ಬ್ರೇಕಿಂಗ್ ನ್ಯೂಸ್
30-09-26 10:33 am HK News Staffer ಕ್ರೈಂ
ಉಡುಪಿ, ಸೆ 30: ನಗರದ ಚಿತ್ಪಾಡಿಯ ಹನುಮಾನ್ ಗ್ಯಾರೇಜ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಬರೋಬ್ಬರಿ 40 ಲಕ್ಷ ರೂ. ಮೌಲ್ಯದ ದುರ್ಗಂಬ ಬಸ್ ಕಳವು ಮಾಡಲಾಗಿದ್ದು, ಉಡುಪಿ ನಗರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಕೆಲವೇ ಗಂಟೆಗಳಲ್ಲಿ ಬಸ್ನ್ನು ಪತ್ತೆಹಚ್ಚಿದ್ದಾರೆ.
ಸೆಪ್ಟೆಂಬರ್ 28ರ ರಾತ್ರಿ ಸುಮಾರು 9.48ರ ವೇಳೆಗೆ ಕುಂದಾಪುರ ನಿವಾಸಿ ಹಾಗೂ ಬಸ್ ನಿರ್ವಾಹಕ ಕೃಷ್ಣ ಮತ್ತು ಚಾಲಕ ರಾಹೀಜ್ ಉಚ್ಚಿಲ ಅವರು ಬಸ್ನ್ನು ಚಿತ್ಪಾಡಿಯ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದ ಗ್ಯಾರೇಜ್ ಬಳಿ ನಿಲ್ಲಿಸಿದ್ದರು.
ಬಳಿಕ ರಾತ್ರಿ ಸುಮಾರು 10 ಗಂಟೆಗೆ ಇಬ್ಬರೂ ಅಲ್ಲಿಂದ ತೆರಳಿದ್ದರು. ಆದರೆ, ಮರುದಿನ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾಗಲು ಸ್ಥಳಕ್ಕೆ ಬಂದಾಗ ನಿಲ್ಲಿಸಿದ್ದ ಬಸ್ ನಾಪತ್ತೆಯಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ಬಸ್ ನಿರ್ವಾಹಕ ಕೃಷ್ಣ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ತನಿಖೆ ಚುರುಕುಗೊಳಿಸಿದ ಪೊಲೀಸರಿಗೆ ಸಿಸಿಟಿವಿ ದೃಶ್ಯಗಳ ಪರಿಶೀಲನೆಯ ವೇಳೆ ಮಹತ್ವದ ಸುಳಿವು ಸಿಕ್ಕಿದೆ. ಸೆಪ್ಟೆಂಬರ್ 29ರ ಮುಂಜಾನೆ ಸುಮಾರು 2 ಗಂಟೆಯ ವೇಳೆಗೆ ಇಬ್ಬರು ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಹೆಲ್ಮೆಟ್ ಧರಿಸಿ ಬಸ್ನ್ನು ಕಳವು ಮಾಡಿಕೊಂಡು ಹೋಗಿರುವುದು ಪತ್ತೆಯಾಗಿದೆ.
ಬಸ್ಗಾಗಿ ಶೋಧ ನಡೆಸಿದ ಪೊಲೀಸರಿಗೆ ಕೊನೆಗೂ ಮುದರಂಗಡಿ ಸಮೀಪದ ಮುದ್ದಾಡಿಯ ಹಾಡಿಯಲ್ಲಿ ಕಳವಾಗಿದ್ದ ಬಸ್ ಪತ್ತೆಯಾಗಿದೆ. ಪೊಲೀಸರು ಬಸ್ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಇದೀಗ ಬಸ್ ಕಳವು ಮಾಡಿ ತಲೆಮರೆಸಿಕೊಂಡಿರುವ ಇಬ್ಬರು ಆರೋಪಿಗಳ ಪತ್ತೆಗೆ ಉಡುಪಿ ನಗರ ಪೊಲೀಸರು ತೀವ್ರ ಶೋಧ ಕಾರ್ಯ ನಡೆಸುತ್ತಿದ್ದಾರೆ.
An expensive Durgaamba bus worth around ₹40 lakh, which was stolen from a garage behind Hanuman Petrol Bunk in Chitpady, was recovered by Udupi city police within a few hours of the complaint.
27-09-26 03:21 pm
HK News Desk
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
ಬರ ಪಟ್ಟಿಯಿಂದ ಇಂಡಿ, ಚಡಚಣ ಕೈಬಿಟ್ಟಿದ್ದಕ್ಕೆ ಅಸಮಾಧ...
23-09-26 05:14 pm
30-09-26 10:49 am
HK News Staffer
ಡ್ರಗ್ಸ್ ಕಳ್ಳಸಾಗಣೆ ಆರೋಪ, ಸೌದಿಯಲ್ಲಿ ಕೇರಳದ ಯುವಕನ...
29-09-26 08:11 pm
ಸೌಜನ್ಯಾ ಮರು ತನಿಖೆಯೂ, ತಮಿಳುನಾಡಿನಲ್ಲಿ ಗ್ರಾನೈಟ್...
26-09-26 07:01 pm
ವೃದ್ಧಾಶ್ರಮ ಸೇರಿದ ವಿನೋದ್ ಕಾಂಬ್ಳಿ: ವಿಡಿಯೋ ವೈರಲ್...
26-09-26 11:51 am
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಂದ್ರ ಕುಮಾರ್ ದೇಶದ್ರ...
24-09-26 09:42 pm
29-09-26 01:25 pm
HK News Staffer
ಬಿ.ಸಿ.ರೋಡ್ ಸಭೆಯಲ್ಲಿ ಕರಾವಳಿ ಶಾಸಕರು, ಸಂಸದರ ಬಗ್ಗ...
29-09-26 11:41 am
ಕಂಬಳ ಲೋಕದ ದಿಗ್ಗಜ ‘ನಂದಳಿಕೆ ಪಾಂಡು’ ಇನ್ನಿಲ್ಲ: 20...
29-09-26 10:45 am
ದೇಶದಲ್ಲಿ 13 ಕೋಟಿ ಮತ ಡಿಲೀಟ್ ಆಗಿದ್ದು ಹೇಗೆ ? ಆಳು...
28-09-26 11:08 pm
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಕರಾವಳಿಗೇನು ಕೊಟ್ಟಿ...
28-09-26 09:33 pm
30-09-26 10:33 am
HK News Staffer
Udupi Body found, Accused: ಕೊಲೆ ಯತ್ನ ಪ್ರಕರಣದ...
30-09-26 10:04 am
ಮಾಂಸದ ಅಂಗಡಿಯಲ್ಲೇ ಡ್ರಗ್ಸ್ ದಂಧೆ ; ಇಬ್ಬರು ಯುವಕರು...
30-09-26 10:03 am
ಸ್ವರ್ಣಾ ನದಿಯಲ್ಲಿ ದುರಂತ ; ಹಿರ್ಗಾನ ಬಳಿ ಈಜಲು ತೆರ...
29-09-26 09:26 pm
Mangalore Accident: ನ್ಯಾಯಾಧೀಶರ ಕಾರಿಗೆ ಗೂಡ್ಸ್...
29-09-26 08:14 pm