕೊಲೆ ! ಚಿನ್ನಾಭರಣ ದೋಚಿ ಶವಗಳನ್...
07-11-26 10:39 am
Mangalorr Police, Arrest: ವಾಕಿಂಗ್ ಮಾಡುತ್ತಿದ್ದ...
06-11-26 08:08 pm
Naresh Bhat, Wife Murder: ಪತ್ನಿ ವಿಷ ಕುಡಿದು ಆತ...
06-11-26 05:01 pm
ಬೆಂಗಳೂರಿನಲ್ಲಿ ಭೀಕರ ಹತ್ಯಾಕಾಂಡ ; ಪತ್ನಿ ಮೇಲಿನ ಸಿ...
06-11-26 10:55 am