bus fire, Greater Noida: ಚಲಿಸುತ್ತಿದ್ದ ಸ್ಲೀಪರ್‌ ಬಸ್‌ಗೆ ಏಕಾಏಕಿ ಬೆಂಕಿ: 9 ಮಂದಿ ಸಜೀವ ದಹನ, ಹಲವರು ನಾಪತ್ತೆ!

24-09-26 10:09 am       HK News Staffer   ಕ್ರೈಂ

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂಡು, ಕನಿಷ್ಠ 9 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ವೇಳೆ ಬಸ್‌ನಲ್ಲಿ ಸುಮಾರು 40ರಿಂದ 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಕೆಲವರು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಕ್ಕೆ ಜಿಗಿದಿದ್ದಾರೆ.

ಲಕ್ನೋ , ಸೆಪ್ಟೆಂಬರ್ 24:  ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇನಲ್ಲಿ ಚಲಿಸುತ್ತಿದ್ದ ಸ್ಲೀಪರ್‌ ಬಸ್‌ನಲ್ಲಿ ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂಡು, ಕನಿಷ್ಠ 9 ಮಂದಿ ಸಜೀವ ದಹನವಾಗಿರುವ ದಾರುಣ ಘಟನೆ ನಡೆದಿದೆ. ಬೆಂಕಿ ಹೊತ್ತಿಕೊಂಡ ವೇಳೆ ಬಸ್‌ನಲ್ಲಿ ಸುಮಾರು 40ರಿಂದ 50 ಮಂದಿ ಪ್ರಯಾಣಿಕರಿದ್ದರು ಎನ್ನಲಾಗಿದ್ದು, ಪ್ರಾಣ ಉಳಿಸಿಕೊಳ್ಳಲು ಕೆಲವರು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಕ್ಕೆ ಜಿಗಿದಿದ್ದಾರೆ.

ಚಲಿಸುತ್ತಿದ್ದ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪ್ರಯಾಣಿಕರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ಕ್ಷಣಾರ್ಧದಲ್ಲೇ ಬೆಂಕಿ ಇಡೀ ಬಸ್‌ಗೆ ವ್ಯಾಪಿಸಿದ ಪರಿಣಾಮ, ಹಲವರಿಗೆ ಹೊರಬರಲು ಸಾಧ್ಯವಾಗದೆ ಒಳಗಡೆಯೇ ಸಿಲುಕಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಕಿಯಿಂದ ತಪ್ಪಿಸಿಕೊಳ್ಳಲು ಬಸ್‌ನಿಂದಲೇ ಜಿಗಿದ ಪ್ರಯಾಣಿಕರು
ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಕೆಲ ಪ್ರಯಾಣಿಕರು ತಮ್ಮ ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿದ್ದ ಬಸ್‌ನಿಂದಲೇ ಹೊರಕ್ಕೆ ಜಿಗಿದಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿರುವ ಸಾಧ್ಯತೆ ಇದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸದ್ಯ ಬಸ್‌ನಲ್ಲಿದ್ದ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ಕೂಲ್‌ಡೌನ್ ಕಾರ್ಯಾಚರಣೆ ಮುಂದುವರಿದಿದೆ.

ಬಸ್‌ನೊಳಗೆ ಇನ್ನೂ ಪ್ರಯಾಣಿಕರು ಸಿಲುಕಿರುವ ಶಂಕೆ

ಕೂಲ್‌ಡೌನ್ ಕಾರ್ಯಾಚರಣೆ ಪೂರ್ಣಗೊಂಡ ಬಳಿಕವಷ್ಟೇ ಬಸ್‌ನೊಳಗೆ ಸಂಪೂರ್ಣ ಪರಿಶೀಲನೆ ನಡೆಸಲು ಸಾಧ್ಯವಾಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೀಗಾಗಿ, ಬಸ್‌ನೊಳಗೆ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದಾರೆ. ಸಂಪೂರ್ಣ ಪರಿಶೀಲನೆಯ ಬಳಿಕವೇ ಸಾವಿನ ಸಂಖ್ಯೆ ಹಾಗೂ ಗಾಯಾಳುಗಳ ನಿಖರ ಮಾಹಿತಿ ಲಭ್ಯವಾಗಲಿದೆ.

ಸಿಎಂ ಯೋಗಿ ಆದಿತ್ಯನಾಥ್‌ರಿಂದ ಸಂತಾಪ

ಘಟನೆ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗಮನ ಹರಿಸಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಗಾಯಗೊಂಡವರಿಗೆ ತಕ್ಷಣ ಸೂಕ್ತ ಹಾಗೂ ಸಮರ್ಪಕ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಮುಖ್ಯಮಂತ್ರಿಗಳ ಕಚೇರಿ (CMO) ಪ್ರಕಾರ, ಯೋಗಿ ಆದಿತ್ಯನಾಥ್ ಅವರು ಮೃತರ ಕುಟುಂಬಸ್ಥರೊಂದಿಗೆ ಮಾತನಾಡಿದ್ದು, ಅವರಿಗೆ ಸಾಧ್ಯವಿರುವ ಎಲ್ಲ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.

At least nine people were killed after a moving sleeper bus caught fire on the Yamuna Expressway in Greater Noida, Uttar Pradesh. Around 40 to 50 passengers were reportedly travelling on the bus when the fire broke out.