ಬ್ರೇಕಿಂಗ್ ನ್ಯೂಸ್
06-10-26 01:23 pm HK News Staffer ಕ್ರೈಂ
ಮಂಗಳೂರು, ಅ.6: ಸ್ನೇಹಿತರೊಂದಿಗೆ ಹುಲಿವೇಷದ ತರಬೇತಿಗೆಂದು ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ಮೂಲದ 9ನೇ ತರಗತಿ ವಿದ್ಯಾರ್ಥಿ ಪಣಂಬೂರು ಬೀಚ್ ನಲ್ಲಿ ಆಟವಾಡಲು ಹೋಗಿ ನೀರುಪಾಲಾದ ಘಟನೆ ಭಾನುವಾರ ಸಂಜೆ ಸಂಭವಿಸಿದೆ.
ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ನಿವಾಸಿ ಸೇಸಪ್ಪ ಅವರ ಪುತ್ರ ಶ್ರೇಯಸ್ ಎಸ್. ಕಂಬಾರ (15) ನೀರುಪಾಲಾದ ಬಾಲಕ. ಶ್ರೇಯಸ್ ಭಾನುವಾರ ಸಂಜೆ ತನ್ನ ನಾಲ್ವರು ಸ್ನೇಹಿತರೊಂದಿಗೆ ಪಣಂಬೂರು ಸಮುದ್ರ ತೀರದಲ್ಲಿ ಆಟವಾಡಲು ಬಂದಿದ್ದು ಈ ವೇಳೆ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿ ನೀರುಪಾಲಾಗಿದ್ದ.
ನವರಾತ್ರಿ ಹಬ್ಬದ ಪ್ರಯುಕ್ತ ಮಂಗಳೂರಿನಲ್ಲಿ ಹುಲಿ ವೇಷ ಹಾಕಲು ಶ್ರೇಯಸ್ ಸಿದ್ಧತೆ ಮಾಡಿದ್ದು ಇದರ ತರಬೇತಿಗಾಗಿ ಭಾನುವಾರ ಬೆಳಗ್ಗೆ ಮಂಗಳೂರಿಗೆ ಬಂದಿದ್ದ. ತರಬೇತಿ ಮುಗಿದ ನಂತರ ಸಂಜೆ ವೇಳೆಗೆ ಶ್ರೇಯಸ್ ಹಾಗೂ ಆತನ ನಾಲ್ಕು ಮಂದಿ ಸ್ನೇಹಿತರು ಸ್ಟೇಟ್ ಬ್ಯಾಂಕ್ನಿಂದ ಪಣಂಬೂರು ಬೀಚ್ಗೆ ತೆರಳಿದ್ದರು. ಸಮುದ್ರದಲ್ಲಿ ಮುಳುಗಿ ಶ್ರೇಯಸ್ ಕಾಣೆಯಾಗಿದ್ದು ಇದರಿಂದ ಹೆದರಿದ ಆತನ ಅಪ್ರಾಪ್ತ ಸ್ನೇಹಿತರು ನಡೆದ ಘಟನೆಯನ್ನು ಶ್ರೇಯಸ್ ಮನೆಯವರಿಗೂ ತಿಳಿಸದೆ ಮನೆಗೆ ತೆರಳಿದ್ದರು. ಅಲ್ಲದೆ, ತಮ್ಮ ಮೊಬೈಲ್ ಗಳನ್ನು ಸ್ವಿಚ್ ಆಫ್ ಮಾಡಿದ್ದರು. ಗೆಳೆಯರು ಕೂಡ ಶ್ರೇಯಸ್ ಊರಿನ ಆಸುಪಾಸಿನವರೇ ಆಗಿದ್ದರು.
ಬಾಲಕ ಮನೆಗೆ ಬಂದಿಲ್ಲವೆಂದು ಸೋಮವಾರ ಬೆಳಗ್ಗೆ ತಂದೆ ಸೇಸಪ್ಪ ಅವರು ಸೋಮವಾರ ಬೆಳಗ್ಗೆ, ಶ್ರೇಯಸ್ ಜೊತೆಗೆ ತೆರಳಿದ್ದವರ ಮನೆಗೆ ಹೋಗಿದ್ದಾರೆ. ಈ ವೇಳೆ, ಹುಡುಗರು ಶ್ರೇಯಸ್ ಸಮುದ್ರದಲ್ಲಿ ಬಿದ್ದು ಕಾಣೆಯಾಗಿದ್ದನ್ಬು ಬಾಯಿ ಬಿಟ್ಟಿದ್ದಾರೆ. ಶೇಷಪ್ಪ ಬಳಿಕ ಪಣಂಬೂರು ಪೊಲೀಸ್ ಠಾಣೆಗೆ ತೆರಳಿ ನಾಪತ್ತೆ ದೂರನ್ನು ದಾಖಲಿಸಿದ್ದಾರೆ.
ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿ ಪತ್ತೆಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಕೋಸ್ಟ್ ಗಾರ್ಡ್, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ಠಾಣೆಯವರು ಪತ್ತೆಗೆ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶವ ಪತ್ತೆಯಾಗದ ಹಿನ್ನೆಲೆಯಲ್ಲಿ ಜೊತೆಗಿದ್ದ ಸ್ನೇಹಿತರನ್ನು ಪೊಲೀಸರು ಕರೆಸಿ ವಿಚಾರಣೆ ನಡೆಸಿದ್ದಾರೆ.
06-10-26 06:17 pm
HK News Staffer
AI education, D.K. Shivakumar: ಸರ್ಕಾರಿ ಶಾಲಾ ಮ...
06-10-26 09:32 am
ರಾಜ್ಯಕ್ಕೆ 7,142.64 ಕೋಟಿ ರೂ. ಬರ ಪರಿಹಾರ ನೀಡಿ ;...
03-10-26 05:30 pm
Urdu Habba Row: ವಿಧಾನಸೌಧ ಮೆಟ್ಟಿಲುಗಳಲ್ಲಿ ಉರ್ದು...
01-10-26 10:50 pm
‘ಕನ್ನಡದ ಶಿವಮಣಿ’ ಖ್ಯಾತಿಯ ಡ್ರಮ್ಮರ್ ದೇವ್ ನಿಧನ ;...
27-09-26 03:21 pm
06-10-26 02:46 pm
HK News Staffer
Russia, pneumonic plague: ರಷ್ಯಾದಲ್ಲಿ ಹೊಸ ರೀತಿ...
06-10-26 12:58 pm
ಫ್ಲೈದುಬೈ ಹೈಜಾಕ್ ಯತ್ನದ ಹಿಂದೆ ಇರಾನ್ ಕೈವಾಡ ಎಂದ ಟ...
06-10-26 10:11 am
Nigerian aircraft: ನೈಜೀರಿಯಾದಲ್ಲಿ ವಾಯುಪಡೆ ವಿಮಾ...
06-10-26 09:30 am
Emergency Funds: ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಡ...
05-10-26 08:56 pm
05-10-26 10:53 pm
Mangaluru Staffer
Mangalore News, Ekkaru Temple, Tirupati Templ...
05-10-26 12:35 pm
'ಮುಳಿಯ ಜುವೆಲ್ಲರಿ' ಮಾಲೀಕ ಪುತ್ತೂರಿನ ಮುಳಿಯ ಶ್ಯಾಮ...
05-10-26 11:41 am
brijesh chowta: ಹೈಕೋರ್ಟ್ ಪೀಠ ಸ್ಥಾಪನೆಗೆ ಒಗ್ಗಟ್...
03-10-26 09:56 pm
Tammanna Shetty, mysore kambala: ಮೈಸೂರು ದಸರಾ...
03-10-26 01:27 pm
06-10-26 05:36 pm
HK News Staffer
DIG Somashekar : ಕೈದಿ ಪತ್ನಿಯನ್ನೇ ಲೈಂಗಿಕ ಶೋಷಣೆ...
06-10-26 03:27 pm
ಹುಲಿವೇಷದ ತರಬೇತಿಗೆ ಬಂದು ಪಣಂಬೂರು ಬೀಚ್ ತೆರಳಿದ್ದ...
06-10-26 01:23 pm
DIG Somashekar: ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ...
05-10-26 08:26 pm
ಪುತ್ತೂರಿನಿಂದ ಕೇರಳಕ್ಕೆ ಹಿಂಸಾತ್ಮಕ ರೀತಿಯಲ್ಲಿ 11...
05-10-26 08:24 pm