ಬ್ರೇಕಿಂಗ್ ನ್ಯೂಸ್
22-09-26 06:59 pm HK News Staffer ಕ್ರೈಂ
ಉಡುಪಿ, ಸೆ.22: ದುಬೈನ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಜುಲೈನಲ್ಲಿ ನಡೆದಿರುವ ಈ ಕೊಲೆ ಪ್ರಕರಣ ಸುಮಾರು ಎರಡು ತಿಂಗಳ ಬಳಿಕ ಬಹಿರಂಗವಾಗಿದ್ದು, ಘಟನೆ ಉಡುಪಿ ಮೂಲದ ಕುಟುಂಬದಲ್ಲಿ ಆತಂಕ ಮೂಡಿಸಿದೆ.
ಮೃತರನ್ನು ಪ್ರಕಾಶ್ ಕುಂದರ್ ಎಂದು ಗುರುತಿಸಲಾಗಿದೆ. ದುಷ್ಕರ್ಮಿಗಳು ಅವರನ್ನು ಹತ್ಯೆಗೈದು, ಮೃತದೇಹವನ್ನು 9 ತುಂಡುಗಳಾಗಿ ಕತ್ತರಿಸಿ, ಅವರದ್ದೇ ಕಾರಿನ ಡಿಕ್ಕಿಯಲ್ಲಿ ತುಂಬಿದ್ದರು ಎಂದು ತಿಳಿದುಬಂದಿದೆ.
ಪತ್ನಿ, ಅಪ್ರಾಪ್ತ ಪುತ್ರ ನಾಪತ್ತೆ
ಪ್ರಕಾಶ್ ಕುಂದರ್ ಅವರು ಶಾರ್ಜಾದಲ್ಲಿ ಪತ್ನಿ ಟೀನಾ ಹಾಗೂ ಪುತ್ರನೊಂದಿಗೆ ವಾಸವಾಗಿದ್ದರು. ಆದರೆ ಪ್ರಕಾಶ್ ಹತ್ಯೆಯಾದ ಬಳಿಕ ಅವರ ಪತ್ನಿ ಟೀನಾ ಹಾಗೂ ಅಪ್ರಾಪ್ತ ವಯಸ್ಸಿನ ಪುತ್ರ ನಾಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ̤ ಪ್ರಕಾಶ್ ಅವರ ಹತ್ಯೆಯಲ್ಲಿ ಪತ್ನಿಯ ಪಾತ್ರವಿದೆಯೇ ಅಥವಾ ಬೇರೆಯವರ ಸಹಾಯದಿಂದ ಕೃತ್ಯ ನಡೆದಿದೆಯೇ ಎಂಬ ಬಗ್ಗೆ ಶಂಕೆಗಳು ವ್ಯಕ್ತವಾಗಿವೆ. ಪತ್ನಿ ಹಾಗೂ ಪುತ್ರ ಭಾರತಕ್ಕೆ ಬಂದಿರುವ ಸಾಧ್ಯತೆಯ ಬಗ್ಗೆಯೂ ಅನುಮಾನ ವ್ಯಕ್ತವಾಗಿದೆ. ಆದರೆ ಈ ಯಾವುದೇ ಆರೋಪಗಳು ಸದ್ಯಕ್ಕೆ ದೃಢಪಟ್ಟಿಲ್ಲ. ಪ್ರಕರಣದ ಎಲ್ಲ ಆಯಾಮಗಳಲ್ಲೂ ಶಾರ್ಜಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ವಾಯ್ಸ್ ಮೆಸೇಜ್ ಬದಲು ಟೆಕ್ಸ್ಟ್ ಬಂದಿದ್ದೇಕೆ?
ಜುಲೈ 20ರಂದು ಪ್ರಕಾಶ್ ಅವರ ಸಹೋದರ ಪ್ರಶಾಂತ್ ಕುಂದರ್ ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದ್ದರು. ಸಾಮಾನ್ಯವಾಗಿ ಪ್ರಕಾಶ್ ವಾಯ್ಸ್ ಮೆಸೇಜ್ ಮೂಲಕ ಪ್ರತಿಕ್ರಿಯಿಸುತ್ತಿದ್ದರು. ಆದರೆ ಅಂದು ಅವರು ಟೆಕ್ಸ್ಟ್ ಮೆಸೇಜ್ ಮೂಲಕ ಮಾತ್ರ ಉತ್ತರಿಸುತ್ತಿದ್ದರು ಎನ್ನಲಾಗಿದೆ̤
ಕುಟುಂಬಸ್ಥರು ಪ್ರಕಾಶ್ಗೆ ಕರೆ ಮಾಡುವಂತೆ ಒತ್ತಾಯಿಸಿದ ಬಳಿಕ ಸಂಪರ್ಕ ಕಡಿತಗೊಂಡಿತ್ತು. ಇದರಿಂದ ಅನುಮಾನಗೊಂಡ ಸಂಬಂಧಿಕರು ಅವರು ಕೆಲಸ ಮಾಡುತ್ತಿದ್ದ ಕಂಪನಿಯನ್ನು ಸಂಪರ್ಕಿಸಿದ್ದರು.
ಕಂಪನಿಯವರು ಪ್ರಕಾಶ್ ಭಾರತಕ್ಕೆ ತೆರಳಿದ್ದಾರೆ ಎಂದು ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದರು. ಆದರೆ ಅವರು ಭಾರತಕ್ಕೆ ಬಂದಿರುವ ಯಾವುದೇ ಮಾಹಿತಿ ಸಿಗದ ಹಿನ್ನೆಲೆಯಲ್ಲಿ ಕುಟುಂಬಸ್ಥರಿಗೆ ಮತ್ತಷ್ಟು ಅನುಮಾನ ಮೂಡಿತ್ತು.
ಕಾರಿನ ಡಿಕ್ಕಿಯಲ್ಲಿ ಪತ್ತೆಯಾದ ಮೃತದೇಹ
ಪ್ರಕಾಶ್ ನಾಪತ್ತೆಯಾಗಿರುವ ಬಗ್ಗೆ ಶಾರ್ಜಾದಲ್ಲಿ ಪ್ರಕರಣ ದಾಖಲಿಸಿದ ಬಳಿಕ ಪೊಲೀಸರು ತನಿಖೆ ಆರಂಭಿಸಿದ್ದರು. ಹುಡುಕಾಟದ ವೇಳೆ ಅವರ ಕಾರಿನ ಡಿಕ್ಕಿಯಲ್ಲಿ ಮೃತದೇಹ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಕಾಶ್ ಅವರ ಸಾವಿನ ಹಿಂದಿನ ನಿಖರ ಕಾರಣ ಹಾಗೂ ಕೃತ್ಯದ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಶಾರ್ಜಾ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
22-09-26 08:58 pm
HK News Staffer
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
ಎಡಪಂಥೀಯ ಉಗ್ರವಾದ ಹೆಸರಲ್ಲಿ 'ಮಿಷನರಿ ಚಟುವಟಿಕೆ' ;...
21-09-26 12:58 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಮತ್ತೆ ಯೂಟ್ಯೂಬ...
20-09-26 07:13 pm
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
22-09-26 09:42 am
HK News Staffer
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
22-09-26 08:32 pm
HK News Staffer
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ ; ಸೆ...
21-09-26 09:46 pm
ಸೌಜನ್ಯಾ ಪ್ರಕರಣದಲ್ಲಿ 14 ವರ್ಷಗಳ ಬಳಿಕ ಮರು ತನಿಖೆಗ...
21-09-26 01:37 pm
22-09-26 09:00 pm
HK News Staffer
ಅತಿ ವೇಗದ ಚಾಲನೆ ; ಮರೋಳಿಯಲ್ಲಿ ಹೈಟೆನ್ಶನ್ ವಿದ್ಯುತ...
22-09-26 07:05 pm
ದುಬೈನಲ್ಲಿ ಉಡುಪಿ ಮೂಲದ ವ್ಯಕ್ತಿಯ ಬರ್ಬರ ಹತ್ಯೆ: ಶವ...
22-09-26 06:59 pm
ಪೆರ್ನೆಯಲ್ಲಿ ಇಬ್ಬರು ಮಕ್ಕಳ ಬಾವಿಗೆ ಎಸೆತ ಪ್ರಕರಣ :...
22-09-26 02:57 pm
ಲಂಚಕ್ಕೆ ಕೈಯೊಡ್ಡಿ ಲೋಕಾಯುಕ್ತಕ್ಕೆ ಟ್ರಾಪ್ ಆದ ಬಜ್ಪ...
21-09-26 08:21 pm