ಬ್ರೇಕಿಂಗ್ ನ್ಯೂಸ್
29-09-26 08:14 pm HK News Staffer ಕ್ರೈಂ
ಮಂಗಳೂರು, ಸೆ.29: ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾದ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ನಗರದ ಕರಂಗಲ್ಪಾಡಿಯಲ್ಲಿ ಬೆಳಗ್ಗೆ ಹತ್ತು ಗಂಟೆಗೆ ಘಟನೆ ನಡೆದಿದ್ದು ಕೋರ್ಟ್ ರಸ್ತೆಯಿಂದ ಬರುತ್ತಿದ್ದ ಗೂಡ್ಸ್ ಆಟೋ ರಿಕ್ಷಾ ನೇರವಾಗಿ ಬಂದು ಕರಂಗಲ್ಪಾಡಿ ಮುಖ್ಯ ರಸ್ತೆಯಿಂದ ಕೋರ್ಟ್ ರಸ್ತೆಗೆ ತಿರುವು ಪಡೆಯುತ್ತಿದ್ದ ಕಾರಿಗೆ ಡಿಕ್ಕಿಯಾಗಿದೆ. ಕಾರನ್ನು ಸ್ವತಃ ನ್ಯಾಯಾಧೀಶ ವಿನಯ್ ಅವರು ಚಲಾಯಿಸುತ್ತಿದ್ದರು.
ಆಟೋ ಗೂಡ್ಸ್ ಕಾರಿಗೆ ಡಿಕ್ಕಿಯಾಗಿ ಪಲ್ಟಿಯಾಗಿ ಬಿದ್ದಿದೆ. ಅದರ ಚಾಲಕ ಚಂದ್ರ ಕೆ. (69) ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಬಳಿಕ 12 ಗಂಟೆ ವೇಳೆಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನ್ಯಾಯಾಧೀಶ ವಿನಯ್ ಅವರಿಗೂ ಕೈಗೆ ಗಾಯವಾಗಿದೆ. ಗೂಡ್ಸ್ ಆಟೋ ಪಲ್ಟಿಯಾದ ವೇಳೆ ಅಲ್ಲಿಯೇ ಇದ್ದ ಸ್ಕೂಟರಿಗೆ ತಾಗಿದ್ದು ಅದರ ಸವಾರ ಫ್ಲೇವಿಯರ್ (51) ರಸ್ತೆಗೆ ಬಿದ್ದು ಅವರಿಗೂ ಗಾಯವಾಗಿದೆ.

ವಿನಯ್ ಅವರ ದೂರಿನಂತೆ ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಂದ್ರ ಅವರು ಕಾಸರಗೋಡು ಜಿಲ್ಲೆಯ ಮೊಗ್ರಾಲ್ ನಿವಾಸಿಯಾಗಿದ್ದು ಮಂಗಳೂರಿನಲ್ಲಿ ಕಲ್ಪನಾ ಸ್ವೀಟ್ಸ್ ಶಾಪ್ ಗೆ ಸೇರಿದ ಗೂಡ್ಸ್ ಆಟೋದಲ್ಲಿ ಚಾಲಕರಾಗಿದ್ದರು. ಅಪಘಾತ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು ಆಟೋ ನೇರವಾಗಿ ಬಂದು ಕಾರಿಗೆ ಡಿಕ್ಕಿಯಾಗಿದ್ದು ಕಂಡುಬಂದಿದೆ. ಹೀಗಾಗಿ ಆಟೋ ಚಾಲಕ ಕಣ್ಣು ಮಂಜಾಗಿ ಅಥವಾ ಏನಾದ್ರೂ ಸಮಸ್ಯೆ ಉಂಟಾಗಿ ಕಾರಿಗೆ ಡಿಕ್ಕಿಯಾಗಿರುವ ಸಾಧ್ಯತೆಯಿದೆ. ಸ್ವಲ್ಪನಾದ್ರೂ ಬ್ರೇಕ್ ಹಾಕುತ್ತಿದ್ದರೆ ಆಟೋ ಮುಂಭಾಗ ಅಪ್ಪಚ್ಚಿ ಆಗುತ್ತಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
A 69-year-old goods auto-rickshaw driver who was critically injured after his vehicle collided with a car carrying a Mangaluru court judge died while undergoing treatment on Monday.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
29-09-26 08:11 pm
HK News Staffer
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
"ನಾವು ಚುನಾವಣೆ ಗೆದ್ದರೆ, ಟೆಕ್ಸಾಸ್ ಹನುಮಾನ್ ವಿಗ್...
23-09-26 04:21 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
29-09-26 09:26 pm
HK News Staffer
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm
ಶಿವಂ ಅಸೋಸಿಯೇಟ್ಸ್ ದೋಖಾ ; ವರ್ಷಕ್ಕೆ 36 ಪರ್ಸೆಂಟ್...
29-09-26 03:48 pm
ಕರಂಗಲ್ಪಾಡಿಯಲ್ಲಿ ಅಪಘಾತ ; ನ್ಯಾಯಾಧೀಶರಿದ್ದ ಕಾರಿಗೆ...
29-09-26 01:22 pm
ಪತಿಯನ್ನು ಬಿಟ್ಟು ಪ್ರತ್ಯೇಕ ವಾಸ ; ಮಾಂಸದಂಗಡಿ ಮಾಲೀ...
29-09-26 09:20 am