ರೌಡಿಶೀಟರ್ ಜೊತೆಗೆ ಹುಟ್ಟುಹಬ್ಬ ಪಾರ್ಟಿಯಲ್ಲಿ ಕುಡಿದು ಸ್ಟೆಪ್ ಹಾಕಿದ ಎಎಸ್ಐ ; ಕಡೂರಿನಲ್ಲಿ ಎಎಸ್ಐ ವೀರೇಂದ್ರ ಅಮಾನತು

23-09-26 05:10 pm       HK News Staffer   ಕ್ರೈಂ

ರೌಡಿಶೀಟರ್ ಜೊತೆ ಬಾರ್‌ನಲ್ಲಿ ಮದ್ಯದ ಪಾರ್ಟಿ ನಡೆಸಿದ ಆರೋಪದಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆಯ ಎಎಸ್ಸೈ ಎಚ್.ಡಿ. ವೀರೇಂದ್ರ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಈ ಆದೇಶ ಹೊರಡಿಸಿದ್ದಾರೆ.

ಚಿಕ್ಕಮಗಳೂರು, ಸೆ.23: ರೌಡಿಶೀಟರ್ ಜೊತೆ ಬಾರ್‌ನಲ್ಲಿ ಮದ್ಯದ ಪಾರ್ಟಿ ನಡೆಸಿದ ಆರೋಪದಲ್ಲಿ ಕಡೂರು ತಾಲೂಕಿನ ಸಖರಾಯಪಟ್ಟಣ ಪೊಲೀಸ್ ಠಾಣೆಯ ಎಎಸ್ಸೈ ಎಚ್.ಡಿ. ವೀರೇಂದ್ರ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ಈ ಆದೇಶ ಹೊರಡಿಸಿದ್ದಾರೆ.

ಕಡೂರು ಪೊಲೀಸ್ ಠಾಣೆಯ ಪಿಎಸ್‌ಐ ವರದಿಯ ಆಧಾರದಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಸೆಪ್ಟೆಂಬರ್‌ 15ರಂದು ರಾತ್ರಿ ಕಡೂರು ತಾಲೂಕಿನ ಎಮ್ಮೆದೊಡ್ಡಿ ಮುಸ್ಲಾಪುರ ಗ್ರಾಮದ ಸನ್ ಮೂನ್ ಗ್ರೂಪ್ ಬಾರ್ ಆ್ಯಂಡ್ ರೆಸ್ಟೋರೆಂಟ್‌ನಲ್ಲಿ ಸಖರಾಯಪಟ್ಟಣ ಪೊಲೀಸ್ ಠಾಣೆಯ ರೌಡಿಶೀಟರ್ ನವೀನ್ ನಾಯ್ಕ ಅವರ ಹುಟ್ಟುಹಬ್ಬ ಆಚರಣೆ ನಡೆದಿತ್ತು. 

ಕಾರ್ಯಕ್ರಮದಲ್ಲಿ ಸುಮಾರು 80ರಿಂದ 90 ಮಂದಿ ಭಾಗವಹಿಸಿ ಮದ್ಯಪಾನ ಮಾಡಿದ್ದಲ್ಲದೆ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದರು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿದ್ದು,…
[4:38 pm, 23/09/2026] Giridhar Sir: ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನೇಣಿಗೆ ಶರಣು ; ಬೆಳ್ತಂಗಡಿಯಲ್ಲಿ ದಂಪತಿ ದುರಂತ ಅಂತ್ಯ 

ಬೆಳ್ತಂಗಡಿ, ಸೆ.23: ಪತ್ನಿಯ ಮೃತದೇಹ ಅಸಹಜ ಸ್ಥಿತಿಯಲ್ಲಿ ಕೆರೆಯಲ್ಲಿ ಪತ್ತೆಯಾದ ಬೆನ್ನಲ್ಲೇ ಪತಿಯೂ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ನಡೆದಿದೆ.

ಶಿಶಿಲ ಗ್ರಾಮದ ಗುಂಡಿಕ್ಕಾಡು ನಿವಾಸಿ ತನಿಯಪ್ಪ ಗೌಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಕಳೆದ ಎರಡು -ಮೂರು ದಿನಗಳಿಂದ ತನಿಯಪ್ಪ ಗೌಡ ಎಲ್ಲಿಯೂ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹುಡುಕಾಟ ನಡೆಸಿದ್ದರು. ಈ ವೇಳೆ ಮನೆಯಲ್ಲಿ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇತ್ತೀಚೆಗಷ್ಟೇ ತನಿಯಪ್ಪ ಗೌಡ ಅವರ ಪತ್ನಿ ಚಿನ್ನಮ್ಮ ಅವರ ಮೃತದೇಹ ಪಕ್ಕದ ಜಮೀನಿನ ಕೆರೆಯಲ್ಲಿ ಪತ್ತೆಯಾಗಿತ್ತು. ಅವರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಚಿನ್ನಮ್ಮ ಅವರ ಸಾವಿನ ಬಗ್ಗೆ ಅನುಮಾನವಿದೆ ಎಂದು ಅವರ ಸಹೋದರ ಗಂಗಾಧರ ಗೌಡ ನೀಡಿದ ದೂರಿನ ಆಧಾರದಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೀಗ ತನಿಯಪ್ಪ ಗೌಡ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ದಂಪತಿ ಸಾವಿಗೆ ಸಂಬಂಧಿಸಿ ತನಿಖೆ ಮುಂದುವರಿಸಿದ್ದಾರೆ.

Assistant Sub-Inspector (ASI) H.D. Veerendra of Sakharayapatna Police Station in Kadur taluk has been suspended for allegedly attending a drinking party with a rowdy-sheeter at a bar.