ಬ್ರೇಕಿಂಗ್ ನ್ಯೂಸ್
02-10-26 05:24 pm HK News Staffer ಕ್ರೈಂ
ಕುಂದಾಪುರ , ಅ.2: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಲವಂತವಾಗಿ ಎಳೆದು ಕಾರಿನಲ್ಲಿ ತುಂಬಿಸಿಕೊಂಡು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದಮನೆಯ ಮುಹಮ್ಮದ್ ಸಿನಾನ್ (20) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಕಾರನ್ನೂ ಪೊಲೀಸರು ವಶಪಡಿಸಿದ್ದಾರೆ.
ಸೆಪ್ಟೆಂಬರ್ 29ರಂದು ಮಧ್ಯಾಹ್ನ 1.30ರ ಸುಮಾರಿಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಗಳು ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಲವಂತವಾಗಿ ಎಳೆದು ಕಾರಿನಲ್ಲಿ ತುಂಬಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಘಟನೆಯ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಗಳು ಹಾಗೂ ಲಭ್ಯ ಮಾಹಿತಿಯ ಆಧಾರದ ಮೇಲೆ ಆರೋಪಿಯ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದರು. ಅಂತಿಮವಾಗಿ ಮುಹಮ್ಮದ್ ಸಿನಾನ್ನನ್ನು ಕೃತ್ಯಕ್ಕೆ ಬಳಸಿದ ಕಾರು ಸಹಿತ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿ ಕುಂದಾಪುರ ಉಪವಿಭಾಗದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಐದು ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಕರಣದಲ್ಲಿ ಇನ್ನಿಬ್ಬರು ಆರೋಪಿಗಳು ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಅವರ ಪತ್ತೆಗಾಗಿ ತನಿಖೆ ಮುಂದುವರಿದಿದೆ. ಶೀಘ್ರದಲ್ಲೇ ಇಬ್ಬರನ್ನೂ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಕುಂದಾಪುರ ಉಪವಿಭಾಗದ ಡಿವೈಎಸ್ಪಿ ಎಚ್.ಡಿ. ಕುಲಕರ್ಣಿ ಅವರ ಮಾರ್ಗದರ್ಶನದಲ್ಲಿ, ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಉಸ್ತುವಾರಿಯಲ್ಲಿ ಕಾರ್ಯಾಚರಣೆ ನಡೆದಿದೆ.
Kollur police have arrested a 20-year-old man in connection with the alleged forced removal of a stray cow from the roadside and its transportation in a car. The accused has been identified as Mohammed Sinan, a resident of Thotadamane in Gulvadi village of Kundapur taluk. Police have also seized the car allegedly used in the incident.
01-10-26 10:50 pm
HK News Staffer
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
ಬೆಂಗಳೂರಿಗೆ ಬಂದ ಶಾಸಕರೆಲ್ಲ ಎರಡೆರಡು ಮದುವೆಯಾಗಿದ್ದ...
25-09-26 04:49 pm
ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ; ಬೆಳಗಾವಿ ವಿಟಿ...
25-09-26 03:11 pm
ಕರಾವಳಿಯಲ್ಲಿ ನೀರು ಸಂರಕ್ಷಣೆಗೆ ವೈಜ್ಞಾನಿಕ ಮಾಸ್ಟರ್...
23-09-26 11:02 pm
02-10-26 05:28 pm
HK News Staffer
ಇಸ್ರೇಲ್ ತೆರಳುತ್ತಿದ್ದ ವಿಮಾನ ಹೈಜಾಕ್ ಯತ್ನ ? ಒಮಾ...
02-10-26 10:23 am
ವಿಮಾನ ಅಪಘಾತದ ತನಿಖಾ ವರದಿಗಳೇ ನೆರವಾಯ್ತು..! ದುಬೈ...
01-10-26 11:46 am
ಯುಪಿಐ ನೆಪದಲ್ಲಿ ವ್ಯಾಪಾರಸ್ಥರಿಗೆ ಶುಲ್ಕ ; ಸಚಿವೆ ನ...
01-10-26 11:20 am
Smith Machar, Indian pilot: ದುಬೈನಲ್ಲಿ ವಿಮಾನ ಪ...
01-10-26 11:05 am
02-10-26 05:20 pm
HK News Staffer
Sowjanya case, Lokesh Jagalsar: ಸೌಜನ್ಯ ಪ್ರಕರಣ...
02-10-26 10:25 am
Madoor Yusuf Murder Case: ಜೈಲಿನಲ್ಲಿ ಮಾಡೂರು ಯೂ...
01-10-26 10:45 pm
ಏಶ್ಯನ್ ಗೇಮ್ಸ್ ನಲ್ಲಿ ಪೂವಮ್ಮಗೆ ಚಿನ್ನ ; ರಾಜ್ಯ ಸರ...
01-10-26 08:10 pm
Manish Karkada, MRPL: ಎಂಆರ್ ಪಿಎಲ್ ಅಗ್ನಿ ಅವಘಡ...
01-10-26 06:19 pm
02-10-26 05:24 pm
HK News Staffer
113 ಕೆಜಿ ಚಿನ್ನ ಕಳ್ಳಸಾಗಣೆ ಕೇಸ್ ; ರನ್ಯಾ ರಾವ್ಗೆ...
01-10-26 02:31 pm
Mangalore Police News: ಪೊಲೀಸ್ ಕಾನ್ಸ್ ಟೇಬಲ್ ನೇ...
01-10-26 11:10 am
Mrpl Fire, Mangalore: ಎಂಆರ್ ಪಿಎಲ್ ಘಟಕದಲ್ಲಿ ದು...
30-09-26 08:59 pm
ಮಣಿಪಾಲ KMC ಆಸ್ಪತ್ರೆಯಲ್ಲಿ ತೀರ್ಥಹಳ್ಳಿಯ ರೋಗಿ ಆತ್...
30-09-26 08:17 pm